Government Employees: ಕರ್ನಾಟಕ ಸರ್ಕಾರಿ ನೌಕರರ ತುಟ್ಟಿಭತ್ಯೆ ಪರಿಷ್ಕರಣೆ: ಅಧಿಕೃತ ಆದೇಶ, ವಿವರ
ಬೆಂಗಳೂರು, ಮೇ 07: ಕಾಂಗ್ರೆಸ್ ಸರ್ಕಾರ ಮಂಗಳವಾರ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಬಹುದಿನಗಳಿಂದ ಕಾಯುತ್ತಿದ್ದ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 10.75 ರಿಂದ ಶೇಕಡ 12.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ "ಮೂಲ ವೇತನ' ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,(ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,(ಆ) 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ, (ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.
ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 10.75 ರಿಂದ ಶೇಕಡ 12.25 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.
ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂದ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು. ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2025 ರ ಮೇ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ಅಲ್ಲದೇ ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆದೇಶದಲ್ಲಿ ಪ್ರಕಟಿಸಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications