SSLC ಪೂರಕ ಪರೀಕ್ಷೆ 2016: ಫಲಿತಾಂಶ ಪ್ರಕಟ
ಬೆಂಗಳೂರು, ಜುಲೈ, 14: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ವೆಬ್ ತಾಣದಲ್ಲಿ ಲಭ್ಯವಿದೆ. ಜೂನ್ 20ರಿಂದ 25ರ ವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
www.sslc.kar.nic.in, karresults.nic.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯವಿದೆ. ಜುಲೈ15 ರಂದು ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.[ಎಸ್ಸೆಸ್ಸೆಲ್ಸಿ ಪಾಸಾದವರೆ ಒಳ್ಳೆ ಅವಕಾಶ, ಕೂಡಲೇ ಅರ್ಜಿ ಹಾಕಿ]
ಫಲಿತಾಂಶವನ್ನು ಇಲ್ಲಿ ವೀಕ್ಷಿಸಬಹುದು

ಮಾರ್ಚ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗಾಗಿ ಇಲಾಖೆ ಜೂನ್ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಿತ್ತು. ಮೇ 16 ರಂದು ಪ್ರೌಢ ಶಿಕ್ಷಣ ಮಂಡಳಿ ಎಸ್ ಎಸ್ ಎಸಲ್ ಸಿ ಫಲಿತಾಂಶವನ್ನು ಪ್ರಕಟ ಮಾಡಿತ್ತು.[SSLC ಟಾಪರ್ ಶಿರಸಿಯ ಮಹಿಮಾ ಭಟ್ ಸಂದರ್ಶನ]
ರಾಜ್ಯದಲ್ಲಿ ಒಟ್ಟಾರೆ ಶೇ. 79.16 ಫಲಿತಾಂಶ ಬಂದಿತ್ತು. ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಬಳ್ಳಾರಿಗೆ ಕೊನೆಯ ಸ್ಥಾನ ಸಿಕ್ಕಿತ್ತು. 52 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದ್ದು ಭದ್ರಾವತಿಯ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ರಂಜನ್ ಎಸ್ 625ಕ್ಕೆ 625 ಗಳಿಸಿ ಟಾಪರ್ ಆಗಿ ಹೊರಹೊಮ್ಮಿದ್ದರು.












Click it and Unblock the Notifications