ಸೆಪ್ಟಂಬರ್ 22ರಿಂದ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆ: ವರದಿ ಜಾರಿ ಯಾವಾಗ?: ಶಿವರಾಜ್ ತಂಗಡಗಿ
ಬೆಂಗಳೂರು, ಸೆಪ್ಟಂಬರ್ 20: ಇದೇ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ರಾಜ್ಯದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸಮೀಕ್ಷೆ ಜಾರಿ ಬಗ್ಗೆ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕ ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ ನಲ್ಲಿ ಸಮೀಕ್ಷೆ ಪೂರ್ಣಗೊಂಡು ಡಿಸೆಂಬರ್ ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯನ್ನು ಸರ್ಕಾರ ಜಾರಿ ಮಾಡುವ ಕೆಲಸವನ್ನು ಮಾಡಿಯೇ ಮಾಡುತ್ತದೆ ಎಂದು ಹೇಳಿದರು.

ದೊಡ್ಡ ಕಾರ್ಯಕ್ಕೆ ಸರ್ಕಾರ ಕೈ ಹಾಕಿದ್ದು, ಇದು ನಮಗೆ ಸವಾಲಿನ ಕೆಲಸ ಕೂಡ. ಇದರಲ್ಲಿ ಯಶಸ್ವಿಯೂ ಕೂಡ ಆಗುತ್ತೇವೆ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- ಪುಟ್ಟ ಲೋಪಗಳು ಸಹಜ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇನ್ನೂ ಕೆಲವೊಂದು ಗೊಂದಲಗಳ ಬಗ್ಗೆ ಚರ್ಚೆ ನಡೆಸಿ ಆಯೋಗಕ್ಕೆ ಸಲಹೆ ನೀಡಿದ್ದೇವೆ. ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಕೇವಲ ಸಲಹೆ ನೀಡಬಹುದು. ಆಯೋಗದವರು ಸಂಪೂರ್ಣ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಆ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗಳಾಗಲಿವೆ ಎಂದರು.
ನಾನು ಮತ್ತೆ-ಮತ್ತೆ ಹೇಳುತ್ತಿದ್ದೇನೆ ಇದು ಜಾತಿ ಸಮೀಕ್ಷೆ ಅಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ರಾಜ್ಯದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕೆಂಬ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕ್ರಿಶ್ಚಿಯನ್ ಕುರುಬ ಎಂದು ಬರೆಸಿಲ್ಲ: ಸಚಿವ
ಕ್ರಿಶ್ಚಿಯನ್ ಜಂಗಮ, ಕ್ರಿಶ್ಚಿಯನ್ ಕುರುಬ ಎಂಬ ಕಾಲಂ ಸೃಷ್ಟಿ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲಿ, ನಾನಾಗಲಿ ಅಥವಾ ಆಯೋಗದವರಾಗಲಿ ಬರೆಸಿಲ್ಲ. ಇಂದಿನ ಕಾಂತರಾಜು ಆಯೋಗದವರು ಸಮೀಕ್ಷೆ ನಡೆಸುವ ವೇಳೆ ಸಾರ್ವಜನಿಕರೇ ಈ ರೀತಿಯಾಗಿ ತಮ್ಮ ತಮ್ಮ ಸಮುದಾಯಗಳು ಎಂದು ಸ್ವ ಇಚ್ಛೆಯಿಂದ ಬರೆಸಿದ್ದಾರೆ. ಜನರು ಬರೆದಿದ್ದನ್ನು ಆಯೋಗ ಪಟ್ಟಿಯಲ್ಲಿ ಸೇರಿಸಿದೆ. ಯಾರಿಗೂ ಈ ರೀತಿ ಬರೆಯಿಸಿ ಎಂದು ಸಮೀಕ್ಷೆಗೆ ಹೋದವರು ಹೇಳಲು ಸಾಧ್ಯನಾ? ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಯಬಾರದು ಎಂದರೆ ಹೇಗೆ? ಎಂದು ಮರು ಪ್ರಶ್ನಿಸಿದರು.
ನಮ್ಮಲ್ಲಿ ಯಾವುದೇ ಅಪಸ್ವರ ಗಳಿಲ್ಲ. ಯಾವುದೇ ಸಮುದಾಯದ ನಾಯಕರ ಒತ್ತಡಗಳಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದಿದೆಯಷ್ಟೇ. ಇದಕ್ಕೆ ನಿಮ್ಮ ಭಾಷೆಯಲ್ಲಿ ವಿರೋಧ ಎನ್ನುತ್ತೀರಾ? ನಾವು ಚರ್ಚೆ ಎನ್ನುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದರು. ಬಿಜೆಪಿಗರಿಗೆ, ಬಿಜೆಪಿ ಮಂತ್ರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮಾತನಾಡಲು ಸಾಧ್ಯನಾ? ಮೋದಿಯವರು ಅವರ ಕೈಗೆ ಸಿಗುತ್ತಾರೆಯೇ? ಸುಮ್ಮನೆ ಇಲ್ಲ-ಸಲ್ಲದ ಆರೋಪ ಮಾಡುತ್ತಾರೆ. ಬಿಜೆಪಿಯವರಿಗೆ ಜಾತಿ , ಮಸೀದಿ ಕಂಡರೆ ಪ್ರೀತಿ ಎಂದು ವಾಗ್ದಾಳಿ ನಡೆಸಿದರು.
ನಮ್ಮ ಪ್ರಣಾಳಿಕೆಯಲ್ಲಿ ಸಮೀಕ್ಷೆ ಬಗ್ಗೆ ಘೋಷಣೆ ಮಾಡಿದ್ದೆವು, ಆ ನಿಟ್ಟಿನಲ್ಲಿ ನಮ್ಮ ಪಕ್ಷ ಹಾಗೂ ಸರ್ಕಾರ ಹೆಜ್ಜೆ ಇಟ್ಟಿದೆ. ಸಮಾಜದಲ್ಲಿನ ಕಷ್ಟದಲ್ಲಿರುವ ಬಡವರಿಗೆ ಸರ್ಕಾರದ ಸವಲತ್ತನ್ನು ನೀಡುವುದಾಗಿ ಹೇಳಿದ್ದೆವು. ಆ ಹಿನ್ನೆಲೆಯಲ್ಲಿ ಸಮೀಕ್ಷೆ ಕೈಗೊಳ್ಳುತ್ತಿದ್ದೇವೆ ಎಂದು ವಿವರಿಸಿದರು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications