ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಎಸ್ಎಸ್ಎಲ್‌ಸಿ ಪರೀಕ್ಷೆ 2021 ದಿನಾಂಕ ಪ್ರಕಟ

|
Google Oneindia Kannada News

ಬೆಂಗಳೂರು, ಜೂ. 28: ಎಸ್ಎಸ್ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟಿಸುವ ಮೂಲಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Recommended Video

Schools Reopen | SSLC ವಿದ್ಯಾರ್ಥಿಗಳ ನೆರವಿಗೆ ಬರ್ತಾರಾ ಶಿಕ್ಷಣ ಸಚಿವರು | Oneindia Kannada

ಶಾಲೆ ಆರಂಭ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ರಾಜ್ಯ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವರು ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ರಾಜ್ಯದಲ್ಲಿ ಕಳೆದ ವರ್ಷವೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ ಪ್ರಶಂಸೆಗೆ ಒಳಗಾಗಿದ್ದೇವೆ. ಕಳೆದ ವರ್ಷ 8 ಲಕ್ಷ ಮಂದಿ ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಬಳಸಲಾಗಿತ್ತು. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ಸಲುವಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದರು.

ಜುಲೈ 19 ರಂದು ಪರೀಕ್ಷೆ: ಪೂರ್ವ ನಿಗದಿಯಂತೆ ಜುಲೈ 19 ರಂದು ಕೋರ್ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಆಧಾರಿತ ಒಂದು ಪ್ರಶ್ನೆ ಪತ್ರಿಕೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ 1.30 ರ ವರೆಗೆ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಮೂರು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ತಲಾ ಮೂರು ವಿಷಯಗಳಿಗೆ ಆಧರಿಸಿ ಒಂದು ಪ್ರಶ್ನೆ ಪತ್ರಿಕೆ ನೀಡಲಾಗುವುದು. ಕಳೆದ ವರ್ಷ ಪರೀಕ್ಷೆ ಆಗಿರಲಿಲ್ಲ. ಮಕ್ಕಳ ಹಬ್ಬ ಆಗಿತ್ತು. ಈ ಬಾರಿಯೂ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದ್ದೇವೆ. ಅದರಂತೆ ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದೆ. ಜೂನ್ 30 ರಿಂದ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸುರೇಶ್ ಕುಮಾರ್ ತಿಳಿಸಿದರು.

Karnataka SSLC Time Table 2021 : Exams on July 19th and 22nd

ಎಲ್ಲರಿಗೂ ಮಾಸ್ಕ್: ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಬಟ್ಟೆ ಮಾಸ್ಕ್ ಇಲ್ಲವೇ N 95 ಮಾಸ್ಕ್ ಧರಿಸಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ಪರೀಕ್ಷಾ ಕೇಂದ್ರಕ್ಕೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುವುದು. ಎಲ್ಲಾ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಿಷೇಧಾಜ್ಞೆ: ಇನ್ನು ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬಾರದು. ಪ್ರಶ್ನೆ ಪತ್ರಿಕೆ ಸುರಕ್ಷತೆ, ಭದ್ರತೆ ಕುರಿತು ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಈ ಬಾರಿಯ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು.

English summary
Karnataka SSLC Time Table 2021: Exams to be held on two days this year. July 19th core subjects -- Mathematics, Science and Social Science. July 22nd Languages. Take a look.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X