ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

|
Google Oneindia Kannada News

ಬೆಂಗಳೂರು, ಆಗಸ್ಟ್ 10: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ.

Recommended Video

SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada

ಕೊರೊನಾ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆಸಿ, ಸರ್ಕಾರ ಸಾಹಸ ಮಾಡಿದಂತಾಗಿತ್ತು. ಇದೀಗ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 3 ಗಂಟೆ ನಂತರ ಇಲಾಖೆ ವೆಬ್‍ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

52,219 ಮೌಲ್ಯಮಾಪಕರು ಸುಮಾರು 8 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿದ್ದಾರೆ. ಜುಲೈ 14 ರಿಂದ ಮೌಲ್ಯಮಾಪನ ಆರಂಭವಾಗಿತ್ತು. ಬೆಂಗಳೂರು ನಗರ ಹಾಗೂ ಗ್ರಾಮಾಂತರದಲ್ಲಿ ಲಾಕ್‌ಡೌನ್ ಇದ್ದ ಕಾರಣ ಎರಡು ದಿನ ತಡವಾಗಿ ಆರಂಭವಾಗಿತ್ತು ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 71.80 ಶೇಕಡಾವಾರು ಫಲಿತಾಂಶವಾಗಿದೆ. ಕಳೆದ ವರ್ಷ ಶೇ.73.70 ರಷ್ಟು ಫಲಿತಾಂಶವಾಗಿತ್ತು. 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸರ್ಕಾರಿ ಶಾಲೆಗಳ ಫಲಿತಾಂಶ ಶೇ. 72.79 ಅಷ್ಟಿದೆ. ಅನುದಾನಿತ ಶಾಲೆಗಳು 70.60, ಶೇ. 82.31, 2,28,734 ಅನುತ್ತೀರ್ಣರಾಗಿದ್ದಾರೆ.

ಬಾಲಕರು ಶೇ.66.41 ಉತ್ತೀರ್ಣರಾಗಿದ್ದಾರೆ 77.74 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ, 625 ಅಂಕಕ್ಕೆ 625 ಅಂಕವನ್ನು ಆರು ವಿದ್ಯಾರ್ಥಿಗಳು ಪಡೆದಿದ್ದಾರೆ. ಕಳೆದ ಬಾರಿ ಇಬ್ಬರು ವಿದ್ಯಾರ್ಥಿಗಳು ಸಂಪೂರ್ಣ ಅಂಕ ತೆಗೆದುಕೊಂಡಿದ್ದರು.

ಎಸ್ಎಸ್ಎಲ್ ಸಿ ಫಲಿತಾಂಶ ತಿಳಿಯುವ ಬಗ್ಗೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿಎಸ್ಎಸ್ಎಲ್ ಸಿ ಫಲಿತಾಂಶ ತಿಳಿಯುವ ಬಗ್ಗೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಅಲ್ಲದೆ ವಿದ್ಯಾರ್ಥಿಗಳ ಪೋಷಕರ ಮೊಬೈಲ್‍ಗೆ ಫಲಿತಾಂಶವನ್ನು ಎಸ್‍ಎಂಎಸ್ ಮಾಡಲು ಸಹ ಎಸ್‍ಎಸ್‍ಎಲ್‍ಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ.

SSLC Result 2020 Karnataka Released: Check Topper List

ಜುಲೈ 3ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿದಿದ್ದು, ಕೊರೊನಾ ಮಧ್ಯೆ ಯಶಸ್ವಿಯಾಗಿ ನಡೆದಿದ್ದ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನವನ್ನು ಸಹ ಅಷ್ಟೇ ವೇಗವಾಗಿ ಮುಗಿಸಲಾಗಿದೆ. ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ಲಭ್ಯವಾಗೋ ವೆಬ್ ಸೈಟ್ ವಿವರ www.kseeb.kar.nic.in ಹಾಗೂ www.karresults.nic.in ವೆಬ್‍ಸೈಟ್‍ಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶ ನೋಡಬಹುದಾಗಿದೆ. ಅಲ್ಲದೆ ಪೋಷಕರ ಮೊಬೈಲ್‍ಗೆ ಫಲಿತಾಂಶದ ಎಸ್‍ಎಂಎಸ್ ಸಹ ಬರಲಿದೆ.

ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ 2020 ಫಲಿತಾಂಶ ಪ್ರಕಟ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಂದ ಸುದ್ದಿಗೋಷ್ಠಿ, ಕರ್ನಾಟಕದಲ್ಲಿ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು,
8,11,050 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡರು, 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಪರೀಕ್ಷೆ ಮೌಲ್ಯಮಾಪನ ನಡೆಸಲಾಯಿತು.

ವಿದ್ಯಾರ್ಥಿಗಳ ಮೊಬೈಲ್ ನಂಬರ್ ಗಳಲ್ಲಿ ರಿಸಲ್ಟ್ ನೋಡಬಹುದು, www.kseeb.kar.nic.in ಹಾಗೂ www.karresults.nic.in ಫಲಿತಾಂಶ ಪ್ರಕಟವಾಗಿದೆ.

English summary
Karnataka Secondary Education Examination Board (KSEEB) is declared the Secondary School Level Certificate (SSLC) result 2020 at 3 pm. Students can check their score on the official website karresults.nic.in once the results are out
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X