ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಮಾಜಿಕ ಜಾಲತಾಣಕ್ಕೆ ಬಂದ ರಾಜ್ಯ ಮಾನವ ಹಕ್ಕು ಆಯೋಗ

|
Google Oneindia Kannada News

ಬೆಂಗಳೂರು, ಮಾ.8 : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳನ್ನು ತೆರೆದಿದ್ದು, ಸಾರ್ವಜನಿಕರು ಆಯೋಗವನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಬಹುದಾಗಿದೆ. ಆಯೋಗದ ಕಚೇರಿಯಲ್ಲಿ ಜನರ ಸಹಾಯಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಮೀರಾ ಸಕ್ಸೇನಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಇನ್ನುಮುಂದೆ ಸಾರ್ವಜನಿಕರು ಟ್ವಿಟರ್ ಮತ್ತು ಫೇಸ್‌ಬುಕ್‌ ಮೂಲಕ ಆಯೋಗವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ. ಖಾತೆಯ ಮೂಲಕ ಜನರು ದೂರುಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದರು.

Human Rights Commission

ಸಾರ್ವಜನಿಕರು ಕೇವಲ ದೂರು ನೀಡಲು ಮಾತ್ರ ಈ ಖಾತೆಗಳನ್ನು ಉಪಯೋಗಿಸಬಾರದು. ಆಯೋಗಕ್ಕೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡುವುದಕ್ಕೂ ಆಯೋಗವನ್ನು ಈ ಮೂಲಕ ಸಂಪರ್ಕಿಸಬಹುದು ಎಂದು ಮೀರಾ ಸಕ್ಸೇನಾ ಹೇಳಿದರು.[ಫೇಸ್ ಬುಕ್ ಖಾತೆ]

ಸಹಾಯವಾಣಿ ಆರಂಭ : ಆಯೋಗದ ಕಚೇರಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಸಹಾಯವಾಣಿಗೆ ಜನರು ಉಚಿತವಾಗಿ ಕರೆ ಮಾಡಬಹುದು ಎಂದರು. ಸಹಾಯವಾಣಿ ಸಂಖ್ಯೆಗಳು : 1800-425-23333. [ಟ್ವಿಟರ್ ಐಡಿ]

ಫೇಸ್‌ಬುಕ್‌ನಲ್ಲಿ ಅವಹೇಳನ ದೂರು ದಾಖಲು : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮ ಹಾಗೂ ಅಲ್ಲಾಹುವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ನಿತ್ಯಾನಂದ ನಾಯ್ಕ್ ಎಂಬ ಯುವಕನ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯಲ್ಲಿ ಇಸ್ಲಾಂ ಮತ್ತು ಅಲ್ಲಾಹುವಿನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಯನ್ನು ಅಪ್ ಲೋಡ್ ಮಾಡಲಾಗಿದೆ.

English summary
Karnataka State Human Rights Commission now available on Facebook and Twitter said, KSHRC president Meera Saksena.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X