karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭೀಕರ ಚಳಿ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಚಳಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ವಾರದಿಂದ ಚಳಿಯ ಪ್ರಮಾಣ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಬೆಳ್ಳಂಬೆಳಿಗ್ಗೆ ವಿಪರೀತ ಚಳಿಗೆ ಜನರ ಮೈನಡುಗುತ್ತಿದೆ. ಮತ್ತೊಂದೆಡೆ ದಟ್ಟವಾದ ಮಂಜು ಕೂಡ ಆವರಿಸಿಕೊಳ್ಳುತ್ತಿದ್ದು, ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ.

ಸದ್ಯ ಇಡೀ ರಾಜ್ಯದಾದ್ಯಂತ ಭೀಕರ ಚಳಿ ಇದೆ. ಅಲ್ಲದೆ ಮಧ್ಯ ಕರ್ನಾಟಕದ ಹಲವೆಡೆ ತುಸು ಮಳೆಯಾಗುವ ಸಾಧ್ಯತೆಯೂ ಇದೆ. ಮುಂದಿನ 24 ಗಂಟೆಯಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಸುಕಿನಿಂದಲೇ ಭಾರಿ ಪ್ರಮಾಣದಲ್ಲಿ ಮಂಜು ಆವರಿಸಿಕೊಂಡು ಕಣ್ಣು ಬಿಟ್ಟರೆ ಎದುರುಗಡೆ ಇರುವ ವಾತಾವರಣ ಕೂಡ ಕಾಣಿಸದಷ್ಟು ದಟ್ಟವಾದ ಮಂಜು ಆವರಿಸುತ್ತಿದೆ. ಇದರಿಂದ ವಾಹನ ಚಾಲಕರು ಹಾಗೂ ಸವಾರರು ರಸ್ತೆ ಕಾಣದೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

Karnataka To Witness Severe Cold Wave And Heavy Fog Weather IMD Forecast

ಬೆಂಗಳೂರಿನಲ್ಲೂ ಬೆಳಿಗ್ಗೆಯಿಂದಲೇ ಮೋಡ ಹಾಗೂ ಮಂಜಿನ ವಾತಾವರಣ ಕಂಡು ಬಂದಿದೆ. ಅಲ್ಲದೆ ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಮುನ್ಸೂಚನೆಯೂ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಹೇಳಿದೆ.

ಮುಖ್ಯವಾಗಿ ರಾಜ್ಯದ ಮೈಸೂರು, ಧಾರವಾಡ, ಗದಗ ಮತ್ತು ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ರಾಮನಗರ, ತುಮಕೂರು, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕಳೆದ ಮೂರು ತಿಂಗಳಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆ ಸುರಿದು ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಸದ್ಯ ರಾಜ್ಯದಲ್ಲಿ ಶೀತಗಾಳಿ ಕೂಡ ಬೀಸುತ್ತಿದ್ದು, ಸಂಜೆಯಿಂದಲೇ ಚುಮುಚುಮು ಚಳಿ ಕಾಡುತ್ತಿದೆ. ಬೆಳಿಗ್ಗೆ ದಟ್ಟವಾದ ಮಂಜು ಆವರಿಸಿಕೊಂಡು ಕೆಲಸ ಕಾರ್ಯಗಳಿಗೆ ಹೋಗುವವರಿಗೂ ಸಮಸ್ಯೆಯಾಗಿದೆ.

Karnataka To Witness Severe Cold Wave And Heavy Fog Weather IMD Forecast

ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯ ಮುನ್ಸೂಚನೆ ಏನಿಲ್ಲ. ಆದರೆ ಇಂದಿನಿಂದ ಡಿಸೆಂಬರ್‌ 9ರವರೆಗೆ ರಾಜ್ಯದಾದ್ಯಂತ ಒಣಹವೆಯು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಕರ್ನಾಟಕದ ಒಳಭಾಗದ ಮೇಲೆ ಹೆಚ್ಚು ಸಾಧ್ಯತೆಯಿರುವ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ಕಂಡುಬರಲಿದೆ.

ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವುದರಿಂದ ಚಳಿ ಪ್ರಮಾಣ ಅಧಿಕವಾಗಿರಲಿದೆ. ಇನ್ನು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka To Witness Severe Cold Wave And Heavy Fog Weather IMD Forecast

ಬೆಂಗಳೂರು ನಗರ ಮತ್ತು ಸ್ಥಳೀಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ ಕಂಡು ಬರಲಿದೆ. ಇದರಿಂದ ಚಳಿಯ ಪ್ರಮಾಣ ಕೂಡ ಮಿತಿಮೀರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಸಮಯದಲ್ಲಿ ಮಂಜು ದಟ್ಟವಾಗಿ ಆವರಿಸಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್‌ ಹಾಗೂ 15 ಡಿಗ್ರಿ ಸೆಲ್ಸಿಯಸ್‌ವರೆಗೆ ಕಂಡುಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+