ಉಕ್ರೇನ್‌ನಲ್ಲಿ ಸಿಲುಕಿದ ಕರ್ನಾಟಕದ ವಿದ್ಯಾರ್ಥಿಗಳು: 24/7 ಸಹಾಯವಾಣಿ ಆರಂಭ
ಬೆಂಗಳೂರು, ಫೆ.25: ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ಮೂಲದ ವಿದ್ಯಾರ್ಥಿಗಳ ರಕ್ಷಣೆಗಾಗಿ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದ್ದು, 24/7 ಸಹಾಯವಾಣಿಯನ್ನೂ ಆರಂಭಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಮಾತನಾಡಿ ಕರ್ನಾಟಕದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ, ಸಂಜೆ ವೇಳೆಗೆ ಈ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಅನೇಕ ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಭಾರತಕ್ಕೆ ಬರಲು ಹಾತೊರೆಯುತ್ತಿದ್ದಾರೆ.
ಉಕ್ರೇನ್‌ನಲ್ಲಿ ಸಿಲುಕಿರುವ ನಾಗರಿಕರು ಮತ್ತು ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರುವ ಸಂಬಂಧ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಕಂದಾಯ ಇಲಾಖೆ (ಪ್ರಾಕೃತಿಕ ವಿಕೋಪ ನಿರ್ವಹಣೆ) ಆಯುಕ್ತ, ಐಎಫ್‌ಎಸ್ ಅಧಿಕಾರಿ ಡಾ. ಮನೋಜ್ ರಾಜನ್ ಅವರನ್ನು ನೋಡಲ್ ಅಧಿಕಾರಿಯಾಗಿದ್ದು, ಭಾರತದ ವಿದೇಶಾಂಗ ಸಚಿವಾಲಯ, ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹಿತ ಹಲವು ಕಡೆಗಳಲ್ಲಿ ಸಂಪರ್ಕ ಸಾಧಿಸಿದ್ದಾರೆ.

24/7 ಸಹಾಯವಾಣಿ:
ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ಸಂಬಂಧ 24/7 ಸಹಾಯವಾಣಿ ಆರಂಭಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
080-1070 ಮತ್ತು 080-22340676. Email ID: [email protected], revenuedmkar@ gmail.com ಸಂಪರ್ಕಿಸುವ ಮೂಲಕ ಮಾಹಿತಿ ಪಡೆಯಬಹುದು.
ರಾಜ್ಯದ ವಿದ್ಯಾರ್ಥಿಗಳನ್ನು ಕರೆತರಲು ಕ್ರಮ:
ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Koo AppIn this hour of crisis in Ukraine, the Karnataka Govt is working with GOI to assist Namma Kannadigas stranded there. We are in touch with MEA authorities for their safe evacuation. To facilitate the safe home-coming of our people, we have set up a helpline number: ☎️+91-80-22340676 @bsbommai @BJP4Karnataka @pmoind - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 25 Feb 2022
ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ 100 ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತವಾಗಿರಲು ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನ: ಪ್ರಾರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು.
ಉಕ್ರೇನ್‌ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ವಿದ್ಯಾರ್ಥಿಗಳು ಬ್ಯಾಚ್‌ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ತಿಳಿಸಿದರು.












Click it and Unblock the Notifications