ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.18ರ ತನಕ ಕರ್ನಾಟಕದ ಹಲವೆಡೆ ಮಳೆ, ಹವಾಮಾನ ವರದಿ

|
Google Oneindia Kannada News

ಬೆಂಗಳೂರು, ನ. 15: ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಮುಂದುವರೆಯಲಿದ್ದು, ನವೆಂಬರ್ 18ರ ತನಕ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಯಂತ್ರಣ ಮಂಡಳಿ(KSNMDC) ಹೇಳಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಮಳೆ ನಿರೀಕ್ಷಿಸಬಹುದು. ನ.18ರ ತನಕ ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದ್ದು, ಈ ಎರಡು ರಾಜ್ಯಗಳಿಗೆ ಹೊಂದಿಕೊಂಡಂತೆ ಇರುವ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಹಾಸನ, ಸಕಲೇಶಪುರ, ಆಲೂರು, ಬೇಲೂರು ಮಳೆ ವರದಿಹಾಸನ, ಸಕಲೇಶಪುರ, ಆಲೂರು, ಬೇಲೂರು ಮಳೆ ವರದಿ

ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Karnataka to receive moderate rains in coastal region: KSNDMC

ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

Recommended Video

ದೀಪಾವಳಿ ಸಮಯದಲ್ಲಿ ಮೋದಿ ಮಾಡಿದ್ದಾದರೂ ಏನು? | Oneindia Kannada

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

English summary
The Karnataka State Natural Disaster Monitoring Centre (KSNDMC) has predicted isolated to scattered light to moderate rains in coastal and Malnad region of Karnataka till Sunday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X