ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 11ರಂದು ಬೆಂಗಳೂರಿಗೆ ಬರಲಿದೆ ಮೊದಲ ಆಕ್ಸಿಜನ್ ಎಕ್ಸ್‌ಪ್ರೆಸ್

|
Google Oneindia Kannada News

ಬೆಂಗಳೂರು, ಮೇ 10; ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು 'ಆಕ್ಸಿಜನ್ ಎಕ್ಸ್‌ಪ್ರೆಸ್' ರೈಲು ಸೇವೆಯನ್ನು ಆರಂಭಿಸಿದೆ. ಕರ್ನಾಟಕಕ್ಕೆ ಮೊದಲ ರೈಲು ಮೇ 11ರ ಮಂಗಳವಾರ ಆಗಮಿಸಲಿದೆ.

ಸುಮಾರು 120 ಟನ್ ಆಕ್ಸಿಜನ್ ಹೊತ್ತ 'ಆಕ್ಸಿಜನ್ ಎಕ್ಸ್‌ಪ್ರೆಸ್' ರೈಲು ಜೆಮ್‌ಶೆಡ್‌ಪುರ್‌ನಿಂದ ಸೋಮವಾರ ಹೊರಟಿದೆ. ಮಂಗಳವಾರ ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಈ ರೈಲು ಬಂದು ತಲುಪಲಿದೆ.

ಉಚಿತವಾಗಿ ಆಕ್ಸಿಜನ್ ಕಾನ್ಸ್‌ನ್‌ಟ್ರೇಟರ್ ಮನೆಗೆ ತರಲಿದೆ ಓಲಾ ಉಚಿತವಾಗಿ ಆಕ್ಸಿಜನ್ ಕಾನ್ಸ್‌ನ್‌ಟ್ರೇಟರ್ ಮನೆಗೆ ತರಲಿದೆ ಓಲಾ

ಕರ್ನಾಟಕದಲ್ಲಿ ಭಾನುವಾರ 47,930 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 490 ಜನರು ಮೃತಪಟ್ಟಿದ್ದಾರೆ. ರಾಜ್ಯದ ಪ್ರತಿನಿತ್ಯದ ಆಕ್ಸಿಜನ್ ಕೋಟಾವನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಜಿಂದಾಲ್ ನೇತೃತ್ವದಲ್ಲಿ 1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಜಿಂದಾಲ್ ನೇತೃತ್ವದಲ್ಲಿ 1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ

Karnataka To Receive First Oxygen Express Train On May 11

ಗುಜರಾತ್‌ನಿಂದ ಸೋಮವಾರ ಹೊರಡುವ ಮತ್ತೊಂದು ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ದೆಹಲಿ ತಲುಪಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಘೋಯೆಲ್ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಪೂರೈಕೆ; ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ ಆಕ್ಸಿಜನ್ ಪೂರೈಕೆ; ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ

ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಭಾರತೀಯ ರೈಲ್ವೆ ಇದುವರೆಗೂ 4,200 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್‌ ಅನ್ನು 268 ಟ್ಯಾಂಕರ್‌ಗಳ ಮೂಲಕ ದೇಶಾದ್ಯಂತ ಸಾಗಣೆ ಮಾಡಿದೆ.

ಭಾರತೀಯ ರೈಲ್ವೆ ನೀಡಿರುವ ಮಾಹಿತಿಯಂತೆ 68 ರೈಲುಗಳು ಇದುವರೆಗೂ ಪ್ರಯಾಣವನ್ನು ಪೂರ್ಣಗೊಳಿಸಿವೆ. ಮಹಾರಾಷ್ಟ್ರಕ್ಕೆ 293 ಮೆಟ್ರಿಕ್ ಟನ್, ಉತ್ತರ ಪ್ರದೇಶಕ್ಕೆ 1230 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.

Recommended Video

18-44 ವಯಸ್ಸಿನವರು ಲಸಿಕೆಗೆ ಆನ್‌ಲೈನ್‌ಲ್ಲಿ ನೋಂದಣಿ ಮಾಡದಿದ್ದರೆ ಲಸಿಕಾ ಕೇಂದ್ರಕ್ಕೆ ತೆರಳಲು ಅನುಮತಿ ಇಲ್ಲಾ... | Oneindia Kannada

ಮಧ್ಯಪ್ರದೇಶಕ್ಕೆ 271 ಮೆಟ್ರಿಕ್ ಟನ್, ಹರ್ಯಾಣಕ್ಕೆ 555 ಮೆಟ್ರಿಕ್ ಟನ್, ತೆಲಂಗಾಣಕ್ಕೆ 123 ಮೆಟ್ರಿಕ್ ಟನ್, ದೆಹಲಿಗೆ 1679 ಮತ್ತು ತೆಲಂಗಾಣಕ್ಕೆ 40 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.

English summary
Karnataka to receive its first Oxygen Express train on May 11. Indian Railways said that train carrying six cryogenic containers a total of 120 tonnes of life-saving gas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X