ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

By Nayana
|
Google Oneindia Kannada News

ಬೆಂಗಳೂರು, ಜು.19: ಪ್ರಸ್ತುತ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಹೊರಬಂದಿದೆ. ಒಟ್ಟು 2,08,151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 84,701 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಶೇ.40ರಷ್ಟು ಉತ್ತೀರ್ಣರಾಗಿದ್ದಾರೆ.. 2017ರಲ್ಲಿ ಶೇ.50.81 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. 2,42,000ಮಂದಿ ಪರೀಕ್ಷೆ ಬರೆದಿದ್ದರು.

ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 45.55 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ.37.93 ಬಾಲಕರು ಉತ್ತೀರ್ಣರಾಗಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು41.58 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ ನಗರ ಪ್ರದೇಶಗಳಲ್ಲಿ ಶೇ.39.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯಲಿದ್ದಾರೆ 2.7 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯಲಿದ್ದಾರೆ 2.7 ಲಕ್ಷ ವಿದ್ಯಾರ್ಥಿಗಳು

ಮಧ್ಯಾಹ್ನ 12 ಗಂಟೆಯ ನಂತರ ವೆಬ್ಸೈಟ್‌ನಲ್ಲಿ ಪರೀಕ್ಷೆಯ ಫಲಿತಾಂಶ ಲಭಿಸುತ್ತದೆ. ದಿನಾಂಕ 20 ರಂದು ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಕಳೆದ ತಿಂಗಳು ಜೂನ್‌ನಲ್ಲಿ ಎಸ್‍ಎಸ್‍ಎಲ್‌ಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ನಡೆದಿತ್ತು. ಸುಮಾರು ಎರಡೂವರೆ ಲಕ್ಷ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆದಿದ್ದರು.

ಜೂನ್‌ ತಿಂಗಳಲ್ಲಿ ನಡೆದಿರುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜು.8ರಿಂದ ಆರಂಭವಾಗಿತ್ತು.. ಒಟ್ಟು 9 ಜಿಲ್ಲೆಗಳಲ್ಲಿ ಪ್ರಾರಂಭವಾಗಿತ್ತು, ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯು ರಾಜ್ಯಾದ್ಯಂತ ಜೂನ್ 21ರಿಂದ ನಡೆದಿದ್ದು, ಒಟ್ಟು 2.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Karnataka SSLC supplementary result 2018 to be released today

ಪರೀಕ್ಷೆಯು ಜೂನ್ 28ರವರೆಗೆ ನಡೆಯಲಿದೆ.ಈ ಬಾರಿ ಒಟ್ಟು 1,32,543 ಬಾಲಕರು ಹಾಗೂ 73,370 ಬಾಲಕಿಯರು ಸೇರಿದಂತೆ ಒಟ್ಟು 2,07, 913 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಗಾಗಿ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 673 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು.

ಇದರಲ್ಲಿ 11 ಅತಿಸೂಕ್ಷ್ಮ, 17 ಸೂಕ್ಷ್ಮ ಮತ್ತು 645 ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಎಸ್‌ಎಸ್‌ಎಲ್‌ಸಿ ಫಲಿತಾಂಶ http://kar.nic.in ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.

ವಿಧ್ಯಾರ್ಥಿಗಳು ಉತ್ತರ ಪತ್ರಿಕೆಗಳ ಛಾಯಾಪ್ರತಿ ಹಾಗು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಲು ಆನ್ ಲೈನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. www.kseeb.kar.nic.in ಜಾಲತಾಣದಲ್ಲಿ ಈ ಬಗ್ಗೆ ಸುತ್ತೋಲೆ ಹಾಗು ಅರ್ಜಿ ಹಾಕುವ ವಿಧಾನದ ವಿವರಗಳನ್ನು ನೀಡಲಾಗಿದೆ.

ಜುಲೈ 19ರಿಂದ ಜುಲೈ 28ರವರೆಗೆ ವರೆಗೆ ಛಾಯಾ ಪ್ರತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 21ರಿಂದ ಆಗಸ್ಟ್‌ 4ರವರೆಗೆ ಮರುಮೌಲ್ಯ ಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಮಂಡಳಿ ತಿಳಿಸಿದೆ.

English summary
Students who wrote SSLC supplementary exam Karnataka can access their results today in official wesites http://sslc.kar.nic.in.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X