ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಎಲ್ಲಾ ಸಬ್‌ ರಿಜಿಸ್ಟ್ರಾರ್ ಕಚೇರಿ ಸಂಪೂರ್ಣ ಡಿಜಿಟಲ್

|
Google Oneindia Kannada News

ಬೆಂಗಳೂರು, ನವೆಂಬರ್ 30: ಕಾವೇರಿ ಆನ್‌ಲೈನ್ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ ಬಳಿಕ ಎರಡನೇ ಹಂತದಲ್ಲಿ ಸಬ್‌ ರಿಜಿಸ್ಟ್ರಾರ್ ಕಚೇರಿಯನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಲು ಸರ್ಕಾರ ಮುಂದಾಗಿದೆ.

ಆನ್‌ಲೈನ್ ಆಸ್ತಿ ನೋಂದಣಿಗಾಗಿ 'ಕಾವೇರಿ': ಏನೇನು ಲಾಭ? ಆನ್‌ಲೈನ್ ಆಸ್ತಿ ನೋಂದಣಿಗಾಗಿ 'ಕಾವೇರಿ': ಏನೇನು ಲಾಭ?

ಕಂದಾಯ ಇಲಾಖೆ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ ಬರುವ ಎಲ್ಲಾ ವ್ಯವಸ್ಥೆಗಳನ್ನು ಆನ್‌ಲೈನ್ ಮೂಲಕ ನೀಡಲು ಮುಂದಾಗಿದೆ. ಮುಂದಿನ ವರ್ಷದಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ತಿ ತೆರಿಗೆ ಮೋಸ: ಇಸ್ರೋಗೆ ಮೊರೆ ಹೋದ ಬಿಬಿಎಂಪಿ ಆಸ್ತಿ ತೆರಿಗೆ ಮೋಸ: ಇಸ್ರೋಗೆ ಮೊರೆ ಹೋದ ಬಿಬಿಎಂಪಿ

ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಸ್ಥಿರಾಸ್ತಿಗಳ ವ್ಯವಹಾರಗಳಿಗೆ ಸಂಬಂಧಿಸಿದಂತೆ ಆಸ್ತಿಗಳ ಹಸ್ತಾಂತರ, ಅಡಮಾನ, ಭೋಗ್ಯ ಮತ್ತು ಅಧಿಕಾರ ಪತ್ರಗಳನ್ನು ನೋಂದಣಿ ಮಾಡುವ ಜವಬ್ದಾರಿ ಹೊಂದಿರುತ್ತದೆ. ನೋಂದಾಯಿಸಿದ ದಾಖಲೆಗಳ ಭದ್ರತೆಯನ್ನು ಕಾಪಾಡಿಕೊಂಡು ಅವುಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಸಂರಕ್ಷಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿದೆ.

karnataka Sub-registrar offices will go digital

ವಧು ಮತ್ತು ವರನ ವಿಳಾಸ ಹಾಗೂ ವಿವಾಹ ನೆರವೇರಿದ ಸ್ಥಳ ಆಧಾರಿಸಿ ವಿವಾಹವನ್ನು ನೋಂದಾಯಿಸಿಕೊಳ್ಳಬೇಕಾದ ಕಛೇರಿ ವಿವರಗಳನ್ನು ದೃಢಪಡಿಸಿಕೊಳ್ಳಬಹುದು. ವಿವಾಹ ನೋಂದಣಿ ಮಾಡಿಕೊಳ್ಳಲು ಆಯಾ ಕಾರ್ಯ ವ್ಯಾಪ್ತಿಯ ಕಛೇರಿಗಳ ವಿವರವನ್ನು ಆನ್ಲೈನ್ ಪೋರ್ಟಲ್ನಿಂದ ಪಡೆಯಬಹುದಾಗಿರುತ್ತದೆ .

ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ

KACOMP ಕಾಯ್ದೆ ಅಡಿಯಲ್ಲಿ ಕೃಷಿ ಸಾಲಗಳಿಗೆ ಸಂಬಂಧಿಸಿದ ಡಿಕ್ಲರೇಷನ್ ಮತ್ತು ಸಾಲ ತೀರುವಳಿ ಪತ್ರಗಳ ಫೈಲಿಂಗ್ ಮಾಡುವಿಕೆ: ರೈತರಿಗೆ ಕೃಷಿ ಸಾಲ ನೀಡುವಸಂದರ್ಭದಲ್ಲಿ ಕಾಯ್ದೆ ಅಡಿಯಲ್ಲಿ ಪಡೆಯುವ ಡಿಕ್ಲರೇಷನ್ ಮತ್ತು ಸಾಲತೀರುವಳಿ ಪತ್ರಗಳನ್ನು ಆನ್ಲೈನ್ ಮೂಲಕ ಫೈಲಿಂಗ್ ಮಾಡುವ ಸೌಲಭ್ಯವನ್ನು ಬ್ಯಾಂಕುಗಳ ಮತ್ತು ಇತರೆ ಹಣಕಾಸು ಸಂಸ್ಥೆಗಳಿಗೆ ಒದಗಿಸಲಾಗಿಸಲಾಗುತ್ತಿದೆ.

English summary
After successfully launched Kaveri the online portal for property registration and other services - the Karnataka government has started for the second phase aimed at making sub-registrar offices paperless.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X