ಬರಗಾಲ ಘೋಷಣೆ, ರೈತರ ಸಾಲ ಮನ್ನಾ ಬಗ್ಗೆ ಡಿಕೆ ಶಿವಕುಮಾರ್ ಮಹತ್ವ ಮಾಹಿತಿ

ಕಲಬುರಗಿ: ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಕೈ ಕೊಟ್ಟಿದ್ದ ಮುಂಗಾರು ಮಳೆ ಜುಲೈ ಆರಂಭದಲ್ಲಿ ಚುರುಕಾಗಿದೆ. ಪ್ರಮುಖ ನದಿಗಳ ಒಳಹರಿವು ಹೆಚ್ಚಾಗಿದೆ. ಅಂದ ಮಾತ್ರಕ್ಕೆ ಬರಗಾಲ ಮುಗಿಯಿತು ಅಂತಲ್ಲ. ಮಳೆ ಕೊರತೆಯಿಂದಾಗಿ ಈಗಾಗಲೇ ಸಾಕಷ್ಟು ರೈತರು ಸಂಕಷ್ಟ ಅನುಭವಿಸಿದ್ದಾರೆ. ಈ ಬಗ್ಗೆ ಸಮೀಕ್ಷೆ ಕೈಗೊಂಡು ಪರಿಹಾರ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಸರ್ಕಾರ ಬರಗಾಲ ಕುರಿತು ತಡವಾಗಿ ಪ್ರತಿಕ್ರಿಯಿಸಿದೆ. ಕಲಬುರಗಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಹಾಗೂ ರೈತರ ಸಾಲ ಮನ್ನ ಕುರಿತು ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ಕಲಬುರಗಿ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Karnataka

ಬರಗಾಲ ಪರಿಶೀಲನೆಗೆಂದೆ ಬಂದಿದ್ದೇನೆ: ಸಿಎಂ

ಕಲ್ಯಾಣ ಕರ್ನಾಟಕದ ಭಾಗದ ಬರಗಾಲ ಪರಿಶೀಲನೆಗೆಂದೇ ನಾನು ಇಲ್ಲಿಗೆ ಬಂದಿದ್ದೇನೆ. ಜನರು ಮತ್ತು ಜನಪ್ರತಿನಿಧಿಗಳನ್ನು ಭೇಟಿ ಮಾಡಿದ್ದೇನೆ. ಇಲ್ಲಿನ ಪರಿಸ್ಥಿತಿಯ ಅವಲೋಕನಕ್ಕೆ ಸಭೆ ನಡೆಸುತ್ತಿದ್ದೇನೆ. ಅದೇ ರೀತಿ ಎರಡು ಮೂರು ದಿನ ಬಿಟ್ಟು ಬೆಳಗಾವಿಗೂ ಭೇಟಿ ನೀಡುತ್ತಿದ್ದೇನೆ. ಈ ಭಾಗಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲಾಗುವುದು. ಸಮಸ್ಯೆ ಬಗೆಹರಿಸಬೇಕು ಎಂದು ಜನರು ಬೇಡಿಕೆಗಳನ್ನು ಮಂಡಿಸಿದ್ದಾರೆ. ಅವರ ಸಮಸ್ಯೆ ಆಲಿಸಲು ಹೊಸದಾಗಿ ಪ್ರಜಾಸೇವಾ ಇಲಾಖೆ ಸ್ಥಾಪಿಸಿ, ಸಚಿವರನ್ನು ನೇಮಕ ಮಾಡಲಾಗಿದೆ. ಜನರ ಅರ್ಜಿಗಳನ್ನು ಪರಿಶೀಲಿಸಿ ಅವರಿಗೆ ಸಾಧ್ಯವಾದಷ್ಟು ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

School Holiday: ಭಾರೀ ಮಳೆ! ಇಂದು ಕರ್ನಾಟಕದ 14 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ, ಎಲ್ಲೆಲ್ಲಿ?
School Holiday: ಭಾರೀ ಮಳೆ! ಇಂದು ಕರ್ನಾಟಕದ 14 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ, ಎಲ್ಲೆಲ್ಲಿ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಗೆ ಬಂದಾಗ ಸರಕಾರಿ ಅತಿಥಿ ಗೃಹದ ಆವರಣ ಜನರಿಂದ ಅಹವಾಲುಗಳನ್ನು ಸ್ವೀಕರಿಸಿದ್ದರು. ಅಂದು ನೀಡಿದ ಬರಗಾಲ, ಮಳೆ ಕೊರತೆ, ಸ್ಥಳೀಯ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದರು. ಅದೆಲ್ಲ ಪರಿಸ್ಥಿತಿಯನ್ನು ಕಣ್ಣಾರೆ ನೋಡಲೆಂದೇ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ ಎಂದು ತಿಳಿಸಿದರು.

ರೈತರ ಸಾಲಮನ್ನಾ ಬಗ್ಗೆ ಸಿಎಂ ಹೇಳಿದ್ದೇನು?

ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ರೈತರ ಸಾಲ ಮನ್ನಾ ವಿಚಾರ ಪ್ರಶ್ನೆಗೆ ಉತ್ತರಿಸಿದ ಅವರು, 'ಎಲ್ಲಿಯ ಸಾಲ, ಯಾವ ಸಾಲ ಎಂಬುದನ್ನು ಪರಿಶೀಲನೆ ಮಾಡೋಣ' ಎಂದಷ್ಟೇ ಹೇಳಿದರು. ಸಕಾರಾತ್ಮಕ ಭರವಸೆ ನೀಡಲು ಮುಂದಾಗಲಿಲ್ಲ.

ಭಾರತ್ ಜೋಡೋ ಯುವಕ ಸಂಘ ಸ್ಥಾಪನೆ

ಬೀದರ್ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನೆನ್ನೆ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಯುವಕರಲ್ಲಿ ಕ್ರೀಡೆ, ಸಂಸ್ಕೃತಿ, ಭ್ರಾತೃತ್ವ, ಸಾಂವಿಧಾನಿಕ ಮೌಲ್ಯಗಳು ಹಾಗೂ ಸಂಘಟನೆಯನ್ನು ಬಲವರ್ಧನೆಗೊಳಿಸಲು ನಾವು ಭಾರತ್ ಜೋಡೋ ಯುವಕ ಸಂಘವನ್ನು ಸ್ಥಾಪಿಸಲಿದ್ದೇವೆ. ಇದರೊಂದಿಗೆ 72,000 ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಿದ್ದೇವೆ ಹಾಗೂ ಇ-ಖಾತಾದಂತಹ ಸುಧಾರಿತ ವ್ಯವಸ್ಥೆಗಳನ್ನು ತಂದಿದ್ದೇವೆ. ಇನ್ನು 5 ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸಲಿದ್ದೇವೆ ಎಂದರು.

ಕೊರೋನಾ ಸಂಕಷ್ಟದ ಸಮಯದಲ್ಲಿ ಅಧಿಕಾರ ವಹಿಸಿಕೊಂಡು, ಕಳೆದ ಆರು ವರ್ಷಗಳ ಕಾಲ‌ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಅಲ್ಲಿಂದ ನಾವು ಹಲವಾರು ಚುನಾವಣೆಗಳನ್ನು ಎದುರಿಸಿದ್ದೇವೆ. ಆ ಸಮಯದಲ್ಲಿ ನಮಗೆ ಶಕ್ತಿ ತುಂಬಿದ್ದು ನಮ್ಮ ಕಾರ್ಯಕರ್ತರು. ನಾವೆಲ್ಲಾ ಒಟ್ಟಾಗಿ ಸೇರಿ 136 ಸೀಟುಗಳನ್ನು ಗೆದ್ದೆವು. ನಾನೊಬ್ಬ ಕಾರ್ಯಕರ್ತನಾಗಿ ಬೆಳೆದು ಬಂದವನು. ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+