ಹೊಸ ಇಲಾಖೆ ರಚಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ
ಸದ್ಯ ರಾಜ್ಯದಲ್ಲಿರುವ ವಿವಿಧ ಇಲಾಖೆಗಳ ಜೊತೆಗೆ ಮತ್ತೊಂದು ಹೊಸ ಇಲಾಖೆ ರಚಿಸುವ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಆಯೋಜಿಸಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣ ಉದ್ದಿಮೆಗಳಿಗಾಗಿ (ಎಂಎಸ್‌ಎಂಇ) ಮುಂದಿನ ದಿನಗಳಲ್ಲಿ ಪ್ರತ್ಯೇಕ ಇಲಾಖೆ ರಚಿಸಿ, ಅದಕ್ಕೆ ಕಾರ್ಯದರ್ಶಿಯನ್ನು ಕೂಡ ನೇಮಕ ಮಾಡಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ಪ್ರತ್ಯೇಕ ಸಭೆ ಕರೆದು, ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಂಸ್ಥೆಯ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಸಭೆ ಕರೆದು, ತೀರ್ಮಾನಕ್ಕೆ ಬರಲಾಗುವುದು. ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಉದ್ಯೋಗಗಳಿಗೆ ಅಭ್ಯರ್ಥಿಗಳಿಗೆ ತರಬೇತಿ ನೀಡಿ ತಯಾರು ಮಾಡಬೇಕು. ಅವರಿಗೆ ಕೌಶಲ್ಯಾಭಿವೃದ್ಧಿ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ಮೊದಲಿನಿಂದಲೂ ಕಾಸಿಯಾ ಸಂಸ್ಥೆಗೆ ಬೆಂಬಲ ನೀಡುತ್ತಾ ಬಂದಿದೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕು. ಈ ಬಗ್ಗೆ ಆಸಕ್ತಿ ಮತ್ತು ಶಕ್ತಿ ಎರಡೂ ಇರಬೇಕು. ಕೌಶಲ್ಯ ಇಲ್ಲದವರಿಗೆ ತರಬೇತಿ ನೀಡಬೇಕು. ಆ ಮೂಲಕ ಅವರನ್ನು ಕೆಲಸಕ್ಕೆ ಯೋಗ್ಯರನ್ನಾಗಿಸಬೇಕು ಎಂದು ಹೇಳಿದ್ದಾರೆ.

1947ರಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಆರಾಧ್ಯ ಅವರು 15 ಜನ ಸದಸ್ಯಯರನ್ನೊಳಗೊಂಡ ಈ ಸಂಸ್ಥೆಯನ್ನು ಸಣ್ಣ ಕೊಠಡಿಯೊಂದರಲ್ಲಿ ಪ್ರಾರಂಭಿಸಿದ್ದು, ಇಂದು 13 ಸಾವಿರ ಸದಸ್ಯರನ್ನು ಹೊಂದಿದೆ. ಸಂಘಟನೆಯ ದೃಷ್ಟಿಯಿಂದ ರಜತ, ಸುವರ್ಣ ಹಾಗೂ ಅಮೃತ ಮಹೋತ್ಸವ ಪ್ರಮುಖವಾದ ಮೈಲಿಗಲ್ಲುಗಳು. ಅಮೃತ ಮಹೋತ್ಸವ ಸಮಾರಂಭದಲ್ಲಿ ಕನಿಷ್ಠ ಒಂದು ಸಾವಿರ ಜನರಾದರೂ ಭಾಗವಹಿಸಬೇಕಿತ್ತು. ಸಂಸ್ಥೆಯ ಸದಸ್ಯತ್ವ ಒಂದು ಲಕ್ಷಕ್ಕೆ ಏರಲಿ ಎಂದು ಹಾರೈಸುತ್ತೇನೆ. ಎಂಎಸ್ಎಂಇಗಳು ಬೆಳೆದರೆ ರಾಜ್ಯದ ಅಭಿವೃದ್ಧಿಯಾಗಲು ಸಾಧ್ಯ ಎಂದಿದ್ದಾರೆ.
ಕಾಸಿಯಾ ಕೇವಲ ಉದ್ಯೋಗದಾತ ಮಾತ್ರವಲ್ಲದೆ, ರಾಜ್ಯದ ಅಭಿವೃದ್ಧಿಯ ಪಾಲುದಾರರೂ ಹೌದು. ರಾಜ್ಯದ ಅಭಿವೃದ್ಧಿಯಾದಂತೆ ತಲಾದಾಯ ಕೂಡ ಹೆಚ್ಚಾಗುತ್ತೆ. ಕರ್ನಾಟಕ ಅಭಿವೃದ್ಧಿಶೀಲ ರಾಜ್ಯ. 20 ಲಕ್ಷಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿ 185 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಾಗಿದೆ. ಇದು ಇನ್ನೂ ಹೆಚ್ಚಾಗಬೇಕೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.
ದಾಬಸ್‌ಪೇಟೆಯಲ್ಲಿ 400 ಎಕರೆ ಮಂಜೂರು
ಕರ್ನಾಟಕದಲ್ಲಿ ಸುಮಾರು 7 ಕೋಟಿ ಜನಸಂಖ್ಯೆ ಇದೆ. ಕೃಷಿ ಕ್ಷೇತ್ರವನ್ನು ಬಿಟ್ಟರೆ, ಹೆಚ್ಚು ಉದ್ಯೋಗ ನೀಡುವುದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಾಗಿವೆ. ಈ ಹಿಂದೆ ದಾಬಸ್‌ಪೇಟೆಯಲ್ಲಿ 400 ಎಕರೆ ಪ್ರದೇಶವನ್ನು ಕಾಸಿಯಾದವರಿಗೆ ಮಂಜೂರು ಮಾಡಿಕೊಟ್ಟಿದ್ದೇವೆ. ಮಾರುಕಟ್ಟೆ ದರದ ಅರ್ಧದಷ್ಟು ದರದಲ್ಲಿ ಇದನ್ನು ಮಂಜೂರು ಮಾಡಿದ್ದು, ಕೌಶಲ್ಯ ಅಭಿವೃದ್ಧಿ ನೀಡುವ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ದೇಶದಲ್ಲಿ ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಕೈಗಾರಿಕೆ ಬೆಳವಣಿಗೆಗೆ ಯತ್ನಿಸಲಾಗುತ್ತಿದೆ. ಕೈಗಾರಿಕೆಗಳ ಹೂಡಿಕೆಗೂ ಕಾನೂನು ಸುವ್ಯಸ್ಥೆಗೂ ನೇರವಾದ ಸಂಬಂಧವಿರುವುದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಸಿಎಂ ವಿವರಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications