ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತಾರಾಜ್ಯ ಬಸ್ ಸೇವೆ ಆರಂಭಿಸಿದ ಕರ್ನಾಟಕ ರಸ್ತೆ ಸಾರಿಗೆ ನಿಗಮ

|
Google Oneindia Kannada News

ಬೆಂಗಳೂರು, ಜೂನ್ 24: ರಾಜ್ಯದ ವಿವಿಧೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಬಸ್ ಸಂಚಾರ ಆರಂಭಿಸುತ್ತಿದೆ.

ಬೆಂಗಳೂರು, ಶಿವಮೊಗ್ಗ, ಮಂಗಳೂರಿನಿಂದ ಮುಂಬೈ, ಪುಣೆ, ಮೀರಜ್, ಪಂಡರಾಪುರ, ತುಳಜೀಪುರಕ್ಕೆ ಜೂನ್ 25ರಿಂದ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಪ್ರಯಾಣಿಕರನ್ನು ಹೊತ್ತು ಸಾಗಲಿದೆ.

ಅನ್‌ಲಾಕ್; ಬಸ್ ಸಂಚಾರ ಆರಂಭವಾದರೂ ಪ್ರಯಾಣಿಕರಿಲ್ಲ!ಅನ್‌ಲಾಕ್; ಬಸ್ ಸಂಚಾರ ಆರಂಭವಾದರೂ ಪ್ರಯಾಣಿಕರಿಲ್ಲ!

ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು. ಪ್ರಸ್ತುತ ಕೋವಿಡ್ ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 25ರಿಂದ ಬೆಂಗಳೂರು, ಶಿವಮೊಗ್ಗಮ ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಮಹಾರಾಷ್ಟ್ರದ ವಿವಿಧ ನಗರಗಳಿಗೆ ಬಸ್ ತೆರಳಲು ಅವಕಾಶ ಮಾಡಿಕೊಡಲಾಗಿದೆ.

Karnataka State Road Transport Corporation To Resume Bus Operations From Bengaluru

ಬೆಂಗಳೂರ-ಮುಂಬೈ- ಬೆಂಗಳೂರು ಬಿಡುವ ವೇಳೆ, ಮಧ್ಯಾಹ್ನ 1 ಗಂಟೆಗೆ, ಗಮ್ಯಸ್ಥಾನ ಬಿಡುವ ವೇಳೆ 1.30 ಗಂಟೆ. ಬೆಂಗಳೂರು-ಪುಣೆ- ಬೆಂಗಳೂರು ಬಿಡುವ ವೇಳೆ ಸಂಜೆ 6 ಗಂಟೆಗೆ. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗುತ್ತದೆ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ 19 ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಮುಂಗಡ ಆಸನಗಳನ್ನು ksrtc.karnataka.gov.in/www.ksrtc.inನಲ್ಲಿ ಕಾಯ್ದಿರಿಸಬಹುದಾಗಿದೆ. ಪ್ರಯಾಣಿಕರು ಈಗಿರುವ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

Recommended Video

ISRO ಮುಂದಿನ ಮಹತ್ವದ ಯೋಜನೆಗೆ ವಿಶ್ವ ಸಂಸ್ಥೆಯ ಬೆಂಬಲ | Oneindia Kannada

ಹೆಚ್ಚುವರಿ ಮಾಹಿತಿಗಾಗಿ ಕರಾರಸಾ ನಿಗಮದ ಕಾಲ್‌ಸೆಂಟರ್ ಸೂರವಾಣಿ ಸಂಖ್ಯೆ 080-2652625ಕ್ಕೆ ಸಂಪರ್ಕಿಸಬಹುದು.

English summary
Karnataka State Road Transport Corporation to resume bus operations from Bengaluru, Shivamogga, Mangaluru and other places of the State to Mumbai, Pune, Miraj, Solapur, Pandharapur and Tuljapur in Maharashtra from 25 June with 50% seating capacity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X