ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ: ಸಂಪೂರ್ಣ ವಿವರ

|
Google Oneindia Kannada News

ಬೆಂಗಳೂರು, ನವೆಂಬರ್ 30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾಆಯೋಗ ಸೋಮವಾರ ಪ್ರಕಟಿಸಿದೆ.

113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ. ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

ರಾಜ್ಯದಲ್ಲಿ ಚುನಾವಣಾ ಕಾವು: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಇಂದು ಪ್ರಕಟರಾಜ್ಯದಲ್ಲಿ ಚುನಾವಣಾ ಕಾವು: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಇಂದು ಪ್ರಕಟ

ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೆಲವು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಇಂದಿನಿಂದಲೇ (ನ. 30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ, ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ. 14 ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.

ಪಂಚಾಯಿತಿಗಳು ಮತ್ತು ಸದಸ್ಯ ಸ್ಥಾನಗಳು

ಮೊದಲ ಹಂತದಲ್ಲಿ 2930 ಕ್ಷೇತ್ರಗಳಿಗೆ ಮತ್ತು ಎರಡನೆಯ ಹಂತದಲ್ಲಿ 2830 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 95,121 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಎಲ್ಲ ಕಡೆ ಕೋವಿಡ್ ಮಾರ್ಗಸೂಚಿಗಳ ಅನುಸರಣೆ ಕಡ್ಡಾಯ. ಚುನಾವಣಾ ಪ್ರಚಾರದ ವೇಳೆಯೂ ನಿಯಮಗಳನ್ನು ಪಾಲಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ ಬಿ ಬಸವರಾಜ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಕೆಲವು ಪಂಚಾಯಿತಿಗಳಿಗೆ ಚುನಾವಣೆ ಇಲ್ಲ

ಕೆಲವು ಪಂಚಾಯಿತಿಗಳಿಗೆ ಚುನಾವಣೆ ಇಲ್ಲ

ಕೆಲವು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿಲ್ಲ. ಡಿಸೆಂಬರ್ 2020ರ ನಂತರ 162 ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯವಾಗಲಿದೆ. ಇನ್ನು ನ್ಯಾಯಾಲಯದಲ್ಲಿ ಬಾಕಿ ಇರುವ ಆರು ಗ್ರಾಮ ಪಂಚಾಯಿತಿಗಳ ಪ್ರಕರಣಗಳು ಹಾಗೂ ಮೇಲ್ದರ್ಜೆಗೆ ಏರಿಸಲಾಗಿರುವ 33 ಗ್ರಾಮ ಪಂಚಾಯಿತಿ, ಭಾಗಶಃ ಮೇಲ್ದರ್ಜೆಗೆ ಏರಿಸಲಾಗಿರುವ 41 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯುತ್ತಿಲ್ಲ ಎಂದು ಹೇಳಿದರು.

ಮತದಾರರು ಎಷ್ಟಿದ್ದಾರೆ?

ಮತದಾರರು ಎಷ್ಟಿದ್ದಾರೆ?

ಚುನಾವಣೆ ನಡೆಯಲಿರುವ 5,762 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 2,96,15048 ಮತದಾರರು ಇದ್ದಾರೆ. ಅವರಲ್ಲಿ 1,49,71,676 ಪುರುಷರು ಮತ್ತು 1,47,41,964 ಮಂದಿ ಮಹಿಳಾ ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಬೀದರ್‌ನಲ್ಲಿ ಇವಿಎಂ ಬಳಕೆ

ಬೀದರ್‌ನಲ್ಲಿ ಇವಿಎಂ ಬಳಕೆ

ಬೀದರ್ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳನ್ನು ಬಳಸಲಾಗುತ್ತಿದೆ. ಇತರೆ ಎಲ್ಲ ಜಿಲ್ಲೆಗಳಲ್ಲಿಯೂ ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದೆ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಕೊರೊನಾ ವೈರಸ್ ಸೋಂಕು ಹರಡುವುದರ ವಿರುದ್ಧ ಹೊರಡಿಸಲಾಗಿರುವ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಚುನಾವಣೆ ನಡೆಯಲಿದೆ.

English summary
Karnataka state election commission announces grama panchayat elections dates. Election to conduct in 2 phases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X