ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 12 ಮಧ್ಯಾಹ್ನ 1ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 12ರಂದು ಪ್ರಕಟಗೊಳ್ಳಲಿದೆ ಎಂಬುದು ಖಚಿತವಾಗಿದೆ. ಈ ಬಗ್ಗೆ ಪರೀಕ್ಷಾ ಮಂಡಳಿ ಅಧಿಕಾರಿ ಒನ್ ಇಂಡಿಯಾ ಕನ್ನಡದ ಜತೆ ಮಾತನಾಡಿ, ಫಲಿತಾಂಶದ ದಿನದ ಬಗ್ಗೆ ಖಾತ್ರಿ ಪಡಿಸಿದ್ದಾರೆ

|
Google Oneindia Kannada News

ಬೆಂಗಳೂರು, ಮೇ 10: ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಇದ್ದ ಗೊಂದಲ ಪರಿಹಾರವಾಗಿದ್ದು, ಮೇ 12ರಂದು ಮಧ್ಯಾಹ್ನ 1ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಯಂತಹ ಯಾವುದೇ ಅಹಿತಕರ ಘಟನೆಗಳು ಎಲ್ಲೂ ನಡೆದಿಲ್ಲ.

kseeb.kar.nic.in, results.nic.in, examresults.net ಈ ವೆಬ್ ಸೈಟ್ ಗಳಲ್ಲಿ ಫಲಿತಾಂಶವನ್ನು ನೋಡಬಹುದು.

ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆದ ಎಲ್ಲಾ ವಿಷಯಗಳ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ. ಏಪ್ರಿಲ್ 20ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿತ್ತು. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಅಧಿಕಾರಿ ಈಶ್ವರಯ್ಯ ಅವರನ್ನು ಈ ಬಗ್ಗೆ ವಿಚಾರಿಸಲು ಒನ್ ಇಂಡಿಯಾ ಕನ್ನಡದಿಂದ ಕರೆ ಮಾಡಲಾಗಿತ್ತು.[ಮೇ 11ರಂದು ಕರ್ನಾಟಕ ಪಿಯುಸಿ 2017 ಪರೀಕ್ಷೆ ಫಲಿತಾಂಶ]

Karnataka SSLC result will be announce on May 12th

ಫಲಿತಾಂಶ ಪ್ರಕಟಣೆಯ ಮುಂಚೆ ಕೈಗೊಳ್ಳಬೇಕಾದ ಕೆಲಸಗಳು ಅಂತಿಮ ಹಂತದಲ್ಲಿವೆ. ಮೇ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ಘೋಷಣೆ ಮಾಡಿಯಾಗಿದೆ. ಹಗಲು-ರಾತ್ರಿ ಅದಕ್ಕಾಗಿಯೇ ಶ್ರಮಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಅಲ್ಲಿಗೆ ಮೇ 12ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಖಚಿತ ಎಂಬಂತಾಗಿದೆ.[ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಕನ್ನಡ ಹಾಡು, ಕಚಡಾ ಇಂಗ್ಲಿಷು, ದೈನೇಸಿ ಮನವಿ]

ಮೇ 11ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಎಂಬುದು ಖಚಿತವಾಗಿದೆ. ಅಂದು ಮಧ್ಯಾಹ್ನ 3 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮರುದಿನ ಆಯಾ ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ. ಈ ಬಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಮಾಹಿತಿ ನೀಡಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳಿಗೆ ಒನ್ ಇಂಡಿಯಾ ಕನ್ನಡದ ಕಡೆಯಿಂದ ಬೆಸ್ಟ್ ಆಫ್ ಲಕ್. ಮಂಡಳಿಯ ಅಧಿಕಾರಿಗಳಿಗೆ ವಿದ್ಯಾರ್ಥಿಗಳ ಪರವಾಗಿ ಒಂದು ಥ್ಯಾಂಕ್ಸ್

English summary
Karnataka Secondary Education Examination Board will announce SSLC 2017 results on May 12th
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X