ಕರ್ನಾಟಕ ಎಸ್ಎಸ್ಎಲ್‌ಸಿ ಪರೀಕ್ಷೆ 2021 ದಿನಾಂಕ ಪ್ರಕಟ
ಬೆಂಗಳೂರು, ಜೂ. 28: ಎಸ್ಎಸ್ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟಿಸುವ ಮೂಲಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Recommended Video
ಶಾಲೆ ಆರಂಭ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ರಾಜ್ಯ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವರು ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ರಾಜ್ಯದಲ್ಲಿ ಕಳೆದ ವರ್ಷವೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ ಪ್ರಶಂಸೆಗೆ ಒಳಗಾಗಿದ್ದೇವೆ. ಕಳೆದ ವರ್ಷ 8 ಲಕ್ಷ ಮಂದಿ ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಬಳಸಲಾಗಿತ್ತು. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ಸಲುವಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದರು.
ಜುಲೈ 19 ರಂದು ಪರೀಕ್ಷೆ: ಪೂರ್ವ ನಿಗದಿಯಂತೆ ಜುಲೈ 19 ರಂದು ಕೋರ್ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಆಧಾರಿತ ಒಂದು ಪ್ರಶ್ನೆ ಪತ್ರಿಕೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ 1.30 ರ ವರೆಗೆ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಮೂರು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ತಲಾ ಮೂರು ವಿಷಯಗಳಿಗೆ ಆಧರಿಸಿ ಒಂದು ಪ್ರಶ್ನೆ ಪತ್ರಿಕೆ ನೀಡಲಾಗುವುದು. ಕಳೆದ ವರ್ಷ ಪರೀಕ್ಷೆ ಆಗಿರಲಿಲ್ಲ. ಮಕ್ಕಳ ಹಬ್ಬ ಆಗಿತ್ತು. ಈ ಬಾರಿಯೂ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದ್ದೇವೆ. ಅದರಂತೆ ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದೆ. ಜೂನ್ 30 ರಿಂದ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಎಲ್ಲರಿಗೂ ಮಾಸ್ಕ್: ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಬಟ್ಟೆ ಮಾಸ್ಕ್ ಇಲ್ಲವೇ N 95 ಮಾಸ್ಕ್ ಧರಿಸಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ಪರೀಕ್ಷಾ ಕೇಂದ್ರಕ್ಕೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಎಲ್ಲಾ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಿಷೇಧಾಜ್ಞೆ: ಇನ್ನು ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬಾರದು. ಪ್ರಶ್ನೆ ಪತ್ರಿಕೆ ಸುರಕ್ಷತೆ, ಭದ್ರತೆ ಕುರಿತು ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಈ ಬಾರಿಯ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications