ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ವಿದ್ಯಾರ್ಥಿಗಳೇ ಆಲ್‌ ದಿ ಬೆಸ್ಟ್‌

|
Google Oneindia Kannada News

ಬೆಂಗಳೂರು, ಮಾರ್ಚ್ 21: ಇಂದಿನಿಂದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು ಏಪ್ರಿಲ್ 4ರವರೆಗೂ ನಡೆಯಲಿವೆ.

ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ 3,578 ರಷ್ಟು ಹೆಚ್ಚಿದೆ. ಪ್ರಸಕ್ತ ಸಾಲಿನಲ್ಲಿ 4,651 ವಿಕಲಚೇತನ ಮಕ್ಕಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 1,451 ವಿದ್ಯಾರ್ಥಿಗಳಿಗೆ ಭಾಷಾ ವಿನಾಯಿತಿ ನೀಡಲಾಗಿದೆ ಎಂದರು.

Karnataka SSLC exams begin today

ರಾಜ್ಯದ 2,487 ಪರೀಕ್ಷಾ ಕೇಂದ್ರಗಳ ಪೈಕಿ 1,057 ಕ್ಲಸ್ಟರ್ ರಹಿತ ಹಾಗೂ 1689 ಕ್ಲಸ್ಟರ್ ಕೇಂದ್ರಗಳಿವೆ. ಖಾಸಗಿ ಅಭ್ಯರ್ಥಿಗಳಿಗೆ ಜಿಲ್ಲಾ ಕೇಂದ್ರಗಳಲ್ಲಿ 92 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತ ದಳವನ್ನು ಒಳಗೊಂಡಂತೆ ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ವಿಚಕ್ಷಣ ದಳ ನಿಯೋಜಿಸಲಾಗುತ್ತದೆ.
ಪರೀಕ್ಷಾ ಕೊಠಡಿಯಲ್ಲಿ ಸ್ಮಾರ್ಟ್ ವಾಚ್ ಹಾಗೂ ಮೊಬೈಲ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಕಲು ಪ್ರತಿ (ಜೆರಾಕ್ಸ್) ಅಂಗಡಿಗಳನ್ನು ಮುಚ್ಚಲು ನಿರ್ದೇಶಿಸಲಾಗಿದೆ.

ಮಾರ್ಚ್ 23 ರಿಂದ ಪಿಯುಸಿ ಹಾಗೂ ಏಪ್ರಿಲ್ 10 ರಿಂದ ಎಸ್ಎಸ್ಎಲ್ ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ ಎಂದು ಅವರು ಹೇಳಿದ್ದಾರೆ.

ಮಾ. 21 ರಂದು ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಮಾ.23 ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ -2, ಇಂಜಿನಿಯರಿಂಗ್ ಗ್ರಾಫಿಕ್ಸ್ -2, ಎಲಿಮೆಂಟ್ಸ್ ಆಪ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ , ಅರ್ಥಶಾಸ್ತ್ರ,
ಮಾ. 25 ರಂದು ಗಣಿತ, ಸಮಾಜಶಾಸ್ತ್ರ,
ಮಾ.27 ರಂದು ಇಂಗ್ಲಿಷ್, ಕನ್ನಡ,
ಮಾ.29 ರಂದು ಸಮಾಜ ವಿಜ್ಞಾನ,
ಏಪ್ರಿಲ್ 1 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಅಥವಾ ಹಿಂದೂಸ್ತಾನಿ ಸಂಗೀತ,
ಏಪ್ರಿಲ್ 4 ರಂದು ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು), ಎನ್ಎಸ್ ಕ್ಯೂಎಫ್ ಪರೀಕ್ಷಾ ವಿಷಯಗಳು-ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್ ) ಪರೀಕ್ಷೆಗಳು ನಡೆಯಲಿವೆ.

English summary
The SSLC examinations conducted by the Karnataka Secondary Education Examination Board will commence on Thursday. On Day One, students will take their first language paper. The examinations will be held between 9.30 am and 12.30 pm. Over 8.41 lakh students are appearing for this year's SSLC exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X