Monsoon: 15 ದಿನಗಳಲ್ಲಿ ಕೇಂದ್ರಕ್ಕೆ ಬರ ವರದಿ, ಬರಗಾಲ ಎದುರಿಸಲು ಯತೀಂದ್ರ 'ಟೀಂ ಕರ್ನಾಟಕ' ಕರೆ

ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ತೀವ್ರತೆ ಹೆಚ್ಚುತ್ತಲೇ ಇದ್ದು, ಬರ ಪರಿಸ್ಥಿತಿಯ ಬಗ್ಗೆ ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿ ಕೇಂದ್ರ ತಂಡಕ್ಕೆ ವಾಸ್ತವಾಂಶ ಮನವರಿಕೆ ಮಾಡಲಾಗುವುದು. ಬರ ಪರಿಸ್ಥಿತಿಯ ರಾಜ್ಯ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಭಾನುವಾರ ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗಿನ ವಿಡಿಯೋ ಸಂವಾದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Drought Report

ಈ ವೇಳೆ ಮಾತನಾಡಿದ ಅವರು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುವ ಜೊತೆಗೆ ಮಹತ್ವದ ಮಾಹಿತಿ ನೀಡಿದರು. ಗ್ರಾಮೀಣ ತಾಲ್ಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿ 1 ಕೋಟಿ ಹೆಚ್ಚುವರಿ ಅನುದಾನ ಘೋಷಣೆ ಮಾಡಲಾಗಿದೆ. ಇನ್ನೂ ಬೋಗಸ್ ಬೋರ್‌ವೆಲ್‌ಗೆ ಬ್ರೇಕ್ ಹಾಕುವ ಉದ್ದೇಶದಿಂದ ಹೊಸ ಬೋರ್‌ವೆಲ್‌ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು. ನಕಲಿ ಪ್ರಕರಣಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

Bengaluru Weather: ಬಿಸಿಲಿಗೆ ಬ್ರೇಕ್, ನಗರದಲ್ಲಿಂದು 60 ವಾರ್ಡ್‌ಗಳಲ್ಲಿ ಮಳೆ, 3ದಿನ ಮಳೆ ಮುಂದುವರಿಕೆ
Bengaluru Weather: ಬಿಸಿಲಿಗೆ ಬ್ರೇಕ್, ನಗರದಲ್ಲಿಂದು 60 ವಾರ್ಡ್‌ಗಳಲ್ಲಿ ಮಳೆ, 3ದಿನ ಮಳೆ ಮುಂದುವರಿಕೆ

ಸಣ್ಣ ಮತ್ತು ಅತಿ ಸಣ್ಣ ರೈತರ ಹಿತವೇ ಮುಖ್ಯ ಆದ್ಯತೆಯಾಗಿರಬೇಕು. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ವಿಶೇಷ ಗಮನ ನೀಡಿ, ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು 4ಜಿ ವಿನಾಯಿತಿ ನಿಡಲಾಗಿದೆ.

ಟೀಂ ಕರ್ನಾಟಕ (TEAM KARNATAKA) ಮನಸ್ಥಿತಿ: ಸಚಿವರ ಕರೆ

ಅಧಿಕಾರಿಗಳು ಕೇವಲ ಕಾಗದದ ವರದಿ ನೀಡದೆ, ಫೀಲ್ಡ್‌ಗಿಳಿದು ಆಡಳಿತಾತ್ಮಕ ಟೀಮ್‌ ವರ್ಕ್ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಆಗಿದೆ. ಜುಲೈ 18ರವರೆಗೆ ವಾಡಿಕೆಗಿಂತ ಒಟ್ಟಾರೆ ಶೇ. 39ರಷ್ಟು ಮಳೆ ಕಡಿಮೆ ದಾಖಲಾಗಿದೆ. 170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವವಾಗಿದ್ದು, ವಿಜಯನಗರ ಜಿಲ್ಲೆಯೊಂದರಲ್ಲೇ ಅತ್ಯಧಿಕ ಶೇ. 67ರಷ್ಟು ಮಳೆ ಕೊರತೆ ಉಂಟಾಗಿದೆ. ಬರ ನಿರ್ವಹಣೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ರೈತರನ್ನು, ಸಮಸ್ಯೆಗಳನ್ನು ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿದರು.

ಮುಂದುವರಿದು, ಮಲೆನಾಡು ಭಾಗದಲ್ಲಿ ಶೇ. 43ರಷ್ಟು, ಕರಾವಳಿ ಶೇ.35ರಷ್ಟು, ಉತ್ತರ ಒಳನಾಡು ಶೇ. 33 ಹಾಗೂ ದಕ್ಷಿಣ ಒಳನಾಡು ಶೇ. 31ರಷ್ಟು ಮಳೆ ಕೊರತೆ ಆಗಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮಾಹಿತಿ ನೀಡಿದೆ.

ಜಲಾಶಯಗಳ ಸ್ಥಿತಿ ಸಹ ಬದಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ. 40 ರಷ್ಟು ಮಾತ್ರ ನೀರು ಸಂಗ್ರಹವಿದೆ. ಸದ್ಯಕ್ಕೆ ಪ್ರಸ್ತುತ 359.98 ಟಿಎಂಸಿ, ಕಳೆದ ವರ್ಷ 681.83 ಟಿಎಂಸಿ ಇತ್ತು ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಕೇವಲ ಸರಾಸರಿ ಶೇ. 23 ರಷ್ಟು ಮಾತ್ರ ನೀರು ಸಂಗ್ರಹವಿದೆ. ಕಾವೇರಿ ಕಣಿವೆಯಲ್ಲಿ ಶೇ. 51 ಹಾಗೂ ಕೃಷ್ಣಾ ಕಣಿವೆಯಲ್ಲಿ ಶೇ. 48 ರಷ್ಟು ನೀರಿದೆ ಎಂದು ಅವರು ಬರಗಾಲದ ಭೀಕರತೆಯನ್ನು ಸಚಿವರು ವಿವರಿಸಿದರು.

ರೈತರು ಕಡಿಮೆ‌ ನೀರಿನ‌ ಬಳಕೆಯಾಗುವ ಬೆಳೆಗಳನ್ನು ಬೆಳೆಯುವ ಮೂಲಕ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಜೋಡಿಸಬೇಕು. ರೈತರ ಹಿತರಕ್ಷಣೆಗೆ ಸಕಲ ಸಿದ್ಧತೆಗಳನ್ನೂ ಮಾಡಲಾಗುವುದು.‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+