ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ

|
Google Oneindia Kannada News

ಬೆಂಗಳೂರು, ಜೂನ್ 26 : ನಾಡಗೀತೆ ಹಾಡುವ ಸಮಯವನ್ನು ಕಡಿತಗೊಳಿಸುವಂತೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಇನ್ನು ಮುಂದೆ ನಾಡಗೀತೆಯನ್ನು 2.30 ನಿಮಿಷದಲ್ಲಿ ಹಾಡಬೇಕಾಗಿದೆ. ಈ ಕುರಿತು ಅಧಿಕೃತ ಆದೇಶ ಶೀಘ್ರದಲ್ಲಿಯೇ ಹೊರಬೀಳಲಿದೆ.

ನಾಡಗೀತೆ : ಜಯ ಭಾರತ ಜನನಿಯ ತನುಜಾತೆ!

ಕನ್ನಡ ಸಾಹಿತ್ಯ ಪರಿಷತ್ ಸಲ್ಲಿಸಿದ್ದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ನಾಡಗೀತೆಗೆ ಕತ್ತರಿ : ಮುಂದಲೆಯ ಕೊಯ್ದು, ಮುಡಿಗೆ ಹೂವು ಮುಡಿಸಿದಂತೆ

'ಜಯ ಭಾರತ ಜನನಿಯ ತನುಜಾತೆ' ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ.

ನಾಡಗೀತೆ 2 ನಿಮಿಷ 50 ಸೆಕೆಂಡ್ ಹಾಡಿದರೆ ಸಾಕು: ತಜ್ಞರ ನಿರ್ಧಾರನಾಡಗೀತೆ 2 ನಿಮಿಷ 50 ಸೆಕೆಂಡ್ ಹಾಡಿದರೆ ಸಾಕು: ತಜ್ಞರ ನಿರ್ಧಾರ

Karnataka state anthem may be trimmed to 2.30 minutes

ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯ ಯಾವುದೇ ಸಾಲುಗಳಿಗೆ ಕತ್ತರಿ ಹಾಕದೆ, ಹಿನ್ನಲೆ ಸಂಗೀತದ ಅವಧಿಯ ಕಡಿಮೆ ಮಾಡಬೇಕು ಎಂದು ಶಿಫಾರಸು ಮಾಡಲಾಗಿತ್ತು. ಸರ್ಕಾರ ಈ ಕುರಿತು ಅಧಿಕೃತ ಆದೇಶವನ್ನು ಶೀಘ್ರದಲ್ಲಿಯೇ ಹೊರಡಿಸಲಿದೆ.

ಪಂಚಾಯಿತಿಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವುದು ಕಡ್ಡಾಯಪಂಚಾಯಿತಿಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವುದು ಕಡ್ಡಾಯ

2014ರಲ್ಲಿಯೂ ಸಹ ನಾಡಗೀತೆ ಹಾಡುವ ಅವಧಿಯನ್ನು ಕಡಿತಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆಗ ಸಾಹಿತಿ ಚನ್ನವೀರ ಕಣವಿ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿತ್ತು. ಸಮಿತಿ ನಾಡಗೀತೆ ಹಾಡುವ ಅವಧಿಯನ್ನು 1.50 ನಿಮಿಷಕ್ಕೆ ಇಳಿಸುವಂತೆ ಶಿಫಾರಸು ಮಾಡಿತ್ತು.

English summary
State anthem Jaya Bharatha Jananiya Thanujaathe may trimmed to 2.30 minutes. Karnataka government approved for the proposal made by Kannada Sahitya Parishat to cut duration of Naada Geethe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X