ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 18-44 ಲಸಿಕೆ ಹಾಕುವ ಕಾರ್ಯ ಸ್ಥಗಿತ

|
Google Oneindia Kannada News

ಬೆಂಗಳೂರು, ಮೇ 12; ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿನ ವಿರುದ್ಧದ ಲಸಿಕೆ ಪಡೆಯಲು ಜನರು ಕ್ಯೂ ನಿಲ್ಲುತ್ತಿದ್ದಾರೆ. ಆದರೆ ಮೇ 14ರಿಂದ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.

Recommended Video

ಮತ್ತೆ ಎಡವಟ್ಟು ಮಾಡಿದ ರಾಜ್ಯ ಸರ್ಕಾರ!! | Oneindia Kannada

ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. 18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣವನ್ನು 14/5/2021ರಿಂದ ಮುಂದಿನ ಆದೇಶದ ತನಕ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕದಲ್ಲಿ ಲಸಿಕೆ ಕೊರತೆ; ಮುಖ್ಯ ಕಾರ್ಯದರ್ಶಿಗಳು ಹೇಳಿದ್ದೇನು? ಕರ್ನಾಟಕದಲ್ಲಿ ಲಸಿಕೆ ಕೊರತೆ; ಮುಖ್ಯ ಕಾರ್ಯದರ್ಶಿಗಳು ಹೇಳಿದ್ದೇನು?

ಜನರು ಈಗಾಗಲೇ ಲಸಿಕೆಗಾಗಿ ಸಮಯವನ್ನು ನಿಗದಿ ಮಾಡಿಕೊಂಡಿದ್ದರೂ ಸಹ ಲಸಿಕೆ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಈಗಿರುವ ಲಸಿಕೆ ದಾಸ್ತಾನನ್ನು 2ನೇ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಲಸಿಕಾಕರಣಕ್ಕೆ ಮಾತ್ರ ಬಳಸಲು ತೀರ್ಮಾನಿಸಲಾಗಿದೆ.

 ರಾಜ್ಯದಲ್ಲಿ ಲಸಿಕೆ ವಿತರಣೆ: ಎರಡರಲ್ಲಿ ಒಂದನ್ನಾದರೂ ಸರಿಯಾಗಿ ಮುಗಿಸಿ! ರಾಜ್ಯದಲ್ಲಿ ಲಸಿಕೆ ವಿತರಣೆ: ಎರಡರಲ್ಲಿ ಒಂದನ್ನಾದರೂ ಸರಿಯಾಗಿ ಮುಗಿಸಿ!

Karnataka Temporarily Suspend Vaccination For 18 To 44 Age Group

7/5/2021ರಿಂದ ರಾಜ್ಯ ಸರ್ಕಾರವು ಭಾರತ ಸರ್ಕಾರದಿಂದ 45+ ವಯೋಮಾನದವರ ಲಸಿಕಾಕರಣಕ್ಕಾಗಿ ಹಂಚಿಕೆಯಾದ ಲಸಿಕೆಗಳನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳಿಗೆ ಬಳಕೆ ಮಾಡಲಾಗುತ್ತದೆ.

ಲಸಿಕೆ ಕೊರತೆ; ಸರ್ಕಾರದ ಗಮನ ಸೆಳೆದ ಕೃಷ್ಣ ಬೈರೇಗೌಡ ಲಸಿಕೆ ಕೊರತೆ; ಸರ್ಕಾರದ ಗಮನ ಸೆಳೆದ ಕೃಷ್ಣ ಬೈರೇಗೌಡ

ಆದ್ದರಿಂದ ರಾಜ್ಯದಲ್ಲಿ ಇರುವ ಎಲ್ಲಾ ಲಸಿಕೆ (ಕೇಂದ್ರದಿಂದ ಒದಗಿಸಿದ್ದು, ರಾಜ್ಯ ಸರ್ಕಾರ ನೇರವಾಗಿ ಖರೀದಿಸಿದ) ಪೂರ್ಣ ದಾಸ್ತಾನನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಲಸಿಕಾಕರಣಕ್ಕೆ ಮಾತ್ರ ಬಳಸಲಾಗುತ್ತದೆ.

photo

ಈ ಆದೇಶ ಕೋವಿಡ್ ಲಸಿಕಾರಣ ನಡೆಸುತ್ತಿರುವ ಎಲ್ಲಾ ಸರ್ಕಾರಿ ಕೋವಿಡ್ ಕೇಂದ್ರಗಳಿಗೆ ಅನ್ವಯವಾಗುತ್ತದೆ ಎಂದು ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

English summary
Karnataka health department temporarily suspend the vaccination for 18-44 age group at all government Covid vaccination centres from May 14, 2021. Available vaccines will be used for people for second dose.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X