Ration: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ನಡುವೆಯೇ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಆಹಾರ ಸಚಿವ ಕೆ.ಎಚ್.ಮುನಿಯಪ್ಪ
Ration: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಇದೀಗ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಭರ್ಜರಿ ಗುಡ್ ನ್ಯೂಸ್‌ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಏನೆಲ್ಲಾ ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಶ್ರೀಮಂತರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು. ಈ ಬಗ್ಗೆ ಕಾಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮಾಡುತ್ತಿದೆ. ಬಡವರಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಪಡಿತರ ದೊರೆಯುವಂತೆ ಮಾಡಲು ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ.

ಈ ಮೂಲಕ ಬಡವರ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದ ಅನರ್ಹರಿಗೆ ಕಡಿವಾಣ ಹಾಕುತ್ತಿದೆ. ಇದರ ಬೆನ್ನಲ್ಲೇ ಇದೀಗ ಆಹಾರ ಸಚಿವ ಗುಡ್ ನ್ಯೂಸ್ ನೀಡಿದ್ದಾರೆ. ಹೌದು.. ರಾಜ್ಯದಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಸರ್ಕಾರ ಸಿದ್ಧತೆ ನಡೆಸಿದೆ. ಹೊಸ ಮೀಸಲಾತಿ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ 3,200 ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಬೆಳಗಾವಿಯಲ್ಲಿ ಹೇಳಿದರು.
ರಾಜ್ಯದ ಗ್ರಾಮೀಣ ಭಾಗದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭ ಮಾಡುವ ಕುರಿತಂತೆ ಕಾಂಗ್ರೆಸ್‌ನ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಸರ್ಕಾರದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ ಅವರು, ನಿಯಮದಂತೆ 3 ಕಿಲೋ ಮೀಟರ್‌ಗೆ ಒಂದರಂತೆ ನ್ಯಾಯಬೆಲೆ ಅಂಗಡಿಯನ್ನು ತೆರೆಯಲಾಗುವುದು. ಮತ್ತೊಂದೆಡೆ ನ್ಯಾಯಬೆಲೆ ಅಂಗಡಿಗಳು ಇಲ್ಲದ ಕಡೆಗಳಲ್ಲಿ ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಗುಡ್ಡಗಾಡು ಭಾಗಗಳಲ್ಲಿ ಕಡಿಮೆ ಪಡಿತರ ಚೀಟಿದಾರರಿದ್ದಾರೆ. ಆದರೂ, ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುತ್ತೇವೆ. ಗ್ರಾಮಾಂತರ ಭಾಗದಲ್ಲಿ 500 ಮತ್ತು ನಗರ ಪ್ರದೇಶದಲ್ಲಿ 800 ಪಡಿತರ ಚೀಟಿಗೊಂದು ನ್ಯಾಯಬೆಲೆ ಅಂಗಡಿ ತೆರೆಯಲಾಗಿದೆ. ಇದೀಗ ಎಸ್‌ಸಿ, ಎಸ್‌ಟಿ ಸಮುದಾಯದವರಿಗಾಗಿಯೇ ಹೊಸದಾಗಿ 3,200 ನ್ಯಾಯಬೆಲೆ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಈ ಹಿಂದೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳ ರದ್ದು ಕಾರ್ಯ ಕೈಗೊಂಡ ವೇಳೆ ರಾಜ್ಯಾದ್ಯಂತ ವಿರೋಧಗಳು ವ್ಯಕ್ತವಾದವು. ಯಾಕಂದದ್ರೆ ಆಗ ಪರಿಶೀಲನೆ ಇಲ್ಲದೆ, ಈ ಕಾರ್ಯವನ್ನು ಮಾಡಿತ್ತು. ಆದ್ದರಿಂದ ಅನರ್ಹ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಹಲವಾರು ಜಿಲ್ಲೆಗಳಲ್ಲಿ ಈ ಕರಿತು ಜನರು ಪ್ರತಿಭಟನೆ ನಡೆಸಿ ಸರ್ಕಾರದ ಈ ನಡೆಗೆ ಕೆಂಡಕಾರಿದ ಘಟನೆಗಳು ನಡೆದವು. ಬಳಿಕ ಸರ್ಕಾರ ಈ ಕಾರ್ಯವನ್ನು ನಿಲ್ಲಿಸಿತ್ತು.
ಆದರೆ, ಬಳಿಕ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಪರಿಶೀಲನೆ ನಡೆಸುವ ಮೂಲಕ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳ ರದ್ದು ಕಾರ್ಯ ಮುಂದುವರೆಸಿದೆ. ಅಲ್ಲದೆ, ಯಾರೆಲ್ಲಾ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳು ರದ್ದಾಗಿವೆಯೋ ಅಂತಹವರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು ಅಥವಾ ನಿಮ್ಮ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಬಳಿಕ ಒಂದು ವೇಳೆ ನೀವು ಅರ್ಹರೆಂದು ಸಾಬೀತಾದ್ರೆ, ಮಾತ್ರ ಬಿಪಿಎಲ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಇಲ್ಲದಿದ್ದರೆ, ಎಪಿಎಲ್‌ನಲ್ಲೇ ಮುಂದುವರೆಸಲಾಗುತ್ತದೆ ಎಂದು ತಿಳಿಸಿತ್ತು.












Click it and Unblock the Notifications