BPL Card: ರಾಜ್ಯದಲ್ಲಿ ಬಿಪಿಎಲ್‌ ಪಡಿತರ ಚೀಟಿ ರದ್ದು & ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಬಗ್ಗೆ ಮಹತ್ವದ ಮಾಹಿತಿ

BPL Ration Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಈ ನಡುವೆಯೇ ಇದೀಗ ಎಷ್ಟು ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ ಹಾಗೂ ಎಣ್ಣೆ, ಬೇಳೆ ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಯಾವಾಗಿನಿಂದ ಎನ್ನುವ ಮಹತ್ವದ ಮಾಹಿತಿಯೊಂದನ್ನು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ನೀಡಿದ್ದಾರೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಿಪಿಎಲ್ ಕಾರ್ಡ್ ಒಂದು ಸಹ ರದ್ದಾಗುವುದಿಲ್ಲ. ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ರದ್ದಾಗಲಿವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅನರ್ಹರ ಬಳಿಯ ಪಡಿತರ ಚೀಟಿಗಳನ್ನು ಮಾತ್ರ ರದ್ದು ಮಾಡಿ ಎಪಿಎಲ್‌ಗೆ ಬದಲಾಯಿಸುತ್ತೇವೆ ಎಂದು ಹೇಳಿದರು.

Karnataka to Cancel Fake BPL Ration Cards Nutritional Food Distribution to Resume Soon

ಶೇಕಡ 15ರಷ್ಟು ಬಿಪಿಎಲ್ ಪಡಿತರ ಕಾರ್ಡ್‌ಗಳಷ್ಟೇ ರದ್ದಾಗಲಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗುವುದು. ಯಾವುದೇ ಫಲಾನುಭವಿಗಳಿಗೂ ಮೋಸ ಆಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ: ರಾಜ್ಯ ಸರ್ಕಾರ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ (ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆದುಹಾಕಲು)ಗೆ ಅವಕಾಶ ಕಲ್ಪಿಸಿದೆ.

ಬೆಂಗಳೂರು ಒನ್, ಗ್ರಾಮ ಒನ್, ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಸಹ ಆನ್‌ಲೈನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?

* ಹೆಸರು ಸೇರ್ಪಡೆ
* ವಿಳಾಸ ಬದಲಾವಣೆ
* ಹೆಸರು ತೆಗೆದುಹಾಕುವುದು
* ಇಕೆವೈಸಿ
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಫೋಟೋ ಬದಲಾವಣೆ

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು

* ಸದಸ್ಯರ ಆಧಾರ ಕಾರ್ಡ್
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ

ಪತ್ನಿ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು

* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ

ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು

* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್

ಅರ್ಜಿ ಸಲ್ಲಿಸುವ ವಿಧಾನಗಳು

* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಆಯ್ಕೆ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
* ನಂತರ ಕೇಳಲಾದ ಎಲ್ಲ ದಾಖಲೆಗಳನ್ನ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್‌ ಮಾಡಿ ಫಾರ್ಮ್ ಅನ್ನು ಸಬ್ಮೀಟ್ ಮಾಡಿ
* ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ನಿಮ್ಮ ಮನಗೆ ಅಪ್ಡೇಟ್‌ ಆಗಿರುವ ಹೊಸ ಪಡಿತರ ಚೀಟಿ ಬರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+