• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಗಸ್ಟ್‌ 10ರ ಒಳಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಜುಲೈ 23: ಕರ್ನಾಟಕ ಎಸ್‌ಎಸ್‌ಎಲ್‌ಸಿ 2021ರ ಫಲಿತಾಂಶ ಆಗಸ್ಟ್ 10ರ ಒಳಗೆ ಬರಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದು ಮುಕ್ತಾಯವಾಗಿದ್ದು, ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟ ಮಾಡಲಿದ್ದೇವೆ.

 SSLC ಪರೀಕ್ಷೆ ಬರೆದ 55 ವರ್ಷದ ಕೆಎಸ್‌ಆರ್‌ಪಿ ಸಿಬ್ಬಂದಿ SSLC ಪರೀಕ್ಷೆ ಬರೆದ 55 ವರ್ಷದ ಕೆಎಸ್‌ಆರ್‌ಪಿ ಸಿಬ್ಬಂದಿ

ಕೋವಿಡ್​ ಆತಂಕದ ನಡುವೆ ಪರೀಕ್ಷೆ ನಡೆಸುವ ಹಿಂದೆ ಯಾವುದೇ ದುರುದ್ದೇಶ ನಮಗಿರಲಿಲ್ಲ. ಸರ್ಕಾರ ಸದ್ದುದ್ದೇಶದಿಂದ ಸಕಲ ಮುನ್ನೆಚ್ಚರಿಕೆ ಕ್ರಮದೊಂದಿಗೆ ಪರೀಕ್ಷೆ ನಡೆಸಿದೆ. ಇಂದು ಯಶಸ್ವಿಯಾಗಿ ಪರೀಕ್ಷೆ ಮುಗಿದಿದ್ದು, ಈ ಪರೀಕ್ಷೆ ಯಶಸ್ಸಿಗೆ ಕಾರಣರಾದ ನಾಡಿನ ಎಲ್ಲಾ ಶಿಕ್ಷಕ ವೃಂದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಹಲವು ಸಂಘ ಸಂಸ್ಥೆಗಳು ನಮ್ಮ ಜೊತೆ ಕೈ ಜೋಡಿಸಿದೆ. ಎಲ್ಲಾ‌ ಶಾಸಕರು ಶಿಕ್ಷಣ ಇಲಾಖೆ ಜೊತೆ ಸಹಕಾರದ ಜೊತೆ ಬೆಂಬಲ ನೀಡಿದ್ದು, ಅವರಿಗೆ ಧನ್ಯವಾದಗಳು ತಿಳಿಸುತ್ತೇನೆ ಎಂದು ಹೇಳಿದರು.

   Modi's Master Plan, Gujarat ರೀತಿಯಲ್ಲೆ Karnataka ನಾಯಕರು ಮೋಸ ಹೋಗ್ತಾರಾ? | Oneindia Kannada
    ಆತಂಕದ ನಡುವೆಯೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

   ಆತಂಕದ ನಡುವೆಯೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

   ಮೂಳೆ ಸವೆತ ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಕಾವೇರಿಪುರದ ಆರ್‌.ಎ.ಎಸ್ ಕಾನ್ವೆಂಟ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾಳೆ. ಮೊದಲ ಪರೀಕ್ಷೆ ಬರೆದು ಕಡಿಮೆ ಅಂಕಗಳು ಬರಬಹುದೆಂಬ ಭೀತಿಯಿಂದ ಅಜ್ಜಿಗೆ ತಂದಿದ್ದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಕೆಂಚನಾಲಾ ಗ್ರಾಮದ ವಿದ್ಯಾರ್ಥಿನಿ ಗುರುವಾರದ ಪರೀಕ್ಷೆಗೆ ಹಾಜರಾಗಿದ್ದಾಳೆ ಎಂದು ಮಾಹಿತಿ ನೀಡಿದರು.

    ಗಾಯಗೊಂಡಿದ್ದರೂ ಪರೀಕ್ಷೆ ಬರೆದ ವಿದ್ಯಾರ್ಥಿ

   ಗಾಯಗೊಂಡಿದ್ದರೂ ಪರೀಕ್ಷೆ ಬರೆದ ವಿದ್ಯಾರ್ಥಿ

   ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಥಣಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾದರು. ಇಬ್ಬರು ವಿದ್ಯಾರ್ಥಿಗಳಲ್ಲಿ ಮಲ್ಲಿಕಾರ್ಜುನ್ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ, ಮತ್ತೊಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದಾರೆ.

    ಪರೀಕ್ಷೆಗೆ ಶೇ.99.65ರಷ್ಟು ಹಾಜರಾತಿ

   ಪರೀಕ್ಷೆಗೆ ಶೇ.99.65ರಷ್ಟು ಹಾಜರಾತಿ

   ಈ ವರ್ಷಧಾರೆ ಸಾರಿಗೆ ಕಾರಣದಿಂದ ಯಾವುದೇ ಮಕ್ಕಳು ಗೈರು ಆಗದೇ ಶೇ 99.65ರಷ್ಟು ಹಾಜರಾತಿಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

   ಮಕ್ಕಳು ಕೂಡ ಸಂತೋಷ ಮತ್ತು ನಿರಾಳತೆಯೊಂದಿಗೆ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಅಬ್ಬರದ ಮಳೆಯ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆದಿದೆ, ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚು ಇದೆ.
    ವಿಶೇಷ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ

   ವಿಶೇಷ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ

   ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 152 ವಿದ್ಯಾರ್ಥಿಗಳು ಭಾಷಾ ವಿಷಯಗಳ ಪರೀಕ್ಷೆ ಬರೆದರು. 10,693 ವಲಸೆ ವಿದ್ಯಾರ್ಥಿಗಳು ತಮಗೆ ಸಮೀಪದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡಿದ್ದರು.

   2,870 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿದ್ದು ಪರೀಕ್ಷೆಗೆ ಹಾಜರಾದರು. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಕೇರಳ ಮಹಾರಾಷ್ಟ್ರ, ಮತ್ತು ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಒಟ್ಟು 706 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು' ಎಂದರು.

   English summary
   Karnataka SSLC exams (Class 10) results will likely be declared by August 10, Karnataka Primary and Secondary Education Minister S Suresh Kumar said. The SSLC exams (Class 10) concluded on Thursday .
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X