ಕರ್ನಾಟಕ ಚುನಾವಣೆ: ನೀತಿ ಸಂಹಿತಿ ಜಾರಿಯಲ್ಲಿದ್ದರೂ ಕೋಟಿ ಕೋಟಿ ಮೌಲ್ಯದ ಡ್ರಗ್ಸ್, ಮದ್ಯ, ನಗದು ವಶಕ್ಕೆ: ಆಯೋಗ
ಬೆಂಗಳೂರು, ಏಪ್ರಿಲ್ 02: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುವುದು ಇನ್ನೂ38 ದಿನಗಳು ಬಾಕಿ ಇದೆ. ವಿವಿಧ ರಾಜಕೀಯ ಪಕ್ಷಗಳು ಸೇರಿದಂತೆ ಕಾರ್ಯಕರ್ತರು ಮತದಾರರ ಆಮೀಷಕ್ಕಾಗಿ ಬಳಸಲಾಗುತ್ತಿದ್ದ ಅಪಾರ ಪ್ರಮಾಣ ನಗದು, ಮದ್ಯ, ಉಚಿತ ಮತ್ತು ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟಗೊಳ್ಳುವ ಮೊದಲ ಇಂತಹ ಹಲವು ಘಟನೆಗಳು ನಡೆಯುತ್ತಲೇ ಬಂದಿವೆ.

ಸದ್ಯ ಕಳೆದ ಮಾರ್ಚ್ 29 ರಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಹೀಗಿದ್ದರೂ ಯಾವುದೇ ಅಂಜಿಕೆ, ಕಾನೂನುಗಳ ಭಯವೇ ಇಲ್ಲದೇ ರಾಜರಾರೋಷವಾಗಿ ಒಂದೆಡೆಯಿಂದ ಮತ್ತೊಂದೆಡೆಗೆ ಸಾಗಿಸಲಾಗುತ್ತಿದ್ದ ಹಾಗೂ ಬಳಕೆಯಾಗುತ್ತಿದ್ದ ಹಣ, ಮಾದಕ ದ್ರವ್ಯ ವಶಕ್ಕೆ ಪಡೆದಿದ್ದಾರೆ.
ಕರ್ನಾಟಕದಲ್ಲಿ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಪೊಲೀಸ್ ಅಧಿಕಾರಿಗಳು 7,07,79,207 ಕೋಟಿ ರೂಪಾಯಿ ನಗದು, ಒಟ್ಟು 5,80,007 ರೂಪಾಯಿ ಮೌಲ್ಯದ 1156.11 ಲೀಟರ್ ಮದ್ಯವನ್ನು, 21,76,950 ರೂಪಾಯಿ ಮೌಲ್ಯದ 39.25 ಕೆಜಿ ಮಾದಕ ವಸ್ತುವಾದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಆಯೋಗ ತಿಳಿಸಿದೆ.
ರೂ. 3,90,00,000 ನಗದು ವಶಕ್ಕೆ
ಆಯಾ ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ವೇಳೆ ಕೃತ್ಯ ಬಯಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಮತ್ತು ಅದಕ್ಕೆಕಾರಣರಾದವರ ವಿರುದ್ಧ ಒಟ್ಟು 172 ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸಹ ಭೇಟಿಯಾಗಿದ್ದು, ಅವರು ಒಟ್ಟು 3,90,00,000 ರೂಪಾಯಿ ನಗದುನ್ನು ವಶಕ್ಕೆಪಡೆದು ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ಅಪಾರ ಪ್ರಮಾಣದಲ್ಲಿ ಮದ್ಯ ಮತ್ತು ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದೆ. ಒಟ್ಟು 11,66,14,868 ಮೌಲ್ಯದ 1,93,051 ಲೀಟರ್ ಮದ್ಯ ಹಾಗೂ 1,81,610 ರೂಪಾಯಿ ಮೌಲ್ಯದಷ್ಟಿರುವ 12 ಕಿಲೋ ಗ್ರಾಂ ಮಾದಕವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಲ್ಲದೇ ಅಕ್ರಮ ಮದ್ಯ, ಮಾದಕ ವಸ್ತು, ಹಣ ಸಾಗಾಟಕ್ಕೆಂದೆ ಬಳಸುತ್ತಿದ್ದ ಸರಿಸುಮಾರು 150 ವಿವಿಧ ರೀತಿಯ ವಾಹನಗಳನ್ನು ಇಲಾಖೆ ವಶಪಡಿಸಿಕೊಂಡಿದೆ. ನಗದು, ವಸ್ತು, ಮದ್ಯ ಮತ್ತು ಡ್ರಗ್ಸ್ ಸೇರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡವರು ಗಳ ಒಟ್ಟು ಮೊತ್ತ 39,38,44,847 ರೂಪಾಯಿಗಳು ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 10ಕ್ಕೆ ಚುನಾವಣೆ: ಅಧಿಕಾರಿಗಳು ಅಲರ್ಟ್
ಕರ್ನಾಟಕ ರಾಜ್ಯದಲ್ಲಿ ಮುಂದಿನ ತಿಂಗಳ ಮೇ 10 ರಂದು ಸಾರ್ವತ್ರಿಕ ವಿಧಾನಸಭಾ ಚುನಾವಣೆ ಜರುಗಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ರಾಜ್ಯದ ಅಷ್ಟೂ 224 ಕ್ಷೇತ್ರಗಳಿಗೂ ಒಂದೇ ಬಾರಿ ಮತದಾನ ಜರುಗಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜನತಾ ದಳ ಪಕ್ಷಗಳ ಮಧ್ಯೆ ಚುನಾವಣಾ ಪೈಪೋಟಿಯು ತೀವ್ರಗೊಳ್ಳಲಿದೆ. ಮತಯಾಚನೆಯು ನಡೆಯುತ್ತಿದೆ.
ಭಾರತೀಯ ಚುನಾವಣೆ ಆಯೋಗವು ಕರ್ನಾಟಕದ ಎಲ್ಲ ವಿಧಾನಸಭಾ ಕ್ಷೇತ್ರಗಳಾದ್ಯಂತ 58, 282 ಮತಗಟ್ಟೆಗಳನ್ನು ಸ್ಥಾಪಿಸುತ್ತಿದೆ. ಪ್ರತಿಯೊಂದು ಮತಗಟ್ಟೆಗಯಲ್ಲಿ ಸರಾಸರಿ ಮತದಾರರ ಸಂಖ್ಯೆಯನ್ನು 883 ಎಂದು ಹೇಳಲಾಗಿದೆ. ಅರ್ಧದಷ್ಟು ಮತದಾನ ಕೇಂದ್ರಗಳು ವೆಬ್ ಕಾಸ್ಟಿಂಗ್ ಸೌಲಭ್ಯವನ್ನು ಹೊಂದಿರಲಿವೆ. ಅಲ್ಲದೇ 1,320 ಮತಗಟ್ಟೆಗಳನ್ನು ನಿರ್ವಹಿಸಲಿದ್ದು, ಚುನಾವಣೆ ಸಂಬಂಧ ಅಗತ್ಯ ಮಹಿಳಾ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವು ಅಧಿಕಾರಿಗಳು ಭಾರೀ ಪ್ರಮಾಣದ ನಗದು, ಮದ್ಯ, ಉಚಿತ ಮತ್ತು ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಸುತ್ತಿದ್ದಾರೆ. ಬೆಂಗಳೂರಿನಂತಹ ಪಟ್ಟಣ ಸೇರದಂತೆ, ಜಿಲ್ಲೆ, ತಾಲೂಕು, ಗ್ರಾಮೀಣ ಭಾಗದಲ್ಲೂ ಸಹ ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ. ಎಲ್ಲ ವಿಧದಗಳು ವಾನಗಳ ತಪಾಸಣೆಯನ್ನು ವಿವಿಧ ಇಲಾಖೆ ಅಧಿಕಾರಿಗಳೆ ಮುಂದೆ ನಿಂತು ಮಾಡುತ್ತಿದ್ದಾರೆ. ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಪೊಲೀಸ್ ಅಧಿಕಾರಿಗಳು ಹೆಚ್ಚು ಸಕ್ರಿಯರಾಗಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications