ಜೂನ್ 2ಕ್ಕೆ ರಾಜ್ಯ ಸರ್ಕಾರಿ ನೌಕರರ ಮುಷ್ಕರ, ಏಕೆ?

Written By:
Subscribe to Oneindia Kannada

ಗದಗ, ಮೇ. 27: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಜೂನ್ 2 ರಂದು ಮುಷ್ಕರ ನಡೆಸಲು ತೀರ್ಮಾನಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಗದಗ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ರವಿ ಎಲ್ ಗುಂಜೀಕರ್ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಎಫ್.ಹಳ್ಯಾಳ ಯಾಕೆ ಮುಷ್ಕರ ಮಾಡುತ್ತಿದ್ದೇವೆ? ತಮ್ಮ ಬೇಡಿಕೆಗಳೇನು ಎಂಬುದನ್ನು ತಿಳಿಸಿದ್ದಾರೆ.[ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ಒಳ್ಳೆ ಸುದ್ದಿ]

karnataka

ಬೇಡಿಕೆಗಳೇನು?
* ಹಲವು ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರ ನಡುವಿನ ವೇತನ ಭತ್ಯೆಗಳಲ್ಲಿನ ತಾರತಮ್ಯ, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆ ಇಟ್ಟಿದ್ದೇವೆ. ರಾಜ್ಯ ಸರಕಾರಿ ನೌಕರರಿಗೂ ಸಹ ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ ಮತ್ತು ಭತ್ಯೆ ಮಂಜೂರು ಮಾಡಬೇಕು.

* ದೇಶದ ಇತರೆ 24 ರಾಜ್ಯಗಳು ತನ್ನ ನೌಕರರಿಗೆ ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆ ಮಂಜೂರ ಮಾಡಿರುವ ಅಂಕಿ ಅಂಶ ನೀಡಲಾಗಿದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದ ರಾಜ್ಯಗಳೂ ಸಹ ತನ್ನ ನೌಕರರಿಗೆ ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ಮಂಜೂರು ಮಾಡಿರುವ ವಿವರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿತದ್ದು ಅಂತೆಯೇ ನಮಗೂ ಸೌಲಭ್ಯ ಕಲ್ಪಿಸಿಕೊಡಬೇಕು.[ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ?]

* ಈ ಹಿಂದೆ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ ರಚಿತವಾದ ಆಯೋಗಗಳು, ಅಧಿಕಾರಿಗಳ ಸಮಿತಿ, ಸಚಿವ ಸಂಪುಟ ಉಪ ಸಮಿತಿಗಳು ತಮ್ಮ ವರದಿ ಹಾಗೂ ಶಿಫಾರಸ್ಸುಗಳನ್ನು ಸಲ್ಲಿಸುವಲ್ಲಿ ತೆಗೆದುಕೊಂಡ ಕಾಲಾವಧಿಗಳ ಬಗ್ಗೆ ವಿವರ ನೀಡಲಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ನಡೆಯಬೇಕಾದ ವೇತನ ಪರಿಷ್ಕರಣೆ 6-7 ವರ್ಷಗಳನ್ನು ತೆಗೆದುಕೊಳ್ಳುತ್ತಿದೆ. ಇದನ್ನು ಬದಲಾವಣೆ ಮಾಡಬೇಕು.

* 7 ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಕೂಡಲೇ ಅನುಷ್ಠಾನ ಮಾಡಬೇಕು.

* ಜೂನ್ 2 ಕ್ಕೆ ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಮುಷ್ಕರದ ಕುರಿತು ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಗಳಿಗೆ ನೋಟೀಸ್ ಕೂಡ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನೊಂದೆಡೆ 50 ಸಾವಿರಕ್ಕೂ ಅಧಿಕ ಪೊಲೀಸರು ಒಂದೆ ದಿನ ರಜೆ ತೆಗೆದುಕೊಂಡು ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಒಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಜನರಿಗೆ ಒಂದೆರಡು ದಿನದ ಅವಧಿಯಲ್ಲಿ ಎರಡೆರಡು ಮುಷ್ಕರದ ಬಿಸಿ ತಾಗಲಿದೆ.[ಸಾಮೂಹಿಕ ರಜೆಗೆ 50 ಸಾವಿರ ಪೊಲೀಸರ ನಿರ್ಧಾರ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka State Government workers decided to protest on June 2, 2016. Peeved at state government's alleged apathy in considering their request for equal wages for equal work, nearly 5.10 lakh government employees from 84 departments have decided to massive protest on June 2.
Please Wait while comments are loading...