SSLC Results 2023: ಫಲಿತಾಂಶ ಯಾವಾಗ? ವಿದ್ಯಾರ್ಥಿಗಳು ರಿಸಲ್ಟ್ ನೋಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಮೇ 05: 2022-2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಶೀಘ್ರವೇ ಹೊರ ಬೀಳಲಿದೆ. ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದ್ದು, ಚುನಾವಣೆಗೂ ಮುನ್ನವೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬೀಳುವುದು ಬಹುತೇಕ ಖಚಿತವಾಗಿದೆ. ಇಂದು(ಮೇ 5)ರಂದು 2022-2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದ ದಿನಾಂಕವನ್ನು ದೃಢೀಕರಿಸುವ ನಿರೀಕ್ಷೆಯಿದೆ.
ವರದಿಗಳ ಪ್ರಕಾರ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) ಅಧಿಕಾರಿಗಳು karresults.nic.in ಮತ್ತು kseab.karnataka.gov.in.ನಲ್ಲಿ SSLC ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸಲಾಗುವುದು ಎಂದು ಹಂಚಿಕೊಂಡಿದ್ದಾರೆ. ಅಲ್ಲದೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 8, 2023 ರಂದು ಘೋಷಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

ಮಾರ್ಚ್ 31ರಿಂದ ಏಪ್ರಿಲ್ 15, 2023ರ ವರೆಗೆ 2022-2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿದ್ದು, ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸದ್ಯ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದ ಮುಂದಿನ ನಿರ್ಧಾರವನ್ನು ತಿಳಿಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ವರದಿಯಾದಂತೆ ಮೇ 8, 2023 ರಂದು ಫಲಿತಾಂಶ ಘೋಷಿಸಿದರೆ, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶವನ್ನು ಪಡೆಯಬಹುದು. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಸಂಖ್ಯೆ, ಹುಟ್ಟಿದ ದಿನಾಂಕ ಹಾಗೂ ಇತರ ವಿವರಗಳನ್ನು ನೀಡ ಬೇಕಾಗುತ್ತದೆ.
ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
* ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್ ತೆರೆಯಬೇಕು.
*ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
*ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು.
*ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.












Click it and Unblock the Notifications