ಪಠ್ಯಗಳ ಬಗ್ಗೆ ಪಟ್ಟು ಬಿಡದ ಸರ್ಕಾರ: ಸಣ್ಣ ಮಾರ್ಪಾಡು ಮಾಡಿ ಚಕ್ರತೀರ್ಥ ಪಠ್ಯವೇ ಬೋಧಿಸಲು ನಿರ್ಧಾರ
ಬೆಂಗಳೂರು, ಜೂ. 3: ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ಕೈಬಿಡಬೇಕು ಎಂದು ನಾಡಿನ ಮಠಾಧೀಶರು, ಸಾಹಿತಿಗಳು ಒತ್ತಾಯ ಮಾಡಿರುವುದರ ಮಧ್ಯೆಯೂ ಸಹ ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಪರಿಷ್ಕೃತ ಪಠ್ಯವನ್ನೇ ಮುಂದುವರಿಸಲು ನಿರ್ಧರಿಸಿದೆ.
ರೋಹಿತ್ ಚಕ್ರತಿರ್ಥ ಸಮಿತಿ ಪರಿಷ್ಕರಿಸಿರುವ ಪಠ್ಯಗಳ ಬಗ್ಗೆ ನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರಕ್ಕೂ ಸಹ ಇದು ಮುಜುಗರ ತಂದಿತ್ತು. ಆದರೆ, ಸರ್ಕಾರ ಮಾತ್ರ ತನ್ನ ನಿಲುವುನಿಂದ ಹಿಂದೆ ಸರಿದಂತೆ ಕಾಣುತ್ತಿಲ್ಲ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆದಿರುವ ಬೆಳವಣಿಗೆಗಳ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶುಕ್ರವಾರ ಸರ್ಕಾರಕ್ಕೆ ವರದಿ ನೀಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡರಾತ್ರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿಯ ಹೇಳಿಕೆಯ ಸಾರಾಂಶ ಹೀಗಿದೆ..
ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ.

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು.
ಆದಿಚುಂಚನಗಿರಿ ಪೀಠದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ / ಆಕ್ಷೇಪಣೆಗಳಿಗೆ ಸ್ಪಷ್ಟೀಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟೀಕರಣವನ್ನು ಕೊಡಲಾಗಿದೆ. ಪ್ರಸ್ತುತ ಆಕ್ಷೇಪ ಮಾಡಿರುವಂತೆ ಮಹಾನ್ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ.
ಸರ್ಕಾರದ ನಿರ್ಧಾರಗಳು ಹೀಗಿವೆ...
1) ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.
2) ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.
3) ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.
4) ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದೆ.
5) ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.
Recommended Video
6) ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications