SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ; ಸಮಯ, ವೆಬ್‌ಸೈಟ್ ವಿವರ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ ಎಂದೇ ಗುರುತಿಸಲಾಗುತ್ತದೆ. ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳು ಕೂಡ ಅಷ್ಟೇ ಶಮ್ರ ಹಾಕಿರುತ್ತಾರೆ. ವರ್ಷವಿಡೀ ಓದಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಎದುರುನೋಡುತ್ತಿದ್ದು, ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಆರಂವಾಗಿದೆ.

ಕೆಎಸ್‌ಇಎಬಿ 10ನೇ ತರಗತಿಯ ಫಲಿತಾಂಶಗಳು ಇಂದು (ಗುರುವಾರ) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಘೋಷಣೆ ಮಾಡಿದೆ.

Karnataka SSLC Result 2024 SSLC Result Timings and How to Check Result

ಫಲಿತಾಂಶವನ್ನು ಪರಿಶೀಲನೆ ಮಾಡಲು ವಿದ್ಯಾರ್ಥಿಗಳು ಈಗಾಗಲೇ ಕಾತರದಿಂದ ಕಾಯುತ್ತಿದ್ದಾರೆ. ಹಾಗಾದರೆ ಫಲಿತಾಂಶ ಎಲ್ಲಿ ನೋಡಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಿ

ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ನೇರವಾಗಿ ಫಲಿತಾಂವನ್ನು ಪರಿಶೀಲಿಸಬಹುದು. kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕ ಕೂಡ ಫಲಿತಾಂಶವನ್ನು ನೋಡಬಹುದಾಗಿದೆ.

2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 25ರಂದು ಆರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗಿತ್ತು. ರಾಜ್ಯಾದ್ಯಂತ ಸುಮಾರು 8 ಲಕ್ಷ ಅಭ್ಯರ್ಥಿಗಳು ಕರ್ನಾಟಕ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿ ಕೂಡ ನಡೆಯಲಿದ್ದು ಫಲಿತಾಂಶದ ಬಗ್ಗೆ ಅಂಕಿ ಅಂಶಗಳನ್ನು ಅಧಿಕಾರಿಗಳು ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+