ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ: ಯಾವ ಪರೀಕ್ಷೆ ಎಂದು? ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು, ಆಗಸ್ಟ್ 25: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಆಗಸ್ಟ್ 10ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿತ್ತು. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಆಯಾ ವಿಷಯಗಳಲ್ಲಿ ಉತ್ತೀರ್ಣರಾಗಿ ಮುಂದಿನ ವಿದ್ಯಾಭ್ಯಾಸಕ್ಕೆ ಸೇರಿಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಪೂರಕ ಪರೀಕ್ಷೆ ಆಯೋಜಿಸಲಾಗಿದೆ.
Recommended Video
ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಕೂರಲು ಸಾಧ್ಯವಾಗಿರಲಿಲ್ಲ. ಅವರಿಗೂ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಿದ್ದು, ಅವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿತ್ತು. ಅವರ ಹಾಜರಾತಿಯನ್ನು ಪ್ರಥಮ ಅವಕಾಶ ಎಂದೇ ಪರಿಗಣಿಸಲಾಗುತ್ತದೆ. ಫಲಿತಾಂಶ ಪ್ರಕಟವಾದ ಮರುದಿನದಿಂದಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಆನ್‌ಲೈನ್ ಮೂಲಕ ಅವಕಾಶ ನೀಡಲಾಗಿತ್ತು. ಪರೀಕ್ಷಾ ಶುಲ್ಕ ಸ್ವೀಕೃತಿ ಮತ್ತು ಆನ್‌ಲೈನ್ ವಿದ್ಯಾರ್ಥಿ ವಿವರ ಅಪ್‌ಲೋಡ್ ಮಾಡಲು ಆಗಸ್ಟ್ 20 ಕೊನೆಯ ದಿನವಾಗಿತ್ತು. 200 ರೂ ದಂಡದೊಂದಿಗೆ ವಿವರ ಸಲ್ಲಿಸಲು ಆಗಸ್ಟ್ 24ಕೊನೆಯ ದಿನವಾಗಿತ್ತು.
ಈಗ ಶಿಕ್ಷಣ ಮಂಡಳಿಯು ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಕೆಎಸ್‌ಇಇಬಿಯ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಬೆಳಿಗ್ಗೆ 10.30ರಿಂದ ಪರೀಕ್ಷೆ ಆರಂಭ
ಪೂರಕ ಪರೀಕ್ಷೆಗಳು ಸೆ. 21ರಂದು ಆರಂಭವಾಗಲಿದ್ದು, ಸೆ. 28ಕ್ಕೆ ಮುಕ್ತಾಯವಾಗಲಿದೆ. ಸತತವಾದ ದಿನಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಸೆ. 27ರ ಭಾನುವಾರ ಮಾತ್ರ ವಿರಾಮ ಇರಲಿದೆ. ಪರೀಕ್ಷೆಯ ವೇಳಾಪಟ್ಟಿಯಲ್ಲಿ ದಿನಾಂಕ, ಸಮಯ, ಪರೀಕ್ಷೆಯ ಅವಧಿ, ವಿಷಯದ ಕೋಡ್ ಮತ್ತು ಪ್ರತಿ ವಿಷಯಕ್ಕೆ ಗರಿಷ್ಠ ಅಂಕಗಳ ವಿವರಗಳನ್ನು ನಮೂದಿಸಲಾಗಿದೆ. ಪರೀಕ್ಷೆಗಳು ಬೆಳಿಗ್ಗೆ 10.30ರಿಂದ ಆರಂಭವಾಗಿ ಮಧ್ಯಾಹ್ನ 1.45ಕ್ಕೆ ಮುಗಿಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆಯನ್ನು ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ.

ಮೊದಲ ನಾಲ್ಕು ದಿನದ ಪರೀಕ್ಷೆಗಳು
ಸೆಪ್ಟೆಂಬರ್ 21: ಗಣಿತ ಮತ್ತು ಸಮಾಜಶಾಸ್ತ್ರ (ಕೋರ್ ಸಬ್ಜೆಕ್ಟ್ಸ್)
ಸೆಪ್ಟೆಂಬರ್ 22: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (ಪ್ರಥಮ ಭಾಷೆ).
ಸೆಪ್ಟೆಂಬರ್ 23: ಸಮಾಜ ವಿಜ್ಞಾನ
ಸೆಪ್ಟೆಂಬರ್ 24: ಇಂಗ್ಲಿಷ್, ಕನ್ನಡ (ಎರಡನೆಯ ಭಾಷೆ)

ಕೊನೆಯ ಮೂರು ಪರೀಕ್ಷೆಗಳು
ಸೆಪ್ಟೆಂಬರ್ 25: ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (ತೃತೀಯ ಭಾಷೆ).
ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ನೆಸ್ (ಎನ್‌ಎಸ್‌ಕ್ಯೂಎಫ್ ಪರೀಕ್ಷೆ ವಿಷಯಗಳು).
ಸೆಪ್ಟೆಂಬರ್ 26: ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ & ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಭಾರತೀಯ ಅರ್ಥಶಾಸ್ತ್ರ.
ಸೆಪ್ಟೆಂಬರ್ 28: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.

ಸಂಗೀತ ಪರೀಕ್ಷೆಗಳ ವಿವರ
ಜೂನಿಯರ್ ತಾಂತ್ರಿಕ ಶಾಲೆಯ ಅಭ್ಯರ್ಥಿಗಳಿಗೆ ಪ್ರಾಕ್ಟಿಕಲ್ ಮತ್ತು ಮೌಖಿಕ ಪರೀಕ್ಷೆಗಳನ್ನು 2020ರ ಸೆ. 29ರಂದು ನಡೆಸಲಾಗುತ್ತದೆ. ಕರ್ನಾಟಕ ಶಾಸ್ತ್ರೀಯ/ಹಿಂದೂಸ್ಥಾನಿ ಸಂಗೀತ ಥಿಯರಿ ಪರೀಕ್ಷೆಗಳನ್ನು ಮಧ್ಯಾಹ್ನ 2.30ರಿಂದ 4.15ರವರೆಗೆ ನಡೆಸಲಾಗುತ್ತದೆ. ಪ್ರಾಕ್ಟಿಕಲ್ ಪರೀಕ್ಷೆಯು 4.15ರಿಂದ 5.45ರವರೆಗೆ ನಡೆಯಲಿದೆ. ಹೆಚ್ಚಿನ ವಿವರಗಳಿಗಾಗಿ kseeb.kar.nic.in ವೆಬ್‌ಸೈಟ್ ವೀಕ್ಷಿಸಬಹುದು.
-
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications