ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮೀಣ ಪ್ರದೇಶಕ್ಕೆ ರಾಜ್ಯ ಸರಕಾರದಿಂದ ಉಚಿತ ವೈ-ಫೈ ಸೇವೆ

By Sachhidananda Acharya
|
Google Oneindia Kannada News

ಬೆಂಗಳೂರು, ಜುಲೈ 5: ಹಲವು ಭಾಗ್ಯಗಳ ನಂತರ ಇದೀಗ ಇಂಟರ್ನೆಟ್ ಕ್ಷೇತ್ರಕ್ಕೂ ಸಿದ್ದರಾಮಯ್ಯ ಭಾಗ್ಯಗಳ ಸರಣಿ ಕಾಲಿಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ವೈ-ಫೈ ಸೇವೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಯ ಮಾತನಾಡಿದ ಸಚಿವ ಟಿಬಿ ಜಯಚಂದ್ರ, "ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ವೈ-ಫೈ ಸೇವೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಮೂರು ವರ್ಷಗಳ ಅವಧಿಗೆ ಬಿಎಸ್ಎನ್ಎಲ್ ಜತೆ ಸರಕಾರ ಒಪ್ಪಂದ ಮಾಡಿಕೊಳ್ಳಲಿದೆ," ಎಂದು ತಿಳಿಸಿದ್ದಾರೆ.

Karnataka state cabinet approves free Wi-Fi to rural areas

ಇದೇ ವೇಳೆ ವೈ-ಫೈ ಸೇವೆ ನೀಡಲು 79.50 ಕೋಟಿ ಹಣ ಬಿಡುಗಡೆಗೂ ಸಂಪುಟ ಸಭೆ ಒಪ್ಪಿಗೆ ನೀಡಿದೆ. 2017-2020ರವರೆಗೆ ಮೂರು ವರ್ಷಗಳ ಅವಧಿಗೆ ಬಿಎಸ್ಎನ್ಎಲ್ ಉಚಿತ ವೈ-ಫೈ ಸೇವೆ ನೀಡಲಿದೆ.

7 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ 7 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೂ ಸಂಪುಟ ಸಭೆ ಒಪ್ಪಿಗೆ ನೀಡಿದೆ. ತಲಾ 35 ಕೋಟಿ ವೆಚ್ಚದಲ್ಲಿ ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತದೆ.

English summary
Karnataka cabinet meeting approves free Wi-Fi project to rural areas with the cost of 79.50 crore rupees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X