Get Updates
Get notified of breaking news, exclusive insights, and must-see stories!

ಎಸ್‌ಎಸ್‌ಎಲ್‌ಸಿ; 501 ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶ

ಬೆಂಗಳೂರು, ಆಗಸ್ಟ್ 10 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಇಂದು ಆನ್‌ಲೈನ್‌ನಲ್ಲಿ ಫಲಿತಾಂಶ ಲಭ್ಯವಿದ್ದು, ಮೊಬೈಲ್‌ನಲ್ಲಿ ಎಸ್‌ಎಂಎಸ್ ರೂಪದಲ್ಲಿಯೂ ಫಲಿತಾಂಶವನ್ನು ಪಡೆಯಬಹುದಾಗಿದೆ.

Recommended Video

      SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada

      ಸೋಮವಾರ ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಘೋಷಣೆ ಮಾಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದ್ದು, ಯಾದಗಿರಿ ಜಿಲ್ಲೆಯ ಕೊನೆಯ ಸ್ಥಾನದಲ್ಲಿದೆ.

      ಈ ಬಾರಿ 501 ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ. 4 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಈ ಬಾರಿ ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.

      Karnataka SSLC Results 2020: 501 Govt schools achieved 100% results

      ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ 8,11,050 ವಿದ್ಯಾರ್ಥಿಗಳ ಪೈಕಿ 5,82,316 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

      ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ದ್ವಿತೀಯ, ಮಧುಗಿರಿ ಶೈಕ್ಷಣಿಕ ಜಿಲ್ಲೆ ತೃತೀಯ ಸ್ಥಾನಪಡೆದಿದೆ. ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಇದೆ.

      2018-19ರಲ್ಲಿ ನಗರ ಪ್ರದೇಶದಲ್ಲಿ 70.05 ರಷ್ಟು ಫಲಿತಾಂಶ ಬಂದಿತ್ತು. 2019-20ರಲ್ಲಿ 73.41ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ 2018-19ರಲ್ಲಿ 76.67ರಷ್ಟು ಫಲಿತಾಂಶ ಬಂದಿತ್ತು. 2019-20ರಲ್ಲಿ 77.18ರಷ್ಟು ಫಲಿತಾಂಶ ಬಂದಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+