SSLC Result 2024: ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ದಿನಾಂಕ ಘೋಷಣೆ: ರಿಸಲ್ಟ್ ನೋಡುವುದೇಗೆ? ಇಲ್ಲಿದೆ ವಿವರ
ಬೆಂಗಳೂರು, ಏಪ್ರಿಲ್ 11: ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 10 ರಂದು ಪ್ರಕಟಗೊಂಡಿದ್ದು, ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದಾರೆ.
ಹೌದು, 2023-24 ನೇ ಸಾಲಿನ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ ಇವರ ಪೋಷಕರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಒಟ್ಟು ಮೂರು ಪರೀಕ್ಷೆಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಡೆಸಲಾಗಿದೆ. ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದು ಪ್ರಾರಂಭವಾಗಿದ್ದು, ಏಪ್ರಿಲ್ ಆರರಂದು ಅಂತ್ಯವಾಗಿದೆ.

ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದಷ್ಟು ಬೇಗನೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.
ಪೂರಕ ಪರೀಕ್ಷೆಯಲ್ಲದ ಮೂರು ಪರೀಕ್ಷೆಗಳನ್ನು ಈ ಬಾರಿ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನಡೆಸುವ ಹಿನ್ನೆಲೆಯಲ್ಲಿ ಬಹುವೇಗ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಬೇಕಾದಂತಹ ಅನಿವಾರ್ಯತೆ ಉಂಟಾಗಿದ್ದು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಮಂಡಳಿಯು ಏಪ್ರಿಲ್ 15ರಿಂದಲೇ ನಡೆಸಲು ಕ್ರಮ ಕೈಗೊಂಡಿದೆ.
ಏಪ್ರಿಲ್ 15 ರಂದು ಕರ್ನಾಟಕದ ರಾಜ್ಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭಗೊಳ್ಳಲಿದೆ. ಅಲ್ಲದೇ ಎಲ್ಲ ಮೂಲಸೌಕರ್ಯಗಳನ್ನು ಮೌಲ್ಯಮಾಪಕರಿಗೆ ಕಲ್ಪಿಸಬೇಕು, ಮೌಲ್ಯಮಾಪಕರು ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ಕಡ್ಡಾಯವಾಗಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಮೌಲ್ಯಮಾಪನ ಇನ್ನೂ ಪ್ರಾರಂಭವಾಗಿಲ್ಲ ಎಂದು ಕೆಎಸ್‌ಇಎಬಿ ಅಧಿಕಾರಿ ತಿಳಿಸಿದ್ದಾರೆ. 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ - kseeb.kar.nic.in ಮತ್ತು karresults.nic.in ನಲ್ಲಿ ಪರಿಶೀಲಿಸಬಹುದು.
2023ರಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಪರೀಕ್ಷೆ ಬರೆದು 7,00,619 ಮಂದಿ ಉತ್ತೀರ್ಣರಾಗಿದ್ದರು. ಚಿತ್ರದುರ್ಗ ಜಿಲ್ಲೆ ಶೇಕಡಾ 96.8 ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ಕರ್ನಾಟಕದಲ್ಲಿ ಪ್ರಥಮ ಸ್ಥಾನದಲ್ಲಿದೆ, ಮಂಡ್ಯ (ಶೇ 96.7) ಮತ್ತು ಹಾಸನ (ಶೇ 96.6) ನಂತರದ ಸ್ಥಾನದಲ್ಲಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದರಲ್ಲಿ ರಿಸಲ್ಟ್ ನೋಡುವುದೇಗೆ?
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ತಿಳಿದುಕೊಳ್ಳಬೇಕಾದರೆ https://kseab.karnataka.gov.in ಅಥವಾ https://karresults.nic.in ವೆಬ್ ಸೈಟ್ ಗೆ ಭೇಟಿ ನೀಡಿ ತಮ್ಮ ರಿಜಿಸ್ಟರ್ ಅನ್ನು ನಮೂದಿಸುವುದರ ಮೂಲಕ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ.












Click it and Unblock the Notifications