ಶಿಕ್ಷಕರ ಹೆಸರಿನ ಮುಂದೆ ‘Tr.’ ಬಿರುದು: ಗೌರವ ಸೂಚಿಸಲು ಸರ್ಕಾರದ ಮಹತ್ವದ ನಿರ್ಧಾರ – ಡಿ.ಕೆ. ಶಿವಕುಮಾರ್

ಕೂಡ್ಲಿಗಿ: ಶಿಕ್ಷಕರ ವೃತ್ತಿಗೆ ಮತ್ತಷ್ಟು ಗೌರವ ಮತ್ತು ಸಾಮಾಜಿಕ ಮನ್ನಣೆ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಶಿಕ್ಷಕರ ಹೆಸರಿನ ಮುಂದೆ ಅವರ ವೃತ್ತಿಯನ್ನು ಸೂಚಿಸುವ 'Tr.' (Teacher) ಬಿರುದನ್ನು ಬಳಸಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಶಿಕ್ಷಕರ ಸೇವೆ ಹಾಗೂ ಸಮಾಜ ನಿರ್ಮಾಣದಲ್ಲಿ ಅವರ ಪಾತ್ರವನ್ನು ಗುರುತಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಜಾಸೇವೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿ, ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

Karnataka Teachers to Use Tr Title Before Names Said That State Chief Minister D K Shivakumar

ಅಕ್ಷರ ಸೇವೆ ಪರಮಾತ್ಮನ ಸೇವೆ

ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ಇನ್ನುಮುಂದೆ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ Tr. ಎಂದು ಬಿರುದು ಹಾಕಿಕೊಳ್ಳಬಹುದು. ರಾಜ್ಯದಲ್ಲಿ 4.50 ಲಕ್ಷ ಶಿಕ್ಷಕರಿದ್ದಾರೆ. ನಮ್ಮ ಸಮಾಜದಲ್ಲಿ ಇಬ್ಬರು ದೇವರನ್ನು ಕಾಣುತ್ತೇವೆ. ಮೊದಲನೆಯದು ಜನ್ಮ ನೀಡಿದ ತಂದೆ ತಾಯಿ, ಎರಡನೆಯದು ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು. ಅಕ್ಷರ ಸೇವೆ ಪರಮಾತ್ಮನ ಸೇವೆ. ಹೀಗಾಗಿ ಅವರಿಗೆ ಬಿರುದು ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಸರ್ಕಾರಿ ಶಾಲೆ ಮಕ್ಕಳಿಗೆ 7.5% ಮೀಸಲಾತಿ

ಯಾವುದೇ ಸ್ವಾರ್ಥ ಇಲ್ಲದೆ ಸಮಾಜವನ್ನು ತಿದ್ದಿ ಮಾರ್ಗದರ್ಶನ ನೀಡುವ ವೃತ್ತಿ ಶಿಕ್ಷಕ ವೃತ್ತಿ. ದೇಶಕ್ಕೆ ಸೈನಿಕ, ಕಾರ್ಮಿಕ, ಶಿಕ್ಷಕ, ಕೃಷಿಕ ಆಧಾರ ಸ್ತಂಭಗಳು. ಅವರಿಗೆ ನಾವು ಗೌರವ ನೀಡಬೇಕು. ಇದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು. ಹಳ್ಳಿಗಳಲ್ಲಿ ವ್ಯಾಸಂಗ ಮಾಡುವ ಸರ್ಕಾರಿ ಶಾಲೆ ಮಕ್ಕಳಿಗೆ 7.5% ಮೀಸಲಾತಿ ನೀಡಲು ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಸರ್ಕಾರದ ಯಶಸ್ಸು ಜಾಹಿರಾತಿನಲ್ಲಿ ಇರುವುದಿಲ್ಲ. ಜನರ ಮುಖದಲ್ಲಿ ನಗು ಮೂಡಿದೆ ಎಂಬುದೇ ಯಶಸ್ಸಿನ ಮಾನದಂಡ. ಜನ ಸೇವೆಯೇ ಜನಾರ್ಧನ ಸೇವೆ ಎಂದು ಭಾವಿಸಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಸೇವೆ ಮಾಡಲು 136 ಸೀಟು ನೀಡಿ ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸಲು ಅವಕಾಶ ಕೊಟ್ಟಿದ್ದೀರಿ. ಇದು ಕೇವಲ ಸರ್ಕಾರ ಕಾರ್ಯಕ್ರಮ ಅಲ್ಲ. ಜನ ಸರ್ಕಾರದ ಬಳಿ ಹೋಗುವ ಕಾಲ ಹೋಗಿ, ಸರ್ಕಾರ ಜನರ ಬಳಿಗೆ ಹೋಗುವ ಕಾಲ ಬಂದಿದೆ.

ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ವಿಧಾನಸೌಧ, ಜಿಲ್ಲಾ ಹಾಗೂ ತಾಲೂಕು, ಸರ್ಕಾರಿ ಕಚೇರಿಯಲ್ಲಿ ಕೂತು ಅಧಿಕಾರಿಗಳು ಕೆಲಸ ಮಾಡುವುದಲ್ಲ. ಜನರ ಕಷ್ಟ ಕೇಳಿ, ಅವರ ಸಮಸ್ಯೆ ಬಗೆಹರಿಸಲು ಹೊಸ ಇಲಾಖೆ ಆರಂಭೀಸಿದ್ದೇವೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ನನ್ನನ್ನು ಪ್ರಜಾಸೇವಕ ಎಂದು ಕರೆಯಿರಿ

ಸಂಸದ ಜಿ ಸಿ ಚಂದ್ರಶೇಖರ ಅವರು ನನ್ನನ್ನು ನಾಡಿನ ದೊರೆ ಎಂದು ಸಂಬೋಧನೆ ಮಾಡಿದರು. ಆದರೆ, ನಾನು ನಾಡಿನ ದೊರೆ ಅಲ್ಲ, ಪ್ರಜಾಸೇವಕ ಎಂದು ಕರೆಯಬೇಕು. ನನಗೆ ಅದಕ್ಕಿಂತ ದೊಡ್ಡ ಸಂತೋಷ ಬೇರೆ ಇಲ್ಲ ಎಂದು ಮನವಿ ಮಾಡಿದರು.

ದೊರೆಗಳ ಕಾಲ ಹೋಗಿ ಪ್ರಜಾಪ್ರಭುತ್ವ ಬಂದಿದೆ. ಪ್ರಜೆಗಳ ಬದುಕಿನಲ್ಲಿ ಬದಲಾವನೆ ತರಲು ಇಲಾಖೆ ತರಲಾಗಿದೆ. ಇದು ಕೇವಲ ಇಲಾಖೆ ಮಾತ್ರವಲ್ಲ. ಜನರ ಸಮಸ್ಯೆ ಆಲಿಸಿ, ಸ್ಪಂದಿಸಿ ಪರಿಹಾರ ನೀಡಲು ಈ ತೀರ್ಮಾನ ಮಾಡಿದ್ದೇವೆ. ಎಲ್ಲರೂ ಡಿಸಿ ಕಚೇರಿ, ಮಂತ್ರಿ ಕಚೇರಿ, ವಿಧಾನಸೌಧಕ್ಕೆ ಬರಲು ಆಗುವುದಿಲ್ಲ. ನಮ್ಮ ಅವಧಿಯಲ್ಲಿ ಈ ಪರಿಸ್ಥಿತಿ ಬದಲಾಗಿ, ಅಧಿಕಾರಿಗಳು ಜನರನ್ನು ಹುಡುಕಿಕೊಂಡು ಹೋಗಬೇಕು ಎಂದು ಕರೆ ನೀಡಿದರು.

ಕೂಡ್ಲಿಗಿಯಲ್ಲಿರುವ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮ ಇರುವ ಜಾಗಕ್ಕೆ ನಾವು ಹೋಗಿ ನಮಿಸಿದ್ದೇವೆ. ಅವರ ಚಿಂತನೆಯ ಹಾದಿಯಲ್ಲಿ ಮುನ್ನಡೆಯಲು ಶಕ್ತಿ ನೀಡುವಂತೆ ಮಹಾತ್ಮನಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಆಡಳಿತ ಸಮಾಜದ ಕೊನೆ ವ್ಯಕ್ತಿಯನ್ನು ತಲುಪಬೇಕು ಎಂಬುದು ಗಾಂಧೀಜಿ ಅವರ ಸಂದೇಶ. ನಾವು ಬಸವಣ್ಣನ ನಾಡಿನಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಅವರ ಐಕ್ಯ ಸ್ಥಳಕ್ಕೆ ಹೋಗಿ ಪೂಜೆ ಸಲ್ಲಿಸಿ, ಬರ ಪ್ರದೇಶದ ರೈತರ ಸಮಸ್ಯೆ ನೋಡಿ ಇಲ್ಲಿಗೆ ಬದಿರುವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+