ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ವಂಚಿತ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆ ಬರೆಯಲು ಮತ್ತೆ ಅವಕಾಶ

|
Google Oneindia Kannada News

ಬೆಂಗಳೂರು, ಮೇ 6: ಹಂಪಿ ಎಕ್ಸ್‌ಪ್ರೆಸ್ ರೈಲಿನ ವಿಳಂಬದಿಂದಾಗಿ ಭಾನುವಾರದಂದು ನೀಟ್ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗಿ ಕಂಗಾಲಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ದೊರೆತಿದೆ. ಮೇ 20ರಂದು ನೀಟ್ ಪರೀಕ್ಷೆ ಬರೆಯಬಹುದಾಗಿದೆ.

ಅವಕಾಶ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಂದು ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಇದರಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೆ ಬೇಸರಗೊಂಡಿದ್ದ ಸುಮಾರು 500 ವಿದ್ಯಾರ್ಥಿಗಳಿಗೆ ಸಂತಸ ಉಂಟಾಗಿದೆ.

ಹುಬ್ಬಳ್ಳಿಯಿಂದ ಹೊರಡುವ ಹಂಪಿ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ನಂಬಿಕೊಂಡಿದ್ದ ವಿದ್ಯಾರ್ಥಿಗಳು ಬೆಂಗಳೂರಿಗೆ ಬಂದು ಪರೀಕ್ಷೆ ಬರೆಯಬೇಕಿತ್ತು. ಆದರೆ, ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ತಲುಪಬೇಕಿದ್ದ ರೈಲು ಮಧ್ಯಾಹ್ನ 2.30ಕ್ಕೆ ತಲುಪಿತ್ತು. ಇದರಿಂದ ಬಹುತೇಕ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು.

ನೀಟ್ ಬರೆಯಲು ಮತ್ತೆ ಅವಕಾಶ ಕೊಡಿ: ಜಾವಡೇಕರ್‌ಗೆ ಸದಾನಂದಗೌಡ ಪತ್ರ ನೀಟ್ ಬರೆಯಲು ಮತ್ತೆ ಅವಕಾಶ ಕೊಡಿ: ಜಾವಡೇಕರ್‌ಗೆ ಸದಾನಂದಗೌಡ ಪತ್ರ

ರೈಲು ವಿಳಂಬದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಧ್ಯವಾಗದೆ ಇರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮತ್ತೊಂದು ಅವಕಾಶ ಕಲ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದರು. ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರೂ ವಿದ್ಯಾರ್ಥಿಗಳ ಆತಂಕಕ್ಕೆ ಸ್ಪಂದಿಸಿ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದರು. ಅದಕ್ಕೆ ಜಾವಡೇಕರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Array

ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

'ರೈಲ್ವೆ ವಿಳಂಬದಿಂದಾಗಿ ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದ ಕರ್ನಾಟಕದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಸಿಗಲಿದೆ ಎಂಬುದನ್ನು ಪ್ರಕಟಿಸಲು ಸಂತೋಷವಾಗುತ್ತಿದೆ' ಎಂದು ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ.

ತಪ್ಪಿದ ನೀಟ್ ಪರೀಕ್ಷೆ: ವಿದ್ಯಾರ್ಥಿಗಳ ಪರ ಮೋದಿಗೆ ಎಚ್‌ಡಿಕೆ ಮನವಿತಪ್ಪಿದ ನೀಟ್ ಪರೀಕ್ಷೆ: ವಿದ್ಯಾರ್ಥಿಗಳ ಪರ ಮೋದಿಗೆ ಎಚ್‌ಡಿಕೆ ಮನವಿ

ಸದಾನಂದಗೌಡ ಸಂತಸ

ನೀಟ್ ಪರೀಕ್ಷೆಯನ್ನು ತಪ್ಪಿಸಿಕೊಂಡ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಪ್ರಕಾಶ್ ಜಾವಡೇಕರ್ ಅವರೊಂದಿಗೆ ನಾನು ನಡೆಸಿದ ಖಾಸಗಿ ಚರ್ಚೆಯ ಬಳಿಕ ಅವರು ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸದಾನಂದ ಗೌಡ ಹೇಳಿದ್ದಾರೆ.

Array

ಎಚ್ ಡಿ ಕುಮಾರಸ್ವಾಮಿ ಧನ್ಯವಾದ

ಪ್ರಕಾಶ್ ಜಾವಡೇಕರ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ನಮ್ಮ ಮನವಿಯನ್ನು ಪರಿಗಣಿಸಿದ್ದಕ್ಕೆ ಮತ್ತು ನಮ್ಮ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿರುವುದಕ್ಕೆ ಧನ್ಯವಾದಗಳು ಎಂದು ನೀಟ್ ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಿದ ಸಚಿವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.

ನೀಟ್ ಪರೀಕ್ಷೆ ಗೊಂದಲ : ಸಿದ್ದರಾಮಯ್ಯ ಟ್ವೀಟ್ ನೀಟ್ ಪರೀಕ್ಷೆ ಗೊಂದಲ : ಸಿದ್ದರಾಮಯ್ಯ ಟ್ವೀಟ್

ಸುರೇಶ್ ಕುಮಾರ್ ಕೃತಜ್ಞತೆ

ನಿನ್ನೆ NEET ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ಅವಕಾಶ ಘೋಷಿಸಿದ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ರವರಿಗೆ ಧನ್ಯವಾದಗಳು ಎಂದು ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ನೀಟ್ ಪರೀಕ್ಷೆ: ಅಂಗಿ, ಶೂ, ಮೂಗುತಿ ಬಿಚ್ಚಿಸಿದ ಪರೀಕ್ಷಾ ವೀಕ್ಷಕರು ನೀಟ್ ಪರೀಕ್ಷೆ: ಅಂಗಿ, ಶೂ, ಮೂಗುತಿ ಬಿಚ್ಚಿಸಿದ ಪರೀಕ್ಷಾ ವೀಕ್ಷಕರು

English summary
Human Resource Development Minister Prakash Javadekar announced that Karnataka students who missed NEET exams due to railway delay will get another chance can write exam on May 20, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X