Ration: ರಾಜ್ಯದ ಪಡಿತರ ಚೀಟಿಗಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸಚಿವ ಕೆ.ಎಚ್.ಮುನಿಯಪ್ಪ
Ration: ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡುತ್ತಲಿರುತ್ತದೆ. ಇದೀಗ ಹೊಸ ಪಡಿತರ ವಿತರಣೆ ವ್ಯವಸ್ಥೆ ಜಾರಿ ಕುರಿತು ಆಹಾರ ಸಚಿವ ಮಹತ್ವದ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸದ್ಯ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ರದ್ದುಪಡಿಸುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಈ ಮೂಲಕ ಬಡವರ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಂಡಿದ್ದ ಅನರ್ಹರ ವಿರುದ್ಧ ಸಮರ ಸಾರಿದ್ದು, ಅವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುತ್ತಿದೆ. ಇದಕ್ಕೂ ಒಂದೆಜ್ಜೆ ಮುಂದಿಟ್ಟಿದ್ದು, ದಂಡಾಸ್ತ್ರದ ಬಗ್ಗೆಯೂ ಚಿಂತನೆ ನಡೆಸಿದೆ. ಈ ನಡುವೆಯೇ ಪಡಿತರ ಚೀಟಿದಾರರಿಗೆ ಇದೀಗ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿಕೊಂಡು ಬರಲಾಗಿತ್ತು. ಆದರೆ ಇದೀಗ ಕೊನೆಗೂ ಯಾವಾಗಿನಿಂದ ಇದನ್ನು ಜಾರಿಗೊಳಿಸಲಾಗುತ್ತದೆ ಎನ್ನುವ ಮಹತ್ವದ ಅಪ್ಡೇಟ್ ಸಿಕ್ಕಿದೆ. ಪಡಿತರ ಚೀಟಿದಾರರಿಗೆ ಮುಂದಿನ ವರ್ಷದಿಂದ ಹೊಸ ಪಡಿತರ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧರಿಸಿದೆ. ಫೆಬ್ರವರಿಯಲ್ಲಿ ಇಂದಿರಾ ಕಿಟ್ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಜೋಳದ ಖರೀದಿ ಬೆಲೆ ಹಾಗೂ ಇಂದಿರಾ ಕಿಟ್ ಯೋಜನೆ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಇಂದಿರಾ ಗಾಂಧಿ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಇನ್ನು ಇಂದಿರಾ ಆಹಾರ ಕಿಟ್‌ನಲ್ಲಿ ಬೇಳೆ, ಎಣ್ಣೆ, ಉಪ್ಪು ಮತ್ತು ಸಕ್ಕರೆ ಇರುತ್ತದೆ. ಜೊತೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಾಕಷ್ಟು ಜೋಳ ದೊರಕಿಲ್ಲದಿರುವದರ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಭಾಗದ ಮಂದಿ ಅಕ್ಕಿಗಿಂತ ಜೋಳವನ್ನೇ ಹೆಚ್ಚು ಬಳಕೆ ಮಾಡುತ್ತಾರೆ. ಜೋಳ ಉತ್ಪಾದನೆ ಹಾಗೂ ಶೇಖರಣೆ ಬಗ್ಗೆ ಸಮಗ್ರ ಯೋಜನೆಯ ಅಗತ್ಯವಿದೆ ಎಂದು ಹೇಳಿದರು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ (PMGKY) ಅಡಿಯಲ್ಲಿ ಇಂದಿರಾ ಗಾಂಧಿ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಜಾರಿಗೆ ತರಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಅವರು ಘೋಷಣೆ ಮಾಡಿದರು. ಈ ಕಿಟ್ ಅನ್ನು ಇಂದಿರಾ ಕಿಟ್ ಎಂದು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದರು. ಇದರಲ್ಲಿ ಬೇಳೆ, ಎಣ್ಣೆ, ಉಪ್ಪು ಮತ್ತು ಸಕ್ಕರೆಯೂ ಇರಲಿದೆ ಎಂದು ಹೇಳಿದರು.
ಈ ಯೋಜನೆಯನ್ನು ಜನವರಿ ಅಥವಾ ಅಂತಿಮವಾಗಿ ಫೆಬ್ರವರಿ 2026ರ ವೇಳೆಗೆ ಕಾರ್ಯರೂಪಕ್ಕೆ ತರಲು ಟೆಂಡರ್ ಪ್ರಕ್ರಿಯೆ ಹಾಗೂ ಗುಣಮಟ್ಟದ ಪರಿಶೀಲನೆ ನಡೆಯುತ್ತಿದೆ ಎಂದು ಮುನಿಯಪ್ಪ ಅವರು ತಿಳಿಸಿದರು. ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಕಿಟ್‌ನಲ್ಲಿ ಆಹಾರ ಪದಾರ್ಥಗಳನ್ನು ವಿತಣೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಇದೆ.
ಈ ಯೋಜನೆಯಡಿಯಲ್ಲಿ ಒಬ್ಬರು ಅಥವಾ ಇಬ್ಬರು ಸದಸ್ಯರು ಇದ್ದರೆ ಕಿಟ್‌ನಲ್ಲಿ 750 ಗ್ರಾಂ ತೊಗರಿ ಬೇಳೆ, ಅರ್ಧ ಲೀಟರ್ ಅಡುಗೆ ಎಣ್ಣೆ, ತಲಾ ಅರ್ಧ ಕೆಜಿ ಸಕ್ಕರೆ ಮತ್ತು ಉಪ್ಪು, ಮೂವರು ಅಥವಾ ನಾಲ್ವರು ಸದಸ್ಯರಿದ್ದರೆ ಒಂದೂವರೆ ಕಿಲೋ ಗ್ರಾಂ ತೊಗರಿ ಬೇಳೆ, ಒಂದು ಲೀಟರ್ ಅಡುಗೆ ಎಣ್ಣೆ, ತಲಾ ಒಂದು ಕೆಜಿ ಸಕ್ಕರೆ ಮತ್ತು ಉಪ್ಪು, ಐವರು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿದ್ದರೆ 2,250 ಗ್ರಾಂ ತೊಗರಿ ಬೇಳೆ, ಒಂದೂವರೆ ಲೀಟರ್ ಅಡುಗೆ ಎಣ್ಣೆ, ತಲಾ ಒಂದೂವರೆ ಕೆ.ಜಿ. ಸಕ್ಕರೆ ಮತ್ತು ಉಪ್ಪು ವಿತರಣೆ ಮಾಡಲಾಗುತ್ತದೆ ಎನ್ನಲಾಗಿದೆ.
ಪಡಿತರ ಸೋರಿಕೆ ತಡೆಗೆ ಹೊಸ ಕ್ರಮ: ಇನ್ನೂ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿನ ಸೋರಿಕೆ ತಡೆಗಟ್ಟಲು 'ಎಲೆಕ್ಟ್ರಾನಿಕ್ ಪಾಯಿಂಟ್ ಸೇಲ್ಸ್' ಎಂಬ ಮೊಬೈಲ್ ಅಪ್ಲಿಕೇಶನ್ ವ್ಯವಸ್ಥೆಯನ್ನ ಪರಿಚಯಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
ಗ್ರಾಹಕರಿಗೆ ಪಡಿತರ ವಿತರಣೆ ಮಾಡುವಾಗ ತೂಕದಲ್ಲಿ ಮೋಸ ಆಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ತೂಕದ ಯಂತ್ರವನ್ನು ಬಯೋಮೆಟ್ರಿಕ್‌ಗೆ ಸಂಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ತೂಕದಲ್ಲಿ ವ್ಯತ್ಯಾಸ ಆದರೆ ಗ್ರಾಹಕರಿಗೆ ಗೊತ್ತಾಗಲಿದೆ. ಮೊಬೈಲ್ ಅಪ್ಲಿಕೇಶನ್, ಸರ್ಕಾರದ ಕೇಂದ್ರೀಕೃತ ದತ್ತಾಂಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಈ ಕೇಂದ್ರೀಕೃತ ವ್ಯವಸ್ಥೆಯಿಂದ ಫಲಾನುಭವಿಗಳು ರಾಜ್ಯದ ಯಾವುದೇ ಪ್ರದೇಶದಲ್ಲಿ ಪಡಿತರ ಪಡೆಯುವುದನ್ನು ಖಚಿತಪಡಿಸುತ್ತದೆ. ಆದ್ದರಿಂದ ರ್ನಾಟಕದಲ್ಲಿ ಇದನ್ನು ಅಳವಡಿಕೆ ಮಾಡಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications