ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಪಠ್ಯ ವಾಪಸ್ ಪಡೆಯುತ್ತೇನೆ ಎಂದ ಸಾಹಿತಿಗಳೊಂದಿಗೆ ಚರ್ಚಿಸುತ್ತೇನೆ: ಸಿಎಂ

|
Google Oneindia Kannada News

ಉಡುಪಿ, ಜೂನ್ 1: ಪಠ್ಯ ಪುಸ್ತಕಗಳಿಂದ ತಮ್ಮ ಪಾಠವನ್ನು ಪ್ರಕಟಿಸುವುದು ಬೇಡ, ಈಗಾಗಲೇ ನೀಡಿರುವ ಅನುಮತಿಯನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಪತ್ರ ಬರೆದಿರುವ ಸಾಹಿತಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ನಾಳೆ (ಜೂ 2) ವರದಿ ದೊರೆಯಲಿದ್ದು, ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಅಂಗವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

Karnataka Text Book Row : Will Discuss with Writer who asked to remove text says CM Basavaraj Bommai

ಪಠ್ಯಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಪಠ್ಯದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ ವರದಿಯನ್ನು ಕೇಳಲಾಗಿದೆ. ಸ್ವಾಮೀಜಿಗಳು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದರು.

ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ , ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿ ಆ ಅಧಿಕಾರವಿದೆ ಎಂದರು.

ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಸದ್ದುಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಇದಕ್ಕಾಗಿ ಕಾನೂನು ರೂಪಿಸಲಾಗಿದ್ದು, ಯಾರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದರು.

English summary
Karnataka Text Book Row : Will Discuss with Writer who asked to remove text from school books says CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X