ಕರ್ನಾಟಕ ಬ್ಯಾಕ್‌ಲಾಗ್ ಹುದ್ದೆಗಳಿಗೆ ಜೀವ; ವಿಶ್ವವಿದ್ಯಾಲಯ ಸೇರಿ ಪ್ರಮುಖ ಇಲಾಖೆಗಳಲ್ಲಿ ನೇಮಕಾತಿ: ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯ ಸರ್ಕಾರ 72,000 ಖಾಲಿ ಹುದ್ದೆಗಳ ಭರ್ತಿ ಘೋಷಣೆ ಬೆನ್ನಲ್ಲೆ ಮತ್ತೊಂದು ಗುಡ್‌ನ್ಯೂಸ್ ನೀಡಿದೆ. ಕರ್ನಾಟಕದಲ್ಲಿನ ವಿಶ್ವವಿದ್ಯಾಲಯಗಳು ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ‌ನ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಮಂಗಳವಾರ ಹೇಳಿದರು‌.

ಇಂದು ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ವಿವಿಧ ದಲಿತಪರ ಸಂಘಟನೆಗಳ‌ ಮುಖಂಡರೊಂದಿಗೆ ಸಭೆ ನಡೆಸಿದರು. ನಂತರ ಬಳಿಕ ಸುದ್ದಿಗಾರ ಜತೆಗೆ ಮಾತನಾಡಿದ ಅವರು, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಜ್ಯ ಕಾಂಗ್ರೆಸ್ ಸರ್ಕಾರ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದರಲ್ಲಿ ಕಾನೂನಾತ್ಮಕವಾಗಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಮೀಸಲಾತಿ ಸಿಗುತ್ತದೆ.

Backlog Vacancies

ಇಷ್ಟು ಮಾತ್ರವಲ್ಲದೇ ನಿಗದಿತ ಹುದ್ದೆಗಳನ್ನು ತುಂಬಿಲ್ಲ. ವಿಶ್ವವಿದ್ಯಾಲಯ ಮತ್ತು ಪ್ರಮುಖವಾದ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು ಎಂದು ಡಿಸಿಎಂ‌‌ ಜಿ.ಪರಮೇಶ್ವರ ತಿಳಿಸಿದರು.

ಪಿಟಿಸಿಎಲ್ ಕಾಯ್ದೆಗೆ ಬಹಳ ವರ್ಷಗಳ ನಂತರ ತಿದ್ದುಪಡಿ ತರಲಾಗಿದೆ. ಪ್ರಾವಿಷನ್ ಡಿ ತೆಗೆಯಬೇಕು ಎಂದು ಒತ್ತಾಯ ಪರಿಗಣಿಸಿ ಸರ್ಕಾರ ತೆಗೆದಿದೆ. ಆದರೂ ಕೂಡ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ. ಸರಿಯಾದ ರೀತಿಯಲ್ಲಿ ಅನುಷ್ಠಾನ ಆಗುತ್ತಿಲ್ಲ. ಈ ಬಗ್ಗೆ ಶೀಘ್ರವೇ ತ್ವರಿತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆಗಳಿಂದ ದಲಿತ ಸಮುದಾಯಕ್ಕೆ ಅನುಕೂಲ ಆಗುತ್ತಿಲ್ಲ ಎಂಬುದನ್ನು ದಲಿತ ಸಂಘಟನೆಗಳು ತಮನಕ್ಕೆ ತಂದಿದ್ದಾರೆ. ಯಾವ ಜಿಲ್ಲೆ, ಯಾವ ತಾಲ್ಲೂಕಿನಲ್ಲಿ ದಲಿತ ಸಮುದಾಯದ ಮಹಿಳೆಯರಿಗೆ ಅನ್ಯಾಯವಾಗಿದೆ. ಅವರಿಗೆ ಈ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ ಎಂಬುದರ ವರದಿ ತರಿಸಿಕೊಳ್ಳುತ್ತೇವೆ. ವರದಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಗ್ಯಾರಂಟಿ ಯೋಜನೆಯಲ್ಲಿ ದಲಿತ ಸಮುದಾಯದ ಹೆಣ್ಣುಮಕ್ಕಳನ್ನು ಕೈಬಿಟ್ಟಿದ್ದೇ ಆದಲ್ಲಿ ಅದನ್ನು ಸರಿಪಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ವಿದ್ಯಾರ್ಥಿಗಳ ಸ್ಕಾಲರ್ ‌ಶಿಪ್ ಸಾಗುತ್ತಿಲ್ಲ

ವಿದ್ಯಾರ್ಥಿಗಳ ಸ್ಕಾಲರ್ ‌ಶಿಪ್ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ. ಅಲ್ಲದೆ, ಅದು ಸಾಕಾಗುತ್ತಿಲ್ಲ ಎಂದಿದ್ದಾರೆ. ಈ ಬಗ್ಗೆ ಪರಿಶೀಲನೆ‌ ನಡೆಸಲಾಗುವುದು.‌ ಪೋಸ್ಟ್ ಮೆಟ್ರಿಕ್‌ ವಿದ್ಯಾರ್ಥಿಗಳಿಗೆ ರೂ. 1800 ಸ್ಕಾಲರ್‌ಶಿಪ್ ಕೊಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ₹3000 ಖರ್ಚಾಗುತ್ತಿದೆ. ಹೇಗೆ ನಿಭಾಯಿಸಬೇಕು ಎಂಬ ಪ್ರಶ್ನೆ ಬಂದಿದೆ. ಸರ್ಕಾರ ನೀಡುವ ಸ್ಕಾಲರ್‌ಶಿಪ್ ಸಾಕಾಗುತ್ತಿಲ್ಲ‌ ಎಂಬುದನ್ನು ತಿಳಿಸಿದ್ದಾರೆ. ಈ ಕುರಿತಂತೆ ಸಿಎಂ ಅವರೊಂದಿಗೆ ಚರ್ಚಿಸಲಾಗುವುದು‌. ಮುಂದಿನ ಬಜೆಟ್‌ನಲ್ಲಿ ಸ್ಕಾಲರ್‌ಶಿಪ್ ಹಣ ಹೆಚ್ಚಳ ಕುರಿತು ಡಿಸಿಎಂ ಭರವಸೆ ನೀಡಿದರು.

ಎಸ್‌ಸಿಪಿ, ಟಿಎಸ್‌ಪಿ ಬೇರೆಬೇರೆ ಇಲಾಖೆಗೆ ನೀಡಲಾಗಿದೆ. ಹಿಂದೆ ಇದ್ದ ಏಕಗವಾಕ್ಷಿ ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಸಮಾಜ ಖ್ಯಾಣ ಇಲಾಖೆಗೆ ಜವಾಬ್ದಾರಿ ನೀಡಬೇಕು ಎಂಬುದನ್ನು ಪ್ರಸ್ತಾಪಿಸಿದ್ದಾರೆ. ಬೇರೆಬೇರೆ ಇಲಾಖೆಗಳಿಗೆ ನೀಡಿರುವುದನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದಾರೆ ಎಂದರು.

ಕೆಐಎಡಿಬಿ ಭೂಮಿ ಹಂಚಿಕೆಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಸರಿಯಾಗಿ ಭೂಮಿ ಹಂಚಿಕೆಯಾಗುತ್ತಿಲ್ಲ. ಲೇಔಟ್‌ಗಳಲ್ಲಿ ದಲಿತರಿಗೆ ಅವಕಾಶ ಆಗುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಿದ್ದಾರೆ. ಇದನ್ನು ಸರಿಪಡಿಸಲಾಗುವುದು. ಕೆಎಸ್‌ಎಫ್‌ಸಿ ಕೈಗಾರಿಕೆಗೆ ಸಾಲ ನೀಡುವುದನ್ನು ನಿಲ್ಲಿಸಿದ್ದು, ಅದನ್ನು ಪುನಾರಂಭಿಸಲಾಗುವುದು ಎಂದು ತಿಳಿಸಿದರು.

ಎಸ್‌ಐಟಿ ರಚನೆ

ಆರ್ಟ್ ಆಫ್ ಲೀವಿಂಗ್‌‌ನ ಶ್ರೀ ರವಿಶಂಕರ್ ಗುರೂಜಿ ರವರ ಅಧೀನದಲ್ಲಿ 270 ಎಕರೆ ಭೂಮಿ ಇದೆ. ಅದರಲ್ಲಿ 150 ಎಕರೆ ಭೂಮಿ ಎಸ್‌ಸಿ, ಎಸ್‌ಟಿ ಜನರಿಗೆ ಸೇರಿದ ಭೂಮಿ ಆಗಿದೆ ಎಂಬುದನ್ನು ಸಭೆಯಲ್ಲಿ ಪ್ರಸ್ತಾಪಿಸಿರು. ಈ ಬಗ್ಗೆ ಹಿಂದೆಯೂ ಅನೇಕ ದೂರುಗಳು ಬಂದಿದ್ದವು. ಆ ದೂರುಗಳನ್ನು ಆಧರಿಸಿ ಪರಿಶೀಲಿಸಲು, ಕಂದಾಯ ಇಲಾಖೆಯಲ್ಲಿ ಎಸ್‌ಐಟಿ ರಚಿಸಲಾಗಿದೆ. ಎಸ್‌ಸಿ, ಎಸ್‌ಟಿಗೆ ಸೇರಿದ 150 ಎಕರೆ ಜಮೀನು ತೆಗೆದುಕೊಂಡಿದ್ದಾರೆ ಎಂಬುದನ್ನು ಎಸ್‌ಐಟಿ ಪರಿಶೀಲನೆ ಮಾಡಲಿದೆ. ಕಂದಾಯ ಇಲಾಖೆಯ ಬೆಂಗಳೂರು ವಿಭಾಗ ಆಯುಕ್ತರಾದ ಆದಿತ್ಯ ಆಮ್ಲ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿದೆ‌ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಅಂಗವಿಕಲರ ಕ್ರಿಕೆಟ್‌ನಲ್ಲಿ ವರ್ಲ್ಡ್‌ ಚಾಂಪಿಯನ್ ಆಗಿರುವ ನೀಲವ್ವ ನಿಂಗವ್ವ ಹರಿಜನ ಅವರು ಶೆಡ್‌ನಲ್ಲಿ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಕಳೆದ ವರ್ಷ 5 ಲಕ್ಷ ರೂ. ನೀಡಿದೆ. ಅವರಿಗೆ ಹೌಸಿಂಗ್ ಬೋರ್ಡ್‌ನಿಂದ ಶೀಘ್ರ ನಿವೇಶನ ನೀಡಲಾಗುವುದು. ಆರ್ಟ್ ಆಫ್‌ ಲೀವಿಂಗ್ ಅಧೀನದಲ್ಲಿದೆ ಎನ್ನಲಾದ ಎಸ್‌ಸಿ, ಎಸ್‌ಟಿ ಸಮುದಾಯದ 150 ಎಕರೆ ಭೂಮಿ ಬಗ್ಗೆ ಎಸ್‌ಐಟಿಯವರು ಪರಿಶೀಲಿಸಲಿದ್ದಾರೆ. ತದನಂತರ ಸತ್ಯಾಂಶ‌ ಏನೆಂಬುದು ಗೊತ್ತಾಗಲಿದೆ. ಇದರಲ್ಲಿ ಯಾರು ಸರಿ ಇಲ್ಲ, ಯಾರು ಸರಿ ಇದ್ದಾರೆ ಎಂಬುದು ಹೊರಬರುತ್ತದೆ. ಸಭೆಯಲ್ಲಿ ಪ್ರಸ್ತಾಪ ಆಯಿತು.‌ ಕಾಕತಾಳೀಯ ಎಂಬಂತೆ ಇವತ್ತು ಎಸ್‌ಐಟಿ ರಚಿಸಿರುವ ಬಗ್ಗೆ ಆದೇಶವಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ವಲಸಿಗರಿಗೆ ಯಾವುದೇ ಸೌಲಭ್ಯ ಸಿಗುವುದಿಲ್ಲ

ಜಾತಿ ಪ್ರಮಾಣಪತ್ರ ನೀಡಲು 21 ದಿನ ಸಮಯ ನೀಡಲಾಗಿದೆ. ಇದು ವಿಳಂಬವಾಗುವುದಿಲ್ಲ. ಜಾತಿ ಪ್ರಮಾಣ ಪತ್ರ ನೀಡಿದರೆ, ಉದ್ಯೋಗ, ಶಿಕ್ಷಣಕ್ಕೆ ಬಳಸಲು ಅನುಕೂಲವಾಗಲಿದೆ. ಬಿಜೆಪಿಯವರು‌ ಸದನ ಒಳಗೆ ಮತ್ತು ಹೊರಗೆ ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಹತ್ತಾರು ಬಾರಿ ಪ್ರಶ್ನೆ ಎತ್ತಿದ್ದಾರೆ. ಪಿಆರ್‌ಸಿ ನೀಡುವುದರಿಂದ ಅಕ್ರಮ ವಲಸಿಗರನ್ನು ಹೊರ ಹಾಕಲು ಉಪಯೋಗ ಆಗುತ್ತದೆ‌ ಎಂದು ಅವರು ತಿಳಿಸಿದರು.

ಅಕ್ರಮ ವಲಸಿಗರಿಗೆ ಯಾವುದೇ ರೀತಿಯ ಸವಲತ್ತುಗಳು ಸಿಗುವುದಿಲ್ಲ. ನಾವು ಓದುವಾಗ ರಾಜ್ಯ ಸರ್ಕಾರ ಹಲವು ಸರ್ಟಿಫಿಕೇಟ್‌ಗಳನ್ನು ಕೊಟ್ಟಿದೆ. ಈಗಲೂ ತಹಶೀಲ್ದಾರ್ ಅವರೇ ಜಾತಿ ಪ್ರಮಾಣ ಪತ್ರ ನೀಡುತ್ತಿದ್ದಾರೆ. ಸಿಟಿಜನ್‌ಶಿಪ್ ನೀಡುವುದಕ್ಕೂ ಮತ್ತು ನಿವಾಸ ಪ್ರಮಾಣಪತ್ರ ನೀಡುವುದಕ್ಕು ಬಹಳ ವ್ಯತ್ಯಾಸವಿದೆ. ನಾಗರಿಕತ್ವ ಪ್ರಮಾಣಪತ್ರ ಕೇಂದ್ರ ಸರ್ಕಾರ ನೀಡುತ್ತದೆ. ಪಿಆರ್‌ಸಿ ನೀಡುವುದರಲ್ಲಿ ಯಾವುದೇ ರೀತಿಯ ದುರುಪಯೋಗ ಆಗಬಾರದು ಎಂಬ ಕಾರಣಕ್ಕೆ ಮಾನದಂಡಗಳನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಶಿವಾಜಿನಗರದಲ್ಲಿ ತೆರವಿಗೆ ಹೋದ ಅಧಿಕಾರಿಗಳಿಗೆ ಹಲ್ಲೆ ಮಾಡಿದ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಹಲ್ಲೆ ಯಾರೇ ಮಾಡಿರಲಿ. ಪೊಲೀಸರು ಕಾನೂನು ಪ್ರಕಾರ ಕೇಸ್ ದಾಖಲಿಸುತ್ತಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+