ರಾಜ್ಯದಲ್ಲಿ 7 ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒಪ್ಪಿಗೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 31 : ಕರ್ನಾಟಕದಲ್ಲಿ ನೂತನವಾಗಿ 7 ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಯಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ಕಾಲೇಜುಗಳನ್ನು ಆರಂಭ ಮಾಡಲು ಒಪ್ಪಿಗೆ ನೀಡಲಾಗಿದೆ.

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಏಳು ಕಾಲೇಜುಗಳನ್ನು ಸ್ಥಾಪನೆ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.[ವೈದ್ಯಕೀಯ ಶಿಕ್ಷಣದಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ]

Karnataka to set up 7 paramedical colleges

ಬೆಂಗಳೂರು, ಮಂಗಳೂರು, ಉಡುಪಿ ಮತ್ತು ಹಾನಗಲ್ ಸೇರಿದಂತೆ ಏಳು ಕಡೆ ಪ್ಯಾರಾ ಮೆಡಿಕಲ್ ಕಾಲೇಜುಗಳು ಸ್ಥಾಪನೆಯಾಗಲಿವೆ. ಅಂದಹಾಗೆ ದೇಶದಲ್ಲೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ರಾಜ್ಯದಲ್ಲಿ 53 ಕಾಲೇಜುಗಳಿದ್ದು, 7,355 ಸೀಟುಗಳಿವೆ.[ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ದುಬಾರಿ]

ಶೀಘ್ರದಲ್ಲೇ ಚಾಮರಾಜನಗರ, ಕೊಡಗು, ಕಾರವಾರ ವೈದ್ಯಕೀಯ ಕಾಲೇಜುಗಳು ಕಾರ್ಯಾರಂಭ ಮಾಡಲಿದ್ದು, ಇನ್ನೂ 150 ಸೀಟುಗಳು ಲಭ್ಯವಾಗಲಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕೆ ಬಂದ ಬಳಿಕ 6 ಮೆಡಿಕಲ್ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗಿದೆ.

ಯಾವ ರಾಜ್ಯದಲ್ಲಿ ಎಷ್ಟು ಮೆಡಿಕಲ್ ಸೀಟುಗಳಿವೆ

* ಆಂಧ್ರಪ್ರದೇಶ 7,150
* ಮಹಾರಾಷ್ಟ್ರ 6,595
* ತಮಿಳುನಾಡು 6,115

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka government has decided to set up 7 Paramedical colleges.
Please Wait while comments are loading...