ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಆಗಾಗ ಮಹತ್ವದ ಮಾಹಿತಿಯನ್ನು ನೀಡುತ್ತಲಿರುತ್ತದೆ. ಇದೀಗ ನೇಮಕಾತಿ ಕುರಿತು ಅಪ್ಡೇಟ್ ಮಾಹಿತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿದ್ದಾರೆ. ಹಾಗಾದ್ರೆ ಎಷ್ಟು ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಮಕ್ಕಳು ಸೇರಿದಂತೆ ಶಿಕ್ಷಕರಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತಾರೆ. ಹಾಗೆಯೇ, ಇದೀಗ ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.

ರಾಜ್ಯದಲ್ಲಿ 18,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆಯನ್ನು ಇಟ್ಟುಕೊಳ್ಳಲಾಗಿತ್ತು. ಇದರ ಅಂಗವಾಗಿ ಅವರು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಈ ವಿಭಾಗದಲ್ಲಿ 5,000 ಶಿಕ್ಷಕರ ನೇಮಕಾತಿ: ಕಲಬುರಗಿ ಭಾಗದಲ್ಲಿ 5,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್‌ಸಿ ಶಾಲೆಗಳನ್ನು ಪ್ರಾರಂಭ ಮಾಡಲಾಗಿದೆ. 5,000 ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಮಕ್ಕಳ ಹಾಜರಾತಿ ಹೆಚ್ಚಿಸಲು ಮಹತ್ವದ ನಿರ್ಧಾರ: 1,000ಕ್ಕೂ ಅಧಿಕ ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು 4,000ಕ್ಕೆ ಹೆಚ್ಚಳ ಮಾಡಲಾಗಿದೆ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ಅನುಮೋದನೆ ನೀಡಲಾಗಿದೆ. 6 ದಿನಗಳ ಕಾಲ ಮಕ್ಕಳ ಹಾಜರಾತಿ ಶಾಲೆಗಳಲ್ಲಿ ಹೆಚ್ಚಿಸಲು ಮೊಟ್ಟೆ ಅಥವಾ ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳ ಮೂಲ ಸೌಕರ್ಯವನ್ನು ಕಲ್ಪಿಸಲಾಗುತ್ತಿದೆ ಎಂದರು. ಇದೇ ವೇಳೆ ಶಾಲಾ ಅವರು ಮಕ್ಕಳಿಂದ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಶುಭ ಕೋರಿದರು. ಹೀಗೆ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಸುಧಾರಣೆ ತರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಬೇಕು ಎನ್ನುವ ದೃಷ್ಟಿಯಿಂದ ಹೊಸ ಹೊಸ ಯೋಜನೆಗಳನ್ನು ರಾಜ್ಯದಲ್ಲಿ ತರಲಾಗುತ್ತಿದೆ.
ರಾಜ್ಯದಲ್ಲಿ ಬಹುತೇಕ ಶಾಲೆಗಳಲ್ಲಿ ಹಾಜರಾತಿ ಕಡಿಮೆ ಇರುವುದರಿಂದ ಅದನ್ನು ಹೆಚ್ಚಳ ಮಾಡಲು ಕೂಡ ರಾಜ್ಯ ಸರ್ಕಾರ ಇದೀಗ ಮಹತ್ವದ ಹೆಜ್ಜೆಯಿಟ್ಟಿದೆ. ಅಷ್ಟೇ ಅಲ್ಲದೆ, ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು ಕೂಡ ಈಗಾಗಲೇ ಹಚ್ಚಳ ಮಾಡಿದೆ. ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವ ಆದಾಗಿನಿಂದಲೂ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಹಲವು ರೀತಿಯಲ್ಲಿ ಪ್ರಯತ್ನಗಳನ್ನು ಮಾಡುತ್ತಲಿದ್ದಾರೆ. ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಈ ಪ್ರಯತ್ನಗಳನ್ನು ಮಾಡುತ್ತಲಿದ್ದಾರೆ. ಅದರಲ್ಲೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳುತ್ತಿದ್ದಾರೆ.












Click it and Unblock the Notifications