ಆಡಳಿತಕ್ಕೆ ಚುರುಕು ಮುಟ್ಟಿಸಲು IAS ಗಳಿಗೆ ಹೆಚ್ಚುವರಿ ಹೊಣೆ!

ಬೆಂಗಳೂರು, ಮೇ. 30: ಸರ್ಕಾರದ ಮುಖ್ಯ ಕಾರ್ಯದರ್ಶಿ ವರ್ಗಾವಣೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಇದೀಗ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆಯಕಟ್ಟಿನ ಜಾಗಗಳಿಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತಕ್ಕೆ ಚುರುಕು ನೀಡಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ.

Recommended Video

      IPL ಫೈನಲ್ ಪಂದ್ಯದಲ್ಲಿ Hardik Pandya ಗೆ ಶರಣಾದ Sanju Samson ಪಡೆ |#cricket | Oneindia Kannada

      ವರ್ಗಾವಣೆ ಪಟ್ಟಿ

      ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ರಜನೀಶ್ ಗೋಯಲ್, ಅವರಿಗೆ ಹೆಚ್ಚುವರಿಯಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ಧೆಗೆ ವರ್ಗಾವಣೆ ಮಾಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರನ್ನು ಸಹ ಬೆಂಗಳೂರಿನ ಅಭಿವೃದ್ಧಿ ಆಯುಕ್ತ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

      ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

      Karnataka state govt transferred 11 senior IAS officers to key posts

      ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

      ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಡಾ. ರಾಮ್ ಪ್ರಸಾದ್ ಮನೋಹರ್ ಅವರನ್ನು ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಕಮೀನಷರ್ ( ಪೂರ್ವ ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಸಣ್ಣ ಮತ್ತ ಮಧ್ಯಮ ಕೈಗಾರಿಕೆ ನಿರ್ದೇಶಕ ವಿನೋದ್ ಪ್ರಿಯಾ ಅವರನ್ನು ಕರ್ನಾಟಕ ಕೌಶಯ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಹೌಸಿಂಗ್ ಬೋರ್ಡ್ ಆಯುಕ್ತ ರಮೇಶ್ ಡಿ.ಎಸ್. ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

      ಬೆಂಗಳೂರು ಮಹಾ ನಗರ ಪಾಲಿಕೆ ( ಕಲ್ಯಾಣ ) ವಿಶೇಷ ಆಯುಕ್ತ ಅವರನ್ನು ಕೃಷಿ ಇಲಾಖೆ ಆಯುಕ್ತ ಹುದ್ದೆಗೆ ವರ್ಗಾವಣೆಯಾಗಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ನಿರ್ದಶಕಿ ಸತ್ಯಭಾಮ ಸಿ. ಅವರನ್ನು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

      Karnataka state govt transferred 11 senior IAS officers to key posts

      ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಅಧಿಕಾರಿ ಸೋಮೇಖರ್ ಎಸ್. ಜೆ. ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+