SSLC 2016 : 4 ಗಂಟೆ ನಂತರ ಸರ್ಕಾರಿ ವೆಬ್ ಸೈಟ್ ನಲ್ಲಿ ರಿಸಲ್ಟ್

ಬೆಂಗಳೂರು, ಮೇ, 16: ವಿದ್ಯಾರ್ಥಿಗಳ ಭವಿಷ್ಯದ ದಿಕ್ಕು ಬದಲಿಸುವ ಎಸ್ ಎಸ್ ಎಲ್ ಸಿ ಫಲಿತಾಂಶ ಸೋಮವಾರ, ಮೇ 16 ರಂದು ಮಧ್ಯಾಹ್ನ ಪ್ರಕಟವಾಗಲಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ ಸೈಟ್‌ನಲ್ಲಿಂದು ಸೋಮವಾರ(ಮೇ 16) ಪ್ರಕಟಿಸಲಾಗುವುದು ಎಂದು ಮಂಡಳಿ ನಿರ್ದೇಶಕಿ ಯಶೋದಾ ಬೋಪಣ್ಣ ತಿಳಿಸಿದ್ದಾರೆ.

ಈ ಸಾರಿ ಯಾವುದೇ ಖಾಸಗಿ ವೆಬ್ ತಾಣಗಳಲ್ಲಿ ಎಸ್ಎಸ್ ಎಲ್ ಸಿ ಫಲಿತಾಂಶ ಲಭ್ಯವಾಗುವುದಿಲ್ಲ. ಕಳೆದ ವರ್ಷಗಳಲ್ಲಿ ಕಂಡುಬಂದ ಗೊಂದಲದ ಕಾರಣ ಸರ್ಕಾರ ಖಾಸಗಿಯವರಿಗೆ ಫಲಿತಾಂಶ ಪ್ರಕಟಣೆ ಮಾಡಲು ಅವಕಾಶ ನೀಡಿಲ್ಲ.

ಸೋಮವಾರ ಸಂಜೆ 4ಗಂಟೆ ಸುಮಾರಿಗೆ ಫಲಿತಾಂಶ ಪ್ರಕಟವಾಗಲಿದೆ. www.sslc.kar.nic.in ಮತ್ತು www.karresults.nic.in ನಲ್ಲಿ ಮಾತ್ರ ಫಲಿತಾಂಶ ಪ್ರಕಟಿಸಲಾಗುವುದು. ಮಂಗಳವಾರ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. [SSLC ಫಲಿತಾಂಶ ಆನ್ ಲೈನ್ ನಲ್ಲಿ ಈಗ ಲಭ್ಯ]

sslc

ಸೋಮವಾರ ಮಧ್ಯಾಹ್ನ 3ಗಂಟೆಗೆ ಕರೆಯಲಾಗಿರುವ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಸಂಜೆ 4 ಗಂಟೆಯ ಬಳಿಕ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಮೇ 17ರಂದು ಅಂದರೆ ಮಂಗಳವಾರ ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.[ಪಿಯು ಪ್ರಶ್ನೆ ಪತ್ರಿಕೆ ಕದ್ದವರ ಪುಲ್ ಡಿಟೇಲ್ಸ್]

ಸುಮಾರು 8 ಲಕ್ಷ ವಿದ್ಯಾರ್ಥಿಗಳು ಈ ಸಾರಿ ಪರೀಕ್ಷೆ ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+