SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ ಸ್ಥಾನ

ಬೆಂಗಳೂರು, ಮೇ 09: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ದೊರೆತಿದ್ದರೆ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಶೇ 94ರ ಫಲಿತಾಂಶ ದಾಖಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದ್ದು, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್‌ ಸುದ್ದಿಗೋಷ್ಟಿಯಲ್ಲಿ ಭಾಗಿಯಾಗಿದ್ದಾರೆ.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ..?

ಮೊದಲು ಶಿಕ್ಷಣ ಇಲಾಖೆಯ ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ, ಬಳಿಕ ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ. ಈ ವೇಳೆ ಹೊಸ ಲಾಗಿನ್ ಪುಟವು ತೆರೆಯುತ್ತದೆ. ಇಲ್ಲಿ ಗಮನವಿರಿಸಿ. ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿದಾಗ ನಿಮ್ಮ ಫಲಿತಾಂಶ ಕಾಣಸಿಗುತ್ತದೆ. ನಿಮ್ಮ ಹೆಸರು ಹಾಗೂ ಫಲಿತಾಂಶವನ್ನು ಸರಿಯಾಗಿ ನೋಡಿಕೊಳ್ಳಿ ಬಳಿಕ ಡೌನ್​ಲೋಡ್‌ಗೆ ಅವಕಾಶವಿದ್ದು, ಡೌನ್​ಲೋಡ್ ಮಾಡಿಕೊಳ್ಳಿ.

Karnataka SSLC Result 2024 SSLC Exam Result Declared
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+