SSLC Result 2026: ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ, ಕ್ಷಣಗಣನೆ ಆರಂಭ

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಅತ್ಯಂತ ಕಾತುರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ತದನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ಅಂಕಗಳನ್ನು ಪರಿಶೀಲಿಸಬಹುದು. ಈ ವರ್ಷ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದ್ದವು. ಒಟ್ಟು 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು, ಅದರಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

SSLC Result 2026

ರಿಸಲ್ಟ್‌ ಎಲ್ಲಿ ಮತ್ತು ಹೇಗೆ ನೋಡುವುದು?

ಮಧ್ಯಾಹ್ನ 12 ಗಂಟೆಯ ನಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in, kseab.karnataka.gov.in ಹಾಗೂ sslc.karnataka.gov.in ನಲ್ಲಿ ವೀಕ್ಷಿಸಬಹುದು. ಫಲಿತಾಂಶವನನು ನೋಡಲು ಈ ಕೆಳಗಿನ ಹಂತವನನು ಅನುಸರಿಸಿ

1. ಮೊದಲಿಗೆ ಸರ್ಕಾರ ನಿಗದಿಪಡಿಸಿದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ

2. ನಂತರ ಮುಖಪುಟದಲ್ಲಿ ಕಾಣಿಸುವ ʼ 'Karnataka SSLC Result 2026' ಎಂಬ ಲಿಂಕ್‌ ಮೇಲೆ ಒತ್ತಿ

3. ಹೊಸ ಪುಟ ತೆರೆಯುತ್ತದೆ. ಅದರಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಸರಿಯಾಗಿ ನಮೂದಿಸಿ.

4. ಬಳಿಕ 'Submit' ಬಟನ್ ಮೇಲೆ ಒತ್ತಿ

5. ಈಗ ನಿಮ್ಮ ಪರದೆಯ ಮೇಲೆ ನಿಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬರುತ್ತದೆ.

6. ಕೊನೆಗೆ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್ ತೆಗೆದುಕೊಳ್ಳಿ.

SSLC Result: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಮಧು ಬಂಗಾರಪ್ಪ
SSLC Result: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಮಧು ಬಂಗಾರಪ್ಪ

ವೆಬ್‌ಸೈಟ್ ಮಾತ್ರವಲ್ಲ, ಇತರ ಮಾರ್ಗಗಳಲ್ಲೂ ರಿಸಲ್ಟ್ ಲಭ್ಯ:

ಒಂದೇ ಬಾರಿಗೆ ಲಕ್ಷಾಂತರ ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡುವುದರಿಂದ ಸರ್ವರ್ ಡೌನ್ ಆಗುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ನೀವು ಕೇಂದ್ರ ಸರ್ಕಾರದ 'ಡಿಜಿಲಾಕರ್' ಆ್ಯಪ್ ಅಥವಾ ವೆಬ್‌ಸೈಟ್ ಮೂಲಕವೂ ನಿಮ್ಮ ಡಿಜಿಟಲ್ ಅಂಕಪಟ್ಟಿಯನ್ನು ಪಡೆಯಬಹುದು. ಇದಲ್ಲದೆ, ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ತಿಳಿಯಲು ಮಂಡಳಿ ಅವಕಾಶ ಕಲ್ಪಿಸಿದೆ.

ಮುಂದಿನ ಶಿಕ್ಷಣದ ಹಾದಿಯನ್ನು ನಿರ್ಧರಿಸುವ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರತಿ ವಿಷಯದಲ್ಲಿ ಕನಿಷ್ಠ 33% ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರೆ ಅಥವಾ ಅನುತ್ತೀರ್ಣರಾದರೆ, ಅವರು ಆತಂಕ ಪಡುವ ಅಗತ್ಯವಿಲ್ಲ. ಅಂಥವರಿಗಾಗಿ ಮಂಡಳಿಯು ಶೀಘ್ರದಲ್ಲೇ ಪೂರಕ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಿದೆ. ಎಲ್ಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭವಾಗಲಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+