SSLC ಫಲಿತಾಂಶ ಪ್ರಕಟ: ಆನ್ಲೈನ್ ನಲ್ಲಿ ನೋಡುವುದು ಹೇಗೆ?
Recommended Video

SSLC Results 2018 : ಮೇ 7ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ | ಆನ್ಲೈನ್ ನಲ್ಲಿ ಚೆಕ್ ಮಾಡೋದು ಹೇಗೆ?
ಬೆಂಗಳೂರು, ಮೇ 06: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು (ಮೇ 7) ಪ್ರಕಟವಾಗಲಿದೆ. ಸೋಮವಾರ ಬೆಳಿಗ್ಗೆ 11 ಗಂಟೆಯ ನಂತರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶವನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಿದೆ.
ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಒಟ್ಟು 8,54, 424 ವಿದ್ಯಾರ್ಥಿಗಳು ಬರೆದಿದ್ದರು. ಏಪ್ರಿಲ್ 15 ರಿಂದ 25 ರವರೆಗೆ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆದಿತ್ತು.
ಫಲಿತಾಂಶ ನೋಡಲು ಈ ಕೆಳಗಿನ ವೆಬ್ ತಾಣಗಳಿಗೆ ಭೇಟಿ ಕೊಡಿ: http://karresults.nic.in/ ಮತ್ತು http://kseeb.kar.nic.in/

* ಇಂದು ಬೆಳಿಗ್ಗೆ 11 ಗಂಟೆಯ ನಂತರ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.
* ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಲಿಂಕ್ ಕ್ಲಿಕ್ ಮಾಡಿ
* ನಿಮ್ಮ ರೋಲ್ ನಂಬರ್ ಹಾಗೂ ಇನ್ನಿತರ ಮಾಹಿತಿ ನಮೂದಿಸಿ
* submit ಬಟನ್ ಒತ್ತಿ.
* ಫಲಿತಾಂಶದ ಪ್ರತಿ ಪಡೆಯಲು ಪ್ರಿಂಟ್ ಔಟ್ ತೆಗೆದುಕೊಳ್ಳಿ












Click it and Unblock the Notifications