SSLC ಫಲಿತಾಂಶ:ಕುಮಾರಸ್ವಾಮಿ, ಪರಮೇಶ್ವರ್ ಅವರಿಂದ ಅಭಿನಂದನೆ
Recommended Video
ಬೆಂಗಳೂರು, ಏಪ್ರಿಲ್ 29: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.
ಫಲಿತಾಂಶದ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಕಳೆದ ಬಾರಿಗಿಂತ ಈ ಸಲ ಫಲಿತಾಂಶ ಸ್ವಲ್ಪ ಹೆಚ್ಚಳವಾಗಿರುವುದು ಸಂತೋಷದ ವಿಷಯ. ಬಾರಿ ಹೆಚ್ಚಿನ ಪರಿಶ್ರಮ ವಹಿಸಿ ಪರೀಕ್ಷೆ ಎದುರಿಸಿ, ಯಶಸ್ವಿಯಾಗಿ ಎಂದು ಸಲಹೆ ನೀಡಿದ್ದಾರೆ.

ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷದ ವಿಷಯ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಶಾಲೆಗಳಿಗೆ ಅಭಿನಂದನೆಗಳು. ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದುವ ಅಗತ್ಯವಿಲ್ಲ. ಮುಂದಿನ ಬಾರಿ ಹೆಚ್ಚಿನ ಪರಿಶ್ರಮ ವಹಿಸಿ ಪರೀಕ್ಷೆ ಎದುರಿಸಿ, ಯಶಸ್ವಿಯಾಗಿ.#SSLC
— H D Kumaraswamy (@hd_kumaraswamy) April 30, 2019
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶ ತ್ವರಿತವಾಗಿ ಪ್ರಕಟವಾಗುವ ಮೂಲಕ ಪಾಲಕರು ಹಾಗೂ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಯಶಸ್ವಿಯಾಗಿ ನಿರ್ವಹಿಸಿದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನನ್ನ ಹಾರ್ದಿಕ ಶುಭಾಶಯಗಳು.
— Dr. G Parameshwara (@DrParameshwara) April 30, 2019
ಈ ಬಾರಿ ರಾಜ್ಯದಲ್ಲಿ ಶೇ 73.7 ಫಲಿತಾಂಶ ದೊರೆತಿರುವುದು ಹೆಮ್ಮೆಯ ವಿಚಾರ.
ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ಮತ್ತೊಮ್ಮೆ ಪ್ರಯತ್ನಿಸಿದರೆ ಉತ್ತಮ ಫಲಿತಾಂಶ ಸಿಗುವುದು ಖಂಡಿತ. ನನ್ನ ಶುಭ ಹಾರೈಕೆಗಳು.
ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಕೂಡ ಟ್ವೀಟ್ ಮಾಟಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನನ್ನ ಹಾರ್ದಿಕ ಶುಭಾಶಯಗಳು. ಈ ಬಾರಿ ರಾಜ್ಯದಲ್ಲಿ ಶೇ 73.7 ಫಲಿತಾಂಶ ದೊರೆತಿರುವುದು ಹೆಮ್ಮೆಯ ವಿಚಾರ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ಮತ್ತೊಮ್ಮೆ ಪ್ರಯತ್ನಿಸಿದರೆ ಉತ್ತಮ ಫಲಿತಾಂಶ ಸಿಗುವುದು ಖಂಡಿತ ಎಂದಿದ್ದಾರೆ.












Click it and Unblock the Notifications