ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ ತಿಂಗಳ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ

|
Google Oneindia Kannada News

ಬೆಂಗಳೂರು, ಏ.24: ಮೇ ತಿಂಗಳ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಂಗಳವಾರ ಪೂರ್ಣಗೊಂಡಿದೆ. ಏಪ್ರಿಲ್‌ 30 ರಿಂದ ಮೇ 2 ರ ಒಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದರು. 10ನೇ ತರಗತಿ ಪರೀಕ್ಷೆ ಫಲಿತಾಂಶವು ಪ್ರಕಟವಾದ ಬಳಿಕ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ karresults.nic.inನಲ್ಲಿ ಕಾಣಿಸಲಿದೆ.

ಏ.10ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ, ನಿಷೇಧಾಜ್ಞೆ ಜಾರಿ ಏ.10ರಿಂದ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ, ನಿಷೇಧಾಜ್ಞೆ ಜಾರಿ

ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಫಲಿತಾಂಶಗಳ ವೆಬ್‌ಸೈಟ್‌ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

Karnataka SSLC result will be announced on May first week

ದತ್ತಾಂಶ ಕ್ರೋಢೀಕರಣ, ಅಂಕಗಳ ತಾಳೆ-ದೃಢೀಕರಣ ಹಾಗೂ ಲೋಪದೋಷಗಳ ತಿದ್ದುಪಡಿ ಕಾರ್ಯ ಬಾಕಿಯಿದ್ದು, ವಾರದ ಒಳಗೆ ಈ ಪ್ರಕ್ರಿಯೆಯೂ ಕೂಡ ಪೂರ್ಣಗೊಳ್ಳಲಿದೆ. ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

English summary
Karnataka Education department secretary announced that SSLC result will be announced between April 30-May 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X