ಸರ್ಕಾರದಿಂದ 84 ಸಾವಿರ ರೆಮಿಡಿಸ್ವಿರ್ ಖರೀದಿ: ಸುಧಾಕರ್
ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಏಪ್ರಿಲ್ 18 ರಂದು ನಡೆಯಲಿರುವ ಸರ್ವಪಕ್ಷಗಳ ಸಭೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಧಾರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
Recommended Video
ಕೊರೊನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸಭೆ ನಡೆದ ಬಳಿಕ, ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಏಪ್ರಿಲ್ 18 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆಯಾಗಲಿದೆ. ನಂತರ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಲಹೆಯನ್ನೂ ಸರ್ಕಾರ ಪಡೆಯಲಿದೆ ಎಂದರು.
ರಾಜ್ಯದಲ್ಲಿ ಕೊರೊನಾಗೆ ಬೇಕಾದ ಔಷಧ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. 84 ಸಾವಿರ ರೆಮಿಡಿಸ್ವಿರ್ ಔಷಧ ಖರೀದಿಗೆ ಟೆಂಡರ್ ಕರೆಯಲಾಗಿದೆ. ಆಮ್ಲಜನಕ ಕೊರತೆಯಾಗದಂತೆ ಈಗಾಗಲೇ ಘಟಕಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಕ್ಕೆ ಟೆಂಡರ್ ಕರೆದಿದ್ದು, ಜಿಲ್ಲಾ ಮಟ್ಟದಲ್ಲೂ ಆಕ್ಸಿಜನ್ ಘಟಕ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಶೇ.95 ರಷ್ಟು ಮಂದಿಗೆ ಕಡಿಮೆ ಲಕ್ಷಣ
ಎರಡನೇ ಅಲೆಯ ಸಂದರ್ಭದಲ್ಲಿ ಶೇ.95 ರಷ್ಟು ಮಂದಿಗೆ ಕಡಿಮೆ ಲಕ್ಷಣ ಇರುತ್ತದೆ. ಶೇ.5 ರಷ್ಟು ರೋಗಿಗಳಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಕಿರುತ್ತದೆ. ಆದ್ದರಿಂದ ಸೋಂಕಿನ ತೀವ್ರ ಸ್ವರೂಪದ ಲಕ್ಷಣ ಇದ್ದವರು ಮಾತ್ರ ಆಸ್ಪತ್ರೆಗೆ ಬರಬೇಕು. ಪ್ರತ್ಯೇಕವಾಗಿರಲು ವ್ಯವಸ್ಥೆ ಮಾಡಲು ಖಾಸಗಿ ಆಸ್ಪತ್ರೆಗಳು ಹೋಟೆಲ್ ಗಳ ಸಹಯೋಗದಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೋವಿಡ್ ಪರೀಕ್ಷೆ ವರದಿ,24 ಗಂಟೆ ನಿಗದಿ
ಕೋವಿಡ್ ಪರೀಕ್ಷೆ ವರದಿ ಬಹಳ ತಡವಾಗಿ ದೊರೆಯುತ್ತಿರುವುದು ತಿಳಿದಿದೆ. ವರದಿಯನ್ನು 24 ಗಂಟೆಯೊಳಗೆ ನೀಡಬೇಕೆಂದು ಸೂಚಿಸಲಾಗಿದೆ. ಅನಗತ್ಯವಾಗಿ ಗುಂಪು ಸೇರುವುದಕ್ಕೆ ಈಗಾಗಲೇ ಕಡಿವಾಣ ಹಾಕಲಾಗಿದೆ ಎಂದರು.
ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆ ಮೀಸಲಿಸಲಾಗಿದೆ. ಹಾಸಿಗೆ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಬಿಬಿಎಂಪಿಯಲ್ಲಿ ಪ್ರತಿ ವಾರ್ಡ್ ಗೆ ತಲಾ ಒಂದರಂತೆ ಆಂಬ್ಯುಲೆನ್ಸ್ ನಿಯೋಜಿಸಲಾಗಿದೆ. ಐಸೋಲೇಷನ್ ನಲ್ಲಿರುವವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

ಕ್ವಾರಂಟೈನ್‌ನಲ್ಲಿರುವವರ ಕೈಗೆ ಮುದ್ರೆ
ಕ್ವಾರಂಟೈನ್‌ನಲ್ಲಿರುವವರ ಕೈಗೆ ಮುದ್ರೆ ಹಾಕಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಹೆಚ್ಚುವರಿ ಆರೋಗ್ಯ ಸಿಬ್ಬಂದಿಯನ್ನು ತಾತ್ಕಾಲಿಕ ನೇಮಕ ಮಾಡಲಾಗುತ್ತಿದೆ. ಫ್ರಂಟ್ ಲೈನ್ ವಾರಿಯರ್ಸ್ ಗಾಗಿ ನೇರ ನೇಮಕಾತಿ ಮಾಡಲಾಗುತ್ತಿದೆ. 6 ತಿಂಗಳ ಮಟ್ಟಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.
ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ. ಸೋಂಕಿತರ ಅಂತ್ಯಕ್ರಿಯೆಗೆ ಹಣ ಪಡೆಯುವಂತಿಲ್ಲ. ಉಚಿತ 49 ಶ್ರದ್ಧಾಂಜಲಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಭೆಯ ಇತರೆ ಅಂಶಗಳು
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ1,000, ಸರ್ಕಾರಿ ಆಸ್ಪತ್ರೆಗಳಲ್ಲಿ 1,000, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆ ಕೋವಿಡ್‌ಗೆ ಮೀಸಲು ಇಡಲಾಗಿದೆ.
5,000 ಆಕ್ಸಿಜನ್ ಸಿಲಿಂಡರ್ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕಂಟೈನ್ಮೆಂಟ್ ಮತ್ತು ಮೈಕ್ರೋ ಕಂಟೈನ್ಮೆಂಟ್ ವಲಯ ನಿಯಮ ಕಟ್ಟುನಿಟ್ಟಾಗಿ ಜಾರಿ.
108 ಸೇರಿದಂತೆ ಅಗತ್ಯ ಆಂಬ್ಯುಲೆನ್ಸ್ ಗಳನ್ನು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೆಂದ್ರಗಳಲ್ಲಿ ಲಭ್ಯವಾಗಿಸುವುದು, ಬೆಂಗಳೂರು ನಗರದಲ್ಲಿ ಒಟ್ಟಾರೆಯಾಗಿ 400 ಆಂಬ್ಯುಲೆನ್ಸ್ ನಿಗದಿ ಮಾಡಲಾಗಿದೆ ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications