ಮೇ 2ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಬೆಂಗಳೂರು, ಏಪ್ರಿಲ್ 29: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ಮೇ 2ರಂದು ಪ್ರಕಟವಾಗಲಿದೆ ಎಂದು ಎಸ್‌ಎಸ್‌ಎಲ್‌ಸಿ ಬೋರ್ಡ್ ನಿರ್ದೇಶಕಿ ವಿ. ಸುಮಂಗಲಾ ಮಾಹಿತಿ ನೀಡಿದ್ದಾರೆ.

ಪರೀಕ್ಷೆಯು ಮಾರ್ಚ್ 22ರಿಂದ ಏಪ್ರಿಲ್ 4ರವರೆಗೆ ನಡೆದಿತ್ತು.10ನೇ ತರಗತಿ ಪರೀಕ್ಷೆ ಫಲಿತಾಂಶವು ಪ್ರಕಟವಾದ ಬಳಿಕ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.inನಲ್ಲಿ ಲಭ್ಯವಾಗಲಿದೆ. ಮೇ 3ರಂದು ಆಯಾ ಶಾಲೆಯಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯದ ಒಟ್ಟು 5, 202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.












Click it and Unblock the Notifications